ಉಡುಪಿ‌ | ಸಮಾಜದ ತೊಡಕು ತೊಡೆಯುವ ವೇದಿಕೆ ರಂಗಭೂಮಿ: ದಿನೇಶ್ ಎಂ ಕೊಡವೂರು

Date:

Advertisements

ಸಮಾಜದ ತೊಡಕುಗಳನ್ನು ತೊಡೆದು ಹಾಕುವ ಕೆಲಸವನ್ನು ರಂಗಭೂಮಿ ಮಾಡುತ್ತದೆ ಎಂದು ಕಾರ್ಕಳ ಜ್ಞಾನಸುಧಾ ವಿದ್ಯಾಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಎಂ ಕೊಡವೂರು ಹೇಳಿದರು.

ಉಡುಪಿಯ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆ ವತಿಯಿಂದ ಭುಜಂಗ ಪಾರ್ಕ್ ಬಯಲು ರಂಗಮಂದಿರದಲ್ಲಿ ನಡೆಯುತ್ತಿರುವ ರಂಗಹಬ್ಬದ 2ನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾವುದೇ ಸಾಂಸ್ಕೃತಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಾಗ ಬದುಕು ಸಂಭ್ರಮದಿಂದ ಕೂಡಿರುತ್ತದೆ. ವೃತ್ತಿ, ಪ್ರವೃತ್ತಿ ಬೇರೆ ಬೇರೆಯಾಗಿರುತ್ತದೆ. ವೃತ್ತಿಗೆ ಹೆಚ್ಚು ಗಮನಕೊಡಬೇಕಾಗುತ್ತದೆ. ಆಗ ಪ್ರವೃತ್ತಿ ಹಿಂದಕ್ಕೆ ಸರಿಯುತ್ತದೆ. ಮಕ್ಕಳಲ್ಲಿ ಉತ್ತಮ ಅಭಿರುಚಿ ಬೆಳೆಸಲು ಪ್ರವೃತ್ತಿ ಅಗತ್ಯ ಎಂದು ಪ್ರತಿಪಾದಿಸಿದರು.

Advertisements

ಕಾಲ ಬದಲಾಗಿದೆ, ಮಕ್ಕಳು ಬದಲಾಗಿದ್ದಾರೆ. ಹಿಂದಿನಂತೆ ಇಲ್ಲ ಎಂಬ ಮಾತುಗಳಿವೆ. ಆದರೆ, ಬದಲಾಗಿದ್ದು, ಕಾಲ ಅಥವಾ ಮಕ್ಕಳು ಅಲ್ಲ. ಬದಲಾಗಿದ್ದು, ಹೆತ್ತವರ ಮನಸ್ಸು. ಇರುವ ಒಂದು ಅಥವಾ ಎರಡು ಮಕ್ಕಳೇ ಸಂಗೀತ, ಕರಾಟೆ, ಕ್ರೀಡೆ, ಕಲಿಕೆ ಎಲ್ಲದರಲ್ಲಿಯೂ ಮೊದಲ ಸ್ಥಾನದಲ್ಲಿರಬೇಕು ಎಂದು ಹೆತ್ತವರು ಬಯಸುತ್ತಿರುವುದೇ ಮಕ್ಕಳು ಹಿಂದಿನ ಕಾಲದಲ್ಲಿ ಇರುವಂತೆ ಈಗ ಇರಲು ಸಾಧ್ಯವಾಗದಂತೆ ಮಾಡಿದೆ, ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಕರು ಸಿಗಬೇಕು ಎಂದು ಎಲ್ಲರೂ ಬಯಸುತ್ತಾರೆ. ಆದರೆ, ತಮ್ಮ ಮಕ್ಕಳನ್ನು ಶಿಕ್ಷಕರನ್ನಾಗಿ ಮಾಡುತ್ತಿಲ್ಲ. ಡೆಡ್ ಕಂಪ್ಯೂಟರ್ ಮುಂದೆ ಕುಳಿತುಕೊಳ್ಳುವ ಕೆಲಸ ಬಯಸುತ್ತಿದ್ದಾರೆ ಎಂದು ಹೇಳಿದರು.

ರಂಗ ಕಲಾವಿದ ಸುಜಿತ್ ಎಸ್ ಶೆಟ್ಟಿ ಕಾಪು ಅವರಿಗೆ ರಂಗ ಸಾಧಕ ಸನ್ಮಾನ ನೀಡಿ ಗೌರವಿಸಲಾಯಿತು. ಉಡುಪಿ ನಗರಸಭೆ ಪರಿಸರ ಎಂಜಿನಿಯರ್ ಸ್ನೇಹಾ ಕೆ.ಎಸ್, ಉದ್ಯಮಿಗಳಾದ ಆನಂದ ಪಿ. ಸುವರ್ಣ, ವಿಠಲ್ ಮೈಂದನ್, ಪ್ರಭಾಕರ್ ಕುಂದರ್, ನಾಗರಾಜ್ ಸುವರ್ಣ, ಸುಮನಸಾ ಕೊಡವೂರು ಸಂಘಟನೆಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಉಪಾಧ್ಯಕ್ಷ ವಿನಯ್ ಕಲ್ಮಾಡಿ, ಕಾರ್ಯದರ್ಶಿ ಚಂದ್ರಕಾಂತ್ ಕುಂದರ್ ಉಪಸ್ಥಿತರಿದ್ದರು.

ಗೌರವಾಧ್ಯಕ್ಷ ಎಂ.ಎಸ್. ಭಟ್ ಸ್ವಾಗತಿಸಿದರು. ಸದಸ್ಯ ಪ್ರಥಮ್ ವಂದಿಸಿದರು. ಉಪಾಧ್ಯಕ್ಷ ಯೋಗೀಶ್ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು. ಸವದತ್ತಿ ರಂಗ ಆರಾಧನಾ ಸಾಂಸ್ಕೃತಿಕ ಸಂಘಟನೆಯಿಂದ ‘ದೇವಸೂರ’ ನಾಟಕ ಪ್ರದರ್ಶನಗೊಂಡಿತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X