ಗೃಹ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷತೆಯ ಪಿಎಫ್, ಇಎಸ್‌ಐ, ಪಿಂಚಣಿ, ವೈದ್ಯಕೀಯ ವಿಮೆ, ಮಾತೃತ್ವ ಸೌಲಭ್ಯ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆಯಿಂದ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ನಾಗಮ್ಮ, “ಗೃಹ ಕಾರ್ಮಿಕರಿಗೆ ವಸತಿ ಕಲ್ಪಿಸಿಬೇಕು. ಗೃಹ ಕಾರ್ಮಿಕರ ಯೋಗ್ಯ ಉದ್ಯೋಗಕ್ಕಾಗಿ ಐಎಲ್‌ಒಸಿ 189ನ್ನು ಸ್ಥಾಪಿಸಿಬೇಕು. ಗೃಹಕಾರ್ಮಿಕರಿಗೆ ರಾಷ್ಟ್ರೀಯ ಶಾಸನವನ್ನು ರೂಪಿಸಬೇಕು. ಪಸ್ತುತ ಸಾಲಿನ ಕನಿಷ್ಟ ವೇತನವನ್ನು ಪರಿಷ್ಕರಿಸಬೇಕು. ಸರ್ಕಾರದ ಸೌಲಭ್ಯ ಪಡೆಯಲು ಕಡ್ಡಾಯ ಮಾಡಿರುವ ಆಹಾರ ಪಡಿತರ ಚೀಟಿಯನ್ನು ಅಸಂಘಟಿತ ಕಾರ್ಮಿಕರಿಗೆ ಅನ್ವಯಿಸಬಾರದು” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಸಿದ್ದಲಿಂಗಯ್ಯ ರಚಿಸಿದ ತುರ್ತುಪರಿಸ್ಥಿತಿ ಸಂದರ್ಭದ ಕವಿತೆಗಳು ಇಂದಿಗೂ ಪ್ರಸ್ತುತ: ಅರದೇಶಹಳ್ಳಿ ವೆಂಕಟೇಶ್
“ಅಖಿಲ ಕರ್ನಾಟಕ ಗೃಹ ಕಾರ್ಮಿಕರ ವೃತ್ತಿ ಸಂಘಟನೆ, ಕರ್ನಾಟಕ ಗೃಹ ಕಾರ್ಮಿಕರ ಚಳುವಳಿ ಮತ್ತು ಸಿಎಫ್‌ಟಿಯುಐಗಳು ಒಂದಾಗಿ ಅಂತರಾಷ್ಟ್ರೀಯ ಗೃಹ ಕಾರ್ಮಿಕರ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದರ ಜತೆಗೆ ಗೃಹ ಕಾರ್ಮಿಕರಿಗೆ ಆಗುತ್ತಿರುವ ಶೋಷಣೆ ಮತ್ತು ಅನ್ಯಾಯದ ವಿರುದ್ಧ ಹೋರಾಡಿ ಗೃಹ ಕಾರ್ಮಿಕರಿಗೆ ನ್ಯಾಯ ದೊರಕಿಸುವುದು ನಮ್ಮ ಗುರಿ” ಎಂದು ಹೇಳಿದರು.
ಪ್ರತಿಭಟನೆ ವೇಳೆ ರಂಗಮ್ಮ, ಲಕ್ಷ್ಮಮ್ಮ, ಶಾರದಮ್ಮ, ಗಂಗಮ್ಮ ಸೇರಿದಂತೆ ಇತರ ಕಾರ್ಯಕರ್ತರು ಇದ್ದರು.