ಉತ್ತರ ಪ್ರದೇಶ | ದೇಶದ ಹಿರಿಯ ಎಸ್‌ಪಿ ಸಂಸದ ಶಫೀಕುರ್ ರೆಹಮಾನ್ ಬರ್ಕ್ ನಿಧನ

Date:

Advertisements

ದೇಶದ ಹಿರಿಯ ಸಂಸದರಾಗಿದ್ದ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ಶಫೀಕುರ್ ರೆಹಮಾನ್ ಬರ್ಕ್ ಮಂಗಳವಾರ ಬೆಳಗ್ಗೆ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಸಂಸದ ಶಫೀಕುರ್ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಈ ತಿಂಗಳ ಆರಂಭದಲ್ಲಿ, ಆರೋಗ್ಯ ಹದಗೆಟ್ಟ ಕಾರಣ, ಅವರನ್ನು ಮೊರಾದಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. ಪ್ರಸ್ತುತ ಇವರು ಸಂಭಾಲ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು.

ಶಫೀಕುರ್ ರೆಹಮಾನ್ ಬರ್ಕ್ ಅವರು ಜುಲೈ 11, 1930ರಂದು ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಜನಿಸಿದ್ದರು. 1996ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಮೊದಲ ಬಾರಿಗೆ ಗೆದ್ದಿದ್ದರು. ಶಫೀಕುರ್ ರೆಹಮಾನ್ ಅವರು ನಾಲ್ಕು ಬಾರಿ ಶಾಸಕರಾಗಿ ಮತ್ತು ಐದು ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಐದು ಬಾರಿ ಸಂಸದರಾದ ಪೈಕಿ ನಾಲ್ಕು ಬಾರಿ ಎಸ್‌ಪಿಯಿಂದ ಗೆದ್ದಿದ್ದರೆ, 2009ರಲ್ಲಿ ಒಮ್ಮೆ ಬಿಎಸ್‌ಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು. ಅದರಲ್ಲೂ ಮೂರು ಬಾರಿ ಮೊರಾದಾಬಾದ್‌ನಿಂದ ಸಂಸದರಾದರೆ, ಎರಡು ಬಾರಿ ಸಂಭಾಲ್‌ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.

Advertisements

2019ರ ಲೋಕಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಗೆಲುವು ಕಾಣುವ ಮೂಲಕ ಸಂಸದರಾಗಿದ್ದರಿಂದ ದೇಶದ ಅತೀ ಹಿರಿಯ ಸಂಸದ ಎಂಬ ಕೀರ್ತಿಗೂ ಇವರು ಪಾತ್ರರಾಗಿದ್ದರು.

ಶಫೀಕರ್ ರೆಹಮಾನ್ ಬರ್ಕ್‌ ಅವರ ನಿಧನಕ್ಕೆ ಎಸ್‌ಪಿ ಮುಖಂಡ ಹಾಗೂ ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್ ಸಂತಾಪ ಸೂಚಿಸಿದ್ದು, ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ಸಮಾಜವಾದಿ ಪಕ್ಷದ ಐಟಿ ಸೆಲ್ ಕೂಡ ಸಂತಾಪ ಸೂಚಿಸಿ ಪೋಸ್ಟ್ ಹಾಕಿದ್ದು, “ನಮ್ಮ ಪಕ್ಷದ ಹಿರಿಯ ನಾಯಕ ಮತ್ತು ಹಲವು ಬಾರಿ ಸಂಸದರಾಗಿದ್ದ  ಶಫೀಕರ್ ರಹಮಾನ್ ಬರ್ಕ್ ಸಾಹೇಬ್ ಅವರ ನಿಧನವು ಅತ್ಯಂತ ದುಃಖಕರವಾದುದು. ಅವರ ಆತ್ಮಕೆ ಶಾಂತಿ ಸಿಗಲಿ. ಮೃತರ ಕುಟುಂಬದ ಸದಸ್ಯರಿಗೆ ಈ ಅಪಾರ ದುಃಖವನ್ನು ಭರಿಸುವ ಶಕ್ತಿ ಸಿಗಲಿ” ಎಂದು ತಿಳಿಸಿದೆ.

ಸಂಸತ್‌ನಲ್ಲಿ, “ನಾನು ಇಸ್ಲಾಂ ಧರ್ಮವನ್ನು ಅನುಸರಿಸುವವನು. ಹಾಗಾಗಿ, ನಾನು ವಂದೇ ಮಾತರಂ ಹಾಡನ್ನು ಹಾಡುವುದಿಲ್ಲ. ಅದು ನನ್ನ ನಂಬಿಕೆಗೆ ವಿರುದ್ಧವಾದುದು” ಎನ್ನುವ ಮೂಲಕ ಬಿಜೆಪಿಗರ ಕೆಂಗಣ್ಣಿಗೆ ಐದು ಬಾರಿಯ ಸಂಸದರಾದ ಶಫೀಕುರ್ ರೆಹಮಾನ್ ಬರ್ಕ್ ಗುರಿಯಾಗಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X