ಮಂಡ್ಯ ಜಿಲ್ಲಾದ್ಯಂತ ಮಾರ್ಚ್ 3ರಂದು ನಡೆಯಲಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮಂಡ್ಯ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಅಭಿಯಾನದ ಸಿದ್ಧತೆಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಶನಿವಾರ ಎಲ್ಲ ಶಾಲೆಗಳಲ್ಲಿ ಜಾಗೃತಿ ಅಭಿಯಾನವನ್ನು ನಡೆಸಲಾಗುವುದು. ಪ್ರತಿ ಶಾಲೆಗೆ ಒಬ್ಬ ವಿದ್ಯಾರ್ಥಿಯನ್ನು ರಾಯಭಾರಿಯಾಗಿ ನೇಮಿಸಬೇಕು ಮತ್ತು ಅಭಿಯಾನವನ್ನು ಮುನ್ನಡೆಸಬೇಕು” ಎಂದು ಹೇಳಿದರು.
“ಬೆಳಿಗ್ಗೆ 8ಕ್ಕೆ ಶಾಲೆಯನ್ನು ತೆರೆಯುವಂತೆ ಹಾಗೂ ಮಕ್ಕಳಿಗೆ ಪೋಲಿಯೋ ಹನಿಗಳನ್ನು ನೀಡಲು ಬರುವ ಸಿಬ್ಬಂದಿಗಳಿಗೆ ಎಲ್ಲ ಮೂಲ ಸೌಲಭ್ಯಗಳನ್ನು ಒದಗಿಸಬೇಕು” ಎಂದು ಶಾಲಾ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಮಿತಿ, 0-5 ವರ್ಷದೊಳಗಿನ ಮಕ್ಕಳನ್ನು ಪಲ್ಸ್ ಪೋಲಿಯೋ ಕೇಂದ್ರಗಳಿಗೆ ಕರೆತರಲು ವ್ಯವಸ್ಥೆ ಮಾಡುವುದು, ಮನೆಯಲ್ಲಿ ಹೆರಿಗೆಯಾದ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕುವುದು, ಮಹಿಳಾ ಸ್ವಸಹಾಯ ಗುಂಪುಗಳನ್ನು ಪಲ್ಸ್ ಪೋಲಿಯೋ ಅಭಿಯಾನದಲ್ಲಿ ತೊಡಗಿಸಿಕೊಳ್ಳುವುದು, ಅಸಂಘಟಿತ ವಲಯದ ಕಾರ್ಮಿಕ ಕುಟುಂಬಗಳು ಮತ್ತು ಅಲೆಮಾರಿ ಸಮುದಾಯಗಳಿಗೆ ಸಂಪೂರ್ಣ ವ್ಯಾಪ್ತಿಯನ್ನು ಖಾತ್ರಿಪಡಿಸುವುದು ಸೇರಿದಂತೆ ಸಭೆಯಲ್ಲಿ ಮುಂತಾದ ನಿರ್ಧಾರಗಳನ್ನು ತೆಗೆದುಕೊಂಡರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕೃಷಿಯನ್ನು ಡಬ್ಲ್ಯುಟಿಒದಿಂದ ಹೊರಗಿಡಲು ಒತ್ತಾಯ; ಪಂಜಿನ ಮೆರವಣಿಗೆ
ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್ ಸಂಸ್ಥೆಗಳು ಈ ಅಭಿಯಾನದಲ್ಲಿ ಪಾಲ್ಗೊಳ್ಳಲು ಮತ್ತು ತಮ್ಮ ಸಂಸ್ಥೆಗಳಲ್ಲಿ ಪಲ್ಸ್ ಪೋಲಿಯೋ ಬೂತ್‌ಗಳನ್ನು ತೆರೆಯಲು ನಿರ್ದೇಶಿಸಿದರು.