ಪಕ್ಷದ ಹಿತಾಸಕ್ತಿಗಾಗಿ ಕಠಿಣ ಕ್ರಮ ತೆಗೆದುಕೊಳ್ಳಲು ಸಿದ್ಧ: ಜೈರಾಮ್ ರಮೇಶ್

Date:

Advertisements

ಆಪರೇಷನ್‌ ಕಮಲದ ಮೂಲಕ ಜನಾದೇಶವನ್ನು ಕಸಿದುಕೊಳ್ಳಲು ಬಿಜೆಪಿಯಿಂದ ಸಾಧ್ಯವಿಲ್ಲ. ಅಲ್ಲದೆ ಪಕ್ಷದ ಹಿತಾಸಕ್ತಿಗಾಗಿ ಕಠಿಣ ಕ್ರಮಕ್ಕೆ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ.

ಹಿಮಾಚಲ ಪ್ರದೇಶದಲ್ಲಿ ನಡೆಯುತ್ತಿರುವ ಸರ್ಕಾರದ ಬೆಳವಣಿಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್, ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭೂಪೇಶ್ ಬಘೇಲ್, ಬೂಪೇಂದರ್ ಸಿಂಗ್ ಹೂಡಾ ಹಾಗೂ ಡಿ ಕೆ ಶಿವಕುಮಾರ್ ಅವರನ್ನು ಭಿನ್ನಮತವನ್ನು ಬಗೆಹರಿಸಲು ವೀಕ್ಷಕರನ್ನಾಗಿ ಶಿಮ್ಲಾಗೆ ಕಳುಹಿಸಲಾಗಿದೆ.

ಅತೃಪ್ತರ ಜೊತೆ ಎಲ್ಲ ಶಾಸಕರೊಂದಿಗೆ ಮಾತನಾಡಿ ಸಮಗ್ರ ವದರಿ ನೀಡಲು ರಾಜ್ಯದ ಎಐಸಿಸಿ ಉಸ್ತುವಾರಿ ರಾಜೀವ್‌ ಶುಕ್ಲಾ ಹಾಗೂ ಮೂವರು ವೀಕ್ಷಕರಿಗೆ ಎಐಸಿಸಿ ಮುಖ್ಯಸ್ಥರು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಪ್ರಸಾದ ಬೇಡ ಬಸ್ ಬೇಕು’ ಎಂದ ಬಾಲಕಿಯ ಮನವಿಯಲ್ಲಿದೆ ಮಹತ್ವದ ಸಂದೇಶ

“ಪಕ್ಷವೇ ಪ್ರಮುಖ ಆದ್ಯತೆಯಾಗಿರುವುದರಿಂದ ಕಾಂಗ್ರೆಸ್ ಪಕ್ಷದ ಹಿತಾಸಕ್ತಿಕಾಗಿ ಯಾವುದೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಹಿಂಜರೆಯುವುದಿಲ್ಲ. ಹಿಮಾಚಲ ಪ್ರದೇಶದಲ್ಲಿ ನೀಡಿರುವ ಜನಾದೇಶಕ್ಕೆ ದ್ರೋಹವೆಸಗಲು ಬಿಡುವುದಿಲ್ಲ. ಜನರು ವಾಪಸ್‌ ಕರೆಸಿಕೊಳ್ಳುವವರೆಗೂ ಬಿಜೆಪಿ ಆಪರೇಷನ್‌ ಕಮಲದ ಮೂಲಕ ಜನಾದೇಶವನ್ನು ಕಸಿದುಕೊಳ್ಳಲು ನಾವು ಬಿಡುವುದಿಲ್ಲ” ಎಂದು ಹೇಳಿದರು.

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಸೋಲಿಸಿದವರಿಗೆ ಕ್ರಮ ಜರುಗಿಸಲಾಗುತ್ತದೆ. ಪಕ್ಷವೇ ಸರ್ವೋಚ್ಛವಾಗಿರುವುದರಿಂದ ವೈಯಕ್ತಿಕ ಹಿತಾಸಕ್ತಿಗಳು ಮುಖ್ಯವಾಗುವುದಿಲ್ಲ. ಜನಾದೇಶಕ್ಕೆ ಗೌರವ ನೀಡಬೇಕಾಗಿದೆ” ಎಂದು ಜೈರಾಮ್‌ ರಮೇಶ್ ಹೇಳಿದರು.

ಬಿಜೆಪಿಯ ನಡೆಯ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಜಾಪ್ರಭುತ್ವದಲ್ಲಿ ಸರ್ಕಾರವನ್ನು ಆಯ್ಕೆ ಮಾಡುವ ಹಕ್ಕು ಜನರಿಗಿದೆ. ಸ್ಪಷ್ಟ ಬಹುಮತದೊಂದಿಗೆ ಹಿಮಾಚಲ ಪ್ರದೇಶದ ಜನರು ಕಾಂಗ್ರೆಸ್ ಸರ್ಕಾರವನ್ನು ರಚಿಸಿದ್ದಾರೆ. ಆದರೆ ಬಿಜೆಪಿಯು ಹಣ, ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಹತ್ತಿಕಲು ಬಯಸಿದೆ. ಕುದುರೆ ವ್ಯಾಪಾರದ ಮೂಲಕ 25 ಶಾಸಕರೊಂದಿಗೆ ಬಹುಮತವಿರುವ 43 ಶಾಸಕರನ್ನು ಪ್ರಶ್ನಿಸಲು ಹೊರಟಿದ್ದಾರೆ ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

Download Eedina App Android / iOS

X