ಬಿಎಂಟಿಸಿ | 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

Date:

Advertisements

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಖಾಲಿ ಇರುವ ಸುಮಾರು 2,500 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಉದ್ಯೋಗ ಪಡೆಯಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಿಳಿಸಿದೆ.

ಈ ಅಧಿಸೂಚನೆಯಲ್ಲಿ ನೀಡಲಾಗಿರುವ 2,500 ಹುದ್ದೆಗಳಲ್ಲಿ ನಿರ್ವಾಹಕ ಹುದ್ದೆಗಳು ಅಥವಾ ‘ಸಿ’ ದರ್ಜೆ ಹುದ್ದೆಗಳಿರುತ್ತವೆ ಎಂದು ತಿಳಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಸಿಎಸ್‌ಇ / ಸಿಬಿಎಸ್‌ಇ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣಗೊಂಡಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೋಮಾ ಪಡೆದಿರಬೇಕು ಎಂದು ತಿಳಿಸಲಾಗಿದೆ. ಮುಕ್ತ ವಿವಿಯಿಂದ ಪಿಯುಸಿ, ಜೆಒಸಿ / ಜೆಎಲ್‌ಸಿ ಕೋರ್ಸ್ ಪಡೆದವರು ಈ ಹುದ್ದೆ ಪಡೆಯಲು ಅರ್ಹರಲ್ಲ ಎಂದು ಪ್ರಾಧಿಕಾರ ಮಾಹಿತಿ ನೀಡಿದೆ.

Advertisements

ಜತೆಗೆ, ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್‌ ಅನ್ನು ಹೊಂದಿರತಕ್ಕದ್ದು. ಪುರುಷರ ಎತ್ತರ 160 ಸೆಂ.ಮೀ, ಮಹಿಳೆಯರ ಎತ್ತರ 150 ಸೆಂ.ಮೀ ಇರಬೇಕು. ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ದಾಟಿರಬೇಕು.

ಬಿಎಂಟಿಸಿಯಲ್ಲಿ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳು ಖಾಲಿ ಇವೆ. ಉಳಿದ ವೃಂದದಲ್ಲಿ 2,286 ನಿರ್ವಾಹಕ ಹುದ್ದೆಗಳು, ಸ್ಥಳೀಯ ವೃಂದದಲ್ಲಿ 214 (ಹಿಂಬಾಕಿ 15 ಹುದ್ದೆಗಳು ಸೇರಿ) ಹುದ್ದೆಗಳು ಇದ್ದು, ಆಸಕ್ತರು ಅಧಿಸೂಚನೆ ನೋಡಿಕೊಂಡು ಕೂಡಲೇ ಅರ್ಜಿ ಸಲ್ಲಿಸಬಹುದು.

ಜಾತಿವಾರು ವಯೋಮಾನ ವಿವರ

ಸಾಮಾನ್ಯ ವರ್ಗ: ಗರಿಷ್ಠ 35 ವರ್ಷ

2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ: 38 ವರ್ಷ

ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ: ಗರಿಷ್ಠ 40 ವರ್ಷ

ಮಾಜಿ ಸೈನಿಕ / ಇಲಾಖಾ ಅಭ್ಯರ್ಥಿಗಳು: ಗರಿಷ್ಠ 45 ವರ್ಷ

ನಿರ್ವಾಹಕ ಹುದ್ದೆಗಳಿಗೆ ವೇತನ ಶ್ರೇಣಿ : 18660 – ₹25300

ಅರ್ಜಿ ಸಲ್ಲಿಸುವ ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಒಂದು ವರ್ಷ ಕಾಲ ವೃತ್ತಿ ತರಬೇತಿ ನೀಡಲಾಗುತ್ತದೆ. ಈ ಅವಧಿಯಲ್ಲಿ ಪ್ರತಿ ತಿಂಗಳು ತರಬೇತಿ ಭತ್ಯೆ ಎಂದು ₹9,100 ಕೊಡಲಾಗುವುದು ಎಂದು ತಿಳಿಸಿದೆ.

ಅರ್ಜಿ ಸಲ್ಲಿಸುವ ವಿಧಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ನಲ್ಲಿ ಮಾರ್ಚ್‌ 10 ರಂದು ತೋರಿಸುವ ಲಿಂಕ್‌ ಅನ್ನು ಆಯ್ಕೆ ಮಾಡಿ, ಆನ್‌ಲೈನ್‌ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು.

ಅಪ್ಲಿಕೇಶನ್‌ ಶುಲ್ಕ ವಿವರ ಸಾಮಾನ್ಯ ಅರ್ಹತೆ ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ಅರ್ಜಿ ಶುಲ್ಕ ₹750.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ₹500.

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಅವಧಿ

ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 10-03-2024
ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10-04-2024
ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : 13-04-2024

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವ್ಹೀಲಿಂಗ್ ಮಾಡುವವರ ವಿರುದ್ದ ಕಾರ್ಯಾಚರಣೆಗಿಳಿದ ಪೊಲೀಸರು

ಆಯ್ಕೆ ಹೇಗೆ?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬಿಎಂಟಿಸಿ ನಿಗಮದಿಂದ ಎರಡು ಲಿಖಿತ ಪರೀಕ್ಷೆ ನಡೆಸಬೇಕು. ಇದರಲ್ಲಿ ಅಭ್ಯರ್ಥಿಗಳ ಮೆರಿಟ್ ಆಧಾರದಲ್ಲಿ ಮತ್ತು ದಾಖಲಾತಿ ಪರಿಶೀಲನೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಬಿಎಂಟಿಸಿ ನಿರ್ವಾಹಕರ ನೇಮಕಾತಿ ವಿಧಾನ

ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಎರಡು ಪತ್ರಿಕೆಗಳಿಗೆ ತಲಾ ₹100 ಗಳಿಗೆ ನಡೆಸಿ, ನಂತರ ಇದರಲ್ಲಿನ ಶೇ.75 ಅಂಕಗಳು ಹಾಗೂ ಶೈಕ್ಷಣಿಕ ಅರ್ಹತೆಯ ಶೇ.25 ಅಂಕಗಳನ್ನು ಸೇರಿಸಿ ಮೆರಿಟ್ ಆಧಾರದ ಮೇಲೆ 1:5 ಅನುಪಾತದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X