ವಿಜಯಪುರ ಜಿಲ್ಲೆಯ ಚಡಚಣ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಫೆಬ್ರವರಿ 29ರಂದು ಜಾಗೃತಿ ಕಾರ್ಯಕ್ರಮ ಏರ್ಪಡಿಸಿದ್ದು, ಎಲ್ಲರೂ ಭಾಗವಹಿಸುವಂತೆ ಚಡಚಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್ ಡಿ ಹಕ್ಕೆ, ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಆಲಗೂರು ಅವರು ಕರೆ ನೀಡಿದ್ದಾರೆ.
ಚಡಚಣದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗುರುವಾರ ಸಂಜೆ 4ಕ್ಕೆ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಬಾಗ್ಯ, ಯುವನಿಧಿ ಸೇರಿದಂತೆ ಒಟ್ಟು 05 ಗ್ಯಾರಂಟಿಗಳನ್ನು ನಮ್ಮ ಸರ್ಕಾರವು ಅನುಷ್ಠಾನಗೊಳಿಸಿದ್ದು, ನುಡಿದಂತೆ ನಡೆದ ಸರ್ಕಾರ ಎಂಬ ಅಭಿಯಾನಕ್ಕೆ ಸರ್ವತ್ರ ಪಾತ್ರವಾಗಿದೆ. ಪ್ರಣಾಳಿಕೆಯಲ್ಲಿ ತಿಳಿಸಿದ್ದ ಎಲ್ಲ ಗ್ಯಾರೆಂಟಿಗಳನ್ನು ಜಾರಿಗೊಳಿಸಿದೆ” ಎಂದು ಹೇಳಿದರು.
“ಈ ಎಲ್ಲ ಗ್ಯಾರಂಟಿಗಳನ್ನು ಫಲಾನುಭವಿಗಳಿಗೆ ಸುಲಲಿತವಾಗಿ ಹಾಗೂ ಕ್ರಮಬದ್ಧವಾಗಿ ಅನುಷ್ಠಾನಗೊಳಿಸುವ ಬಗ್ಗೆ ಮತ್ತು ಸಂವಿಧಾನ ವಿರೋಧ, ಸಮಾನತೆಯ ಶತ್ರು ಮತ್ತು ಶ್ರೀಮಂತ ಕಾರ್ಪೊರೇಟರ್ಗಳ ಗುಲಾಮ ಹಾಗೂ ಬಡವರ ವಿರೋಧಿ ಬಿಜೆಪಿಯ ಮುಖವಾಡ ಬಯಲಾಗಿರುವ ಕುರಿತು ಜಾಗೃತಿ ಮೂಡಿಸಲು ಸಭೆ ಏರ್ಪಡಿಸಲಾಗಿದೆ” ಎಂದರು.
“ಜನಸಾಮಾನ್ಯರ ಜೀವನ ನರಕ ಮಾಡಿರುವ ಇವರ ಬೆಲೆ ಏರಿಕೆ ನೀತಿ, ಅನ್ನದಾತ ರೈತ ವಿರೋಧ ನೀತಿ ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ದಿದಿಂದ ದಿನಕ್ಕೆ ಹೆಚ್ಚುತ್ತಿದೆ. ದೇಶದಲ್ಲಿ ಧರ್ಮಾಂಧತೆ, ಜಾತಿಯತೆ ಹೆಚ್ಚಾಗಿದೆ. ಅಧಿಕಾರ ಪಡೆಯಲು ಜನಪ್ರತಿನಿಧಿಗಳಿಗೆ ಆಶೆ ಆಮಿಷ ಒಡ್ಡಿ ಬೆದರಿಕೆ ಹಾಕುತ್ತಿದ್ದಾರೆ. ಸರ್ಕಾರಿ ಇಲಾಖೆಗಳಾದ ಇ.ಡಿ, ಸಿಬಿಐ, ಐಟಿಗಳನ್ನು ದುರುಪಯೋಗ ಮಾಡಿ ಹೆದರಿಸಿಕೊಂಡು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ. ಇಂತಹ ದುಷ್ಕೃತ್ಯ ನಡೆಸುತ್ತಿರುವ ಬಿಜೆಪಿ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲು ಮತ್ತು ದೇಶದ ಸದ್ಯದ ವಾಸ್ತವಿಕ ಅಪಾಯಕಾರಿ ಪರಿಸ್ಥಿತಿಯನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ಮನವರಿಕೆ ಮಾಡಿಕೊಡುವ ಜವಾಬ್ದಾರಿಯನ್ನು ನಿರ್ವಹಿಸಲು ಸಭೆ ನಡೆಸಲಿದ್ದೇವೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಸ್ಥಳೀಯರ ಬೇಡಿಕೆಗೆ ಮಣಿದ ಎಂಸಿಸಿ; ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಕಾರ್ಯಾರಂಭ
ಕಾಂಗ್ರೆಸ್ ಪಕ್ಷದ ಬೆಂಬಲಿತ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಪಂಚಾಯತ್ ಸದಸ್ಯರು, ಪಂ ಪ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲ ಮುಂಚೂಣಿ ಘಟಕಗಳ ಅದ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಮನವಿ ಮಾಡಿದರು.