ಕೆ ಎಚ್ ಮುನಿಯಪ್ಪ ಹಾಗೂ ನನ್ನ ನಡುವೆ ಈ ಹಿಂದೆ ಭಿನ್ನಾಭಿಪ್ರಾಯ ಇದ್ದದ್ದು ನಿಜ. ಆದರೆ ಈಗ ಮೊದಲಿನಂತಿಲ್ಲ. ನಾವು ಒಟ್ಟಾಗಿದ್ದೇವೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವಿಗೆ ನಾವಿಬ್ಬರೂ ಒಟ್ಟಾಗಿ ಶ್ರಮಿಸುತ್ತೇವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಸಿ ಸುಧಾಕರ್ ಹೇಳಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮಿಬ್ಬರ ನಡುವೆ ವೈಮನಸ್ಸು ಇದ್ದ ಕಾರಣ ಎರಡು ಬಾರಿ ಟಿಕೆಟ್ ನಿರಾಕರಿಸಿದ್ದೆ. ಆದರೆ ಈಗ ನಾವು ಒಟ್ಟಿಗೆ ಇದ್ದು, ಕೆಲಸ ಮಾಡುತ್ತಿದ್ದೇವೆ” ಎಂದರು.
ಈ ಸುದ್ದಿ ಓದಿದ್ದೀರಾ? ವಿಜಯಪುರ | ವಸತಿ ನಿಲಯಗಳ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
“ಬೆಂಗಳೂರು ಗ್ರಾಮಾಂತರದಲ್ಲಿ ಕೆ ಎಚ್ ಮುನಿಯಪ್ಪ ಅವರು ಹೆಚ್ಚು ಜವಾಬ್ದಾರಿ ಹೊಂದಿದ್ದಾರೆ. ಅಂತೆಯೇ ನನಗೆ ಚಿಕ್ಕಬಳ್ಳಾಪುರ ಜವಾಬ್ದಾರಿ ಇದೆ. ಹಾಗಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವಿಗೆ ನಾವಿಬ್ಬರೂ ಒಟ್ಟಾಗಿ ಶ್ರಮಿಸುತ್ತೇವೆ” ಎಂದು ಹೇಳಿದರು.