ಪಾಕಿಸ್ತಾನವನ್ನು ಶತ್ರುರಾಷ್ಟ್ರ ಎಂದು ಘೋಷಿಸಲಿ: ಬಿಜೆಪಿಗೆ ಬಿ ಕೆ ಹರಿಪ್ರಸಾದ್‌ ಸವಾಲು

Date:

Advertisements

ಬಿಜೆಪಿಗೂ ಪಾಕಿಸ್ತಾನದ ನೆಂಟಸ್ತನಕ್ಕೂ ಹಲವು ದಶಕಗಳ ಇತಿಹಾಸವಿದೆ. ಪಾಕಿಸ್ತಾನದ ಜಪ ಮಾಡದೆ ಬಿಜೆಪಿ ಚುನಾವಣೆ ಎದುರಿಸಿದ ಇತಿಹಾಸವೇ ಇಲ್ಲ. ಪಾಕಿಸ್ತಾನದ ಮೇಲೆ ಬಿಜೆಪಿಗೆ ನಿಜಕ್ಕೂ ರೋಷ, ಆವೇಷ ಇದ್ದರೆ ‘ಶತ್ರುರಾಷ್ಟ್ರ’ ಎಂದು ಘೋಷಿಸಲಿ ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಸವಾಲು ಹಾಕಿದ್ದಾರೆ.

ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಒಕ್ಕೂಟ ಭಾರತವನ್ನು ಇಬ್ಭಾಗ ಮಾಡಿದ ಮೊಹಮ್ಮದ್ ಅಲಿ ಜಿನ್ನಾಗೆ ಜಾತ್ಯತೀತ ನಾಯಕ ಎಂದು ಬಿರುದು ನೀಡಿ, ಸಮಾಧಿ ಎದುರು ಕಣ್ಣೀರು ಸುರಿಸಿದ ಲಾಲ್ ಕೃಷ್ಣ ಅಡ್ವಾನಿ ಯಾವ ಪಕ್ಷದವರು? ಭಯೋತ್ಪಾದನೆಗೆ ತಲೆ ಬಾಗುವುದಿಲ್ಲ ಎಂದು ಚುನಾವಣೆಯ ವೇಳೆ ಭಾಷಣ ಬೀಗಿದ್ದ ನರೇಂದ್ರ ಮೋದಿಯವರು, ಪಾಕಿಸ್ತಾನದ ಪ್ರಧಾನಿಯ ಮೊಮ್ಮಗಳ ಮದುವೆಗೆ ಆಹ್ವಾನವೇ ಇಲ್ಲದೆ, ರಹಸ್ಯವಾಗಿ ಬಿರಿಯಾನಿ ತಿಂದು ಬಂದಿದ್ದು ನೆಂಟಸ್ತನ ಅಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಪಾಕಿಸ್ತಾನವನ್ನು ‘ಭಯೋತ್ಪಾದನೆ ಪ್ರಾಯೋಜಿತ ರಾಷ್ಟ್ರವೆಂದು ಘೋಷಣೆ ಮಾಡಬೇಕು ಎಂದು ಸಂಸತ್ತಿನಲ್ಲಿ ಬಿಜೆಪಿ ಸಂಸದ ರಾಜೀವ್ ಚಂದ್ರಶೇಖರ್ ಮಂಡಿಸಿದ್ದ ಖಾಸಗಿ ಮಸೂದೆಯನ್ನು ವಾಪಸ್ ಪಡೆದಿದ್ದು ಯಾಕೆ? 56 ಇಂಚಿನ ಎದೆಯಲ್ಲಿ ಧೈರ್ಯವೇ ಇರಲಿಲ್ವೇ? ಯಾರ ಒತ್ತಡದಿಂದ ಮಸೂದೆ ವಾಪಸ್ ಪಡೆಯಲಾಯಿತು?” ಎಂದು ಬಿ ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

Advertisements

“ಪಾಕಿಸ್ತಾನದಿಂದ ಆಮದು ಮಾಡಿಕೊಳ್ಳುತ್ತಿರುವ ಸಕ್ಕರೆ ಸೇರಿದಂತೆ ಎಲ್ಲ ವ್ಯವಹಾರವನ್ನು ನಿಲ್ಲಿಸಲು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಧೈರ್ಯ ಇದೆಯಾ? ಬೀದಿಯಲ್ಲಿ ನಿಂತು ಬೊಬ್ಬೆ ಹಾಕುತ್ತಿರುವ ಬಿಜೆಪಿ, ಪಾಕಿಸ್ತಾನದ ನಂಟಸ್ತನದಿಂದ ರಾಜಕೀಯ ಬೇಳೆ ಬೆಳೆಸುತ್ತಿರುವುದು ಪುಲ್ವಾಮ ದಾಳಿಯಲ್ಲೇ ಸಾಬೀತಾಗಿದೆ. ರಾಜ್ಯದ ಜನರನ್ನ ಮೂರ್ಖರನ್ನಾಗಿ ಮಾಡಲು ಹೋಗಿ, ಮುಖವಾಡ ಬಯಲಾಗುತ್ತಿರುವುದು ಸ್ಪಷ್ಟವಾಗಿದೆ” ಎಂದು ಕುಟುಕಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X