ಬೀದರ್‌ | ಕೆರೆಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿ ಶವವಾಗಿ ಪತ್ತೆ

Date:

Advertisements

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ, ನೀರಿನಲ್ಲಿ ಮುಳುಗಿ ಮೃತಪಟ್ಟ ವ್ಯಕ್ತಿಯ ಶವ ನಾಲ್ಕು ದಿನಗಳ ನಂತರ ಪತ್ತೆಯಾದ ಘಟನೆ ಬಸವಕಲ್ಯಾಣ ತಾಲೂಕಿನ ಹತ್ಯಾಳ ಗ್ರಾಮದಲ್ಲಿ ಜರುಗಿದೆ.

ಬಸವಕಲ್ಯಾಣ ತಾಲೂಕಿನ ಹಾಮುನಗರ ತಾಂಡಾ ನಿವಾಸಿ ಪಾಂಡುರಂಗ ರಾಠೋಡ (40) ಮೃತಪಟ್ಟವರು.

ಫೆ.25 ರಂದು ಭಾನುವಾರ ಸ್ನೇಹಿತರೊಂದಿಗೆ ಹತ್ಯಾಳ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ. ನೀರಿಗೆ ಇಳಿದು ಮೀನು ಹಿಡಿಯುವ ವೇಳೆ ಮರಳಿ ದಡ ಸೇರಲಾಗದೆ ನೀರಿನಲ್ಲೇ ಮುಳುಗಿ ಮೃತಪಟ್ಟಿದ್ದ.

Advertisements

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಮುಡಬಿ ಠಾಣೆಯ ಪೊಲೀಸರು ಅಗ್ನಿಶಾಮಕ ದಳದ ಸಿಬ್ಬಂದಿಯ ಸಹಕಾರದೊಂದಿಗೆ ಶವ ಹೊರ ತೆಗೆಯಲು ಮೂರು ದಿನಗಳ ಕಾಲ ಸತತವಾಗಿ ಪ್ರಯತ್ನಿಸಿದರೂ ಶವ ಪತ್ತೆಯಾಗಲಿಲ್ಲ. ಎನ್‌ಡಿಆರ್‌ಎಫ್ ತಂಡದ ಸಹಕಾರದಿಂದ ಬುಧವಾರ ಬೆಳಗ್ಗೆ ವ್ಯಕ್ತಿಯ ಶವ ಪತ್ತೆ ಹಚ್ಚಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗೆ ʼವಿವಾದದ ಸರಕುʼ ಪೂರೈಕೆಯ ಗುತ್ತಿಗೆ ಪಡೆದಿವೆಯೇ ಕನ್ನಡದ ಮಾಧ್ಯಮಗಳು?

ಈ ಕುರಿತು ಮುಡಬಿ ಪೊಲೀಸ್ ಠಾಣೆ ಪಿಎಸ್ಐ ರೇಣುಕಾ ಉಡಗಿ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X