ಅಪಪ್ರಚಾರದ ಸುದ್ದಿ ಪ್ರಕಟಿಸದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದ ನಟ ಜಗ್ಗೇಶ್

Date:

Advertisements

ತಮ್ಮ ವಿರುದ್ಧ ಯಾವುದೇ ರೀತಿಯ ಅಪಪ್ರಚಾರದ ಸುದ್ದಿಗಳನ್ನು ಪ್ರಕಟ ಮಾಡದಂತೆ ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಜಗ್ಗೇಶ್ ಅವರ ಬಗ್ಗೆ ಅಪಪ್ರಚಾರದ ಸುದ್ದಿ ಪ್ರಕಟವಾಗಿತ್ತು ಎನ್ನಲಾಗಿದೆ. ಹಾಗಾಗಿ, ಜಗ್ಗೇಶ್ ಅವರು ಕೋರ್ಟ್‌ ಮೊರೆ ಹೋಗಿದ್ದರು.

ಈ ಸುದ್ದಿ ಓದಿದ್ದೀರಾ? ಮಾ.1 ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

Advertisements

ಸಿಟಿ ಸಿವಿಲ್ ಹಾಗೂ ಸೆಷನ್ ನ್ಯಾಯಾಲಯದ ಆದೇಶದ ಪ್ರಕಾರ ಜಗ್ಗೇಶ್ ವಿರುದ್ಧ ಸುದ್ದಿಯನ್ನು ಅಥವಾ ಪ್ರಮಾಣಿಕರಿಸದ ಸುದ್ದಿಯನ್ನು ಮಾನಹಾನಿ ಆಗುವ ರೀತಿಯಲ್ಲಿ ಅವಹೇಳನಕಾರಿಯಾಗಿ ಬಿತ್ತರಿಸುವಂತಿಲ್ಲ ಎಂದು ನ್ಯಾಯಾಲಯ ಆದೇಶಿಸಿದೆ. ಅಲ್ಲದೇ, ಇದು ತಾತ್ಕಾಲಿಕ ಆದೇಶವಾಗಿದೆ. ಮುಂದಿನ ವಿಚಾರಣೆ ಏಪ್ರಿಲ್ 25ಕ್ಕೆ ನಡೆಯಲಿದೆ. ಈ ಬಗ್ಗೆ ಜಗ್ಗೇಶ್ ಪರ ವಕೀಲರು ಮಾಹಿತಿ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

Download Eedina App Android / iOS

X