ರೈತನಿಗೆ ನಿರಾಕರಣೆ | ಎನ್‌ಹೆಚ್‌ಆರ್‍‌ಸಿಯಿಂದ ನಮ್ಮ ಮೆಟ್ರೋ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ

Date:

Advertisements

ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಕೊಳಕು ಬಟ್ಟೆ ಧರಿಸಿದ ರೈತನ ಪ್ರವೇಶಕ್ಕೆ ಅವಕಾಶ ನಿರಾಕರಿಸಿ, ಅವಮಾನಿಸಿದ ಸಂಬಂಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್​ಹೆಚ್​ಆರ್​ಸಿ) ನಮ್ಮ ಮೆಟ್ರೋ ಆಡಳಿತ ಮಂಡಳಿ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಮೆಟ್ರೋ ನಿಲ್ದಾಣದಲ್ಲಿ ರೈತನ ಪ್ರವೇಶ ನಿರಾಕರಿಸಿದ ಘಟನೆ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಈ ಪ್ರಕರಣ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಎನ್​ಹೆಚ್​ಆರ್​ಸಿ ದೂರು ದಾಖಲು ಮಾಡಿಕೊಂಡು, ಪ್ರಕರಣದ ಬಗ್ಗೆ ವರದಿ ನೀಡುವಂತೆ ಬಿಎಂಆರ್​​ಸಿಎಲ್ ವ್ಯವಸ್ಥಾಪಕರಿಗೆ ಸೂಚಿಸಿದೆ.

Advertisements

ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಕಳೆದ ಸೋಮವಾರದಂದು ಘಟನೆ ನಡೆದಿತ್ತು. ಮೆಟ್ರೋ ರೈಲಿನತ್ತ ಪ್ರವೇಶಿಸಲು ರೈತ ಮುಂದಾದಾಗ ಅಲ್ಲಿನ ಸಿಬ್ಬಂದಿ ರೈತ ಕೊಳಕು ಉಡುಪು ಧರಿಸಿದ ಹಾಗೂ ಮಾಸಿದ ಬಟ್ಟೆಯ ಗಂಟು ಇರುವುದನ್ನು ಗಮನಿಸಿ, ರೈಲಿನ ರಕ್ಷಣಾ ಸಿಬ್ಬಂದಿ ಪ್ರವೇಶ ನಿರಾಕರಿಸಿದ್ದರು. ಈ ಪ್ರಕರಣ ಸಾಕಷ್ಟು ಸದ್ದು ಮಾಡಿತ್ತು. ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಈ ಪ್ರಕರಣವನ್ನು ಗಮನಿಸಿ, ಮೆಟ್ರೋ ನಿಗಮಕ್ಕೆ ನೋಟಿಸ್ ನೀಡಿದೆ. ನಾಲ್ಕು ವಾರಗಳಲ್ಲಿ ಘಟನೆ ಕುರಿತು ವರದಿ ನೀಡುವಂತೆ ಸೂಚಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗೆ ʼವಿವಾದದ ಸರಕುʼ ಪೂರೈಕೆಯ ಗುತ್ತಿಗೆ ಪಡೆದಿವೆಯೇ ಕನ್ನಡದ ಮಾಧ್ಯಮಗಳು?

ಮೆಟ್ರೋದಿಂದ ತನಿಖೆ ಚುರುಕು

ರೈತನ ಪ್ರವೇಶ ನಿರಾಕರಣೆ ಪ್ರಕರಣದಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾದಾಗ ಸಂಬಂಧಿತ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿದ ಮೆಟ್ರೋ ಆಡಳಿತ ಮಂಡಳಿಯು ತಾಂತ್ರಿಕ ತಂಡದಿಂದ ತನಿಖೆ ಚುರುಕುಗೊಳಿಸಿದೆ. ಸದ್ಯದ ಮಾಹಿತಿ ಪ್ರಕಾರ ರೈತನಿಗೆ ಪ್ರವೇಶ ನಿರಾಕರಿಸಿದ್ದಿಲ್ಲ. ಟಿಕೆಟ್ ಇಲ್ಲದ್ದಕ್ಕೆ ಟಿಕೆಟ್ ತರುವಂತೆ ಸಿಬ್ಬಂದಿ ಸೂಚಿಸಿದ್ದರು ಎಂದು ಮೆಟ್ರೋ ಹಿರಿಯ ಅಧಿಕಾರಿ ಶಂಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಅಂತಿಮ ವರದಿ ಇನ್ನೂ ಕೈಸೇರಿಲ್ಲ, ಆಗ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಗೊತ್ತಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿ ಕೆ ಶಿವಕುಮಾರ್ ಬಳಿಕ ಕಾಂಗ್ರೆಸ್ ಶಾಸಕ ರಂಗನಾಥ್‌ರಿಂದ ಆರ್‌ಎಸ್‌ಎಸ್ ಗೀತೆ ಗುಣಗಾನ!

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಬಳಿಕ ಇದೀಗ ಕಾಂಗ್ರೆಸ್ ಶಾಸಕ...

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X