ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಅಡ್ಡ ಮತದಾನ ಮಾಡಿದ ಆರು ಹಿಮಾಚಲ ಪ್ರದೇಶದ 6 ಕಾಂಗ್ರೆಸ್ ಶಾಸಕರನ್ನು ವಿಧಾನಸಭೆಯ ಸ್ಪೀಕರ್ ಕುಲ್‌ದೀಪ್ ಸಿಂಗ್ ಪಠಾನಿಯಾ ಅವರು ಪಕ್ಷಾಂತರ ವಿರೋಧಿ ಕಾನೂನಡಿ ಅನರ್ಹಗೊಳಿಸಿದ್ದಾರೆ.
“ಕಾಂಗ್ರೆಸ್ ಚಿಹ್ನೆಯಡಿ ಸ್ಪರ್ಧಿಸಿ ಪಕ್ಷಾಂತರ ವಿರೋಧಿ ಕಾನೂನಿನ ನಿಬಂಧನೆಗೆ ಇವರು ಒಳಗಾಗಿದ್ದಾರೆ. ಆರು ಮಂದಿಯನ್ನು ವಿಧಾನಸಭಾ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅನರ್ಹಗೊಳಿಸಿರುವುದಾಗಿ ನಾನು ಘೋಷಿಸುತ್ತೇನೆ” ಎಂದು ಸ್ವೀಕರ್ ತಿಳಿಸಿದರು.
ಆರು ಕಾಂಗ್ರೆಸ್ ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷ ಮಹಾಜನ್ ಪರವಾಗಿ ಮಂಗಳವಾರ(ಫೆ.27) ಅಡ್ಡ ಮತದಾನ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಸೋಲಿಗೆ ಕಾರಣರಾಗಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗೆ ʼವಿವಾದದ ಸರಕುʼ ಪೂರೈಕೆಯ ಗುತ್ತಿಗೆ ಪಡೆದಿವೆಯೇ ಕನ್ನಡದ ಮಾಧ್ಯಮಗಳು?
ಕಾಂಗ್ರೆಸ್ ಶಾಸಕರಾದ ರಾಜೀಂದರ್ ರಾಣಾ, ಸುಧೀರ್ ಶರ್ಮಾ, ರವಿ ಠಾಕೂರ್, ಇಂದರ್‌ದತ್ ಲಖನ್‌ಪಾಲ್, ಚೇತನ್ಯ ಶರ್ಮಾ ಹಾಗೂ ದೇವೆಂದರ್ ಕುಮಾರ್ ಅವರು ಬಿಜೆಪಿ ಅಭ್ಯರ್ಥಿಗೆ ಅಡ್ಡ ಮತದಾನ ಮಾಡಿ ಹರಿಯಾಣಕ್ಕೆ ತೆರಳಿದ್ದರು.
ವರದಿಗಳ ಪ್ರಕಾರ ಈ ಸಾಸಕರು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸಖು ಅವರ ಕಾರ್ಯವೈಖರಿಯಿಂದ ಬೇಸತ್ತು, ಸಿಎಂ ಅವರನ್ನು ಬದಲಾವಣೆ ಮಾಡಬೇಕೆಂದು ಆಗ್ರಹಿಸಿದ್ದರು.
ರಾಜ್ಯಸಭಾ ಚುನಾವಣೆಯಲ್ಲಿ ವಿಪ್ ಉಲ್ಲಂಘನೆಯನ್ನು ಧಿಕ್ಕರಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.