ಕನ್ನಡ ನಾಮಫಲಕ ಅಳವಡಿಕೆ; ಎರಡು ವಾರ ಅವಧಿ ವಿಸ್ತರಣೆ: ಡಿಸಿಎಂ ಡಿ ಕೆ ಶಿವಕುಮಾರ್‌

Date:

Advertisements

ಬೆಂಗಳೂರಿನ ಎಲ್ಲ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದ ಕಡೆ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು ಎರಡು ವಾರಗಳ‌ ಕಾಲ ವಿಸ್ತರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ತಿಳಿಸಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿ‌ಹಿಡಿಯುವುದು ಅತಿ ಮುಖ್ಯ. ಎರಡು ವಾರಗಳ‌ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ‌ ಎಂದು ನಿರೀಕ್ಷಿಸಿದ್ದೇನೆ” ಎಂದು ಹೇಳಿದ್ದಾರೆ.

ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಬಳಸದ ವಾಣಿಜ್ಯ ಮಳಿಗೆಗಳ ‘ವ್ಯಾಪಾರ ಪರವಾನಗಿ’ ಅಮಾನತು ಮಾಡಿ, ಇಂದಿನಿಂದ ಬೀಗ ಹಾಕಲು ಬಿಬಿಎಂಪಿ ನಿರ್ಧರಿಸಿತ್ತು.

Advertisements

ಅಂಗಡಿ ಮುಂಗಟ್ಟುಗಳ ಮೇಲ್ಭಾಗದಲ್ಲಿ ಕನ್ನಡ ಪ್ರದರ್ಶಿತವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ವಿಶೇಷ ರಾಜ್ಯ ಪತ್ರಿಕೆ ಅಧಿಸೂಚನಾ ಪತ್ರದಲ್ಲಿ ಸೂಚಿಸಲಾಗಿತ್ತು. ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಅಧಿಸೂಚನೆಯಂತೆ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ವಾಣಿಜ್ಯ ಮಳಿಗೆಗಳು ಫೆ.28ರೊಳಗೆ ನಾಮಫಲಕ ಗಳಲ್ಲಿ ಶೇ 60ರಷ್ಟು ಕನ್ನಡ ಅಳವಡಿಸಿಕೊಳ್ಳಲು ಸೂಚಿಸಿ, 55,187 ಮಳಿಗೆಗಳಿಗೆ ನೋಟಿಸ್‌ ಜಾರಿ ಮಾಡಲಾಗಿತ್ತು.

ಫೆ.28ರ ವೇಳೆಗೆ 52,134 ವಾಣಿಜ್ಯ ಉದ್ದಿಮೆಗಳು ಸೂಚನೆಯನ್ನು ಪಾಲಿಸಿವೆ. ಉಳಿದ 3,044 ವಾಣಿಜ್ಯ ಉದ್ದಿಮೆಗಳು ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ರಾಜರಾಜೇಶ್ವರಿ ನಗರ ವಲಯದಲ್ಲಿ ಅತಿ ಹೆಚ್ಚು ಬಾಕಿ ಉಳಿದಿದ್ದು, ಯಲಹಂಕ, ಬೊಮ್ಮನಹಳ್ಳಿ ವಲಯ ನಂತರದ ಸ್ಥಾನದಲ್ಲಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

Download Eedina App Android / iOS

X