ಎಮ್‌ಎಇಎಫ್‌ ಮುಚ್ಚಲು ಕೇಂದ್ರ ಆದೇಶ; ಶಿಕ್ಷಣ ತಜ್ಞರ ಖಂಡನೆ

Date:

Advertisements

“ಪಂಡಿತ್ ಜವಾಹರಲಾಲ್ ನೆಹರು ಅವರ ಸಂಪುಟದಲ್ಲಿ ಸ್ವತಂತ್ರ ಭಾರತದ ಮೊದಲ ಶಿಕ್ಷಣ ಮಂತ್ರಿಯಾಗಿ ಸೇವೆ ಸಲ್ಲಿಸಿದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಹೆಸರಿನಲ್ಲಿ ಸ್ಥಾಪಿಸಿದ್ದ ‘ಮೌಲಾನಾ ಆಜಾದ್ ಎಜುಕೇಶನ್ ಫೌಂಡೇಶನ್ (ಎಮ್‌ಎಇಎಫ್‌)’ ಅನ್ನು ಮುಚ್ಚಲು ಕೇಂದ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಆದೇಶ ಹೊರಡಿಸಿದೆ. ಇದು ಅತ್ಯಂತ ಖಂಡನೀಯ” ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ ಹೇಳಿದ್ದಾರೆ.

“ರಾಷ್ಟ್ರಕ್ಕೆ ಅನನ್ಯ ಕೊಡುಗೆ ನೀಡಿದವರಲ್ಲಿ ಒಬ್ಬರಾದ ಮೌಲಾನ್ ಅಜಾದ್ ಅವರು ಸ್ವಾತಂತ್ರ್ಯ ಭಾರತದ ಮೊದಲ ಶಿಕ್ಷಣ ಸಚಿವರೂ, ದೇಶಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರು ಮತ್ತು ವಿದ್ವಾಂಸರು ಆಗಿದ್ದರು. ಆಜಾದ್ ಅವರ ಹೆಸರಿನಲ್ಲಿ ಸ್ಥಾಪಿಸಿದ್ದ ಮೌಲಾನಾ ಆಜಾದ್ ಎಜುಕೇಶನ್ ಫೌಂಡೇಶನ್ ಅನ್ನು ಮುಚ್ಚಲು ಕೇಂದ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು ಹೊರಡಿಸದ ಆದೇಶ ಅತ್ಯಂತ ಹೇಯ ಕೃತ್ಯ. ಇದನ್ನು ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ ( ಪಾಫ್ರೆ) ಖಂಡಿಸುತ್ತಿದೆ” ಎಂದಿದ್ದಾರೆ.

“ಮೌಲಾನ್ ಅವರ ಮಾರ್ಗದರ್ಶನದಲ್ಲಿ ಭಾರತದ ಐಐಟಿಗಳು ಮತ್ತು ಎಐಐಎಂಎಸ್‌ನಂತಹ ಪ್ರತಿಷ್ಠಿತ ಸಂಸ್ಥೆಗಳನ್ನು ಸ್ಥಾಪಿಸಲಾಯಿತು ಎಂಬುದು ಅವಿಸ್ಮರಣೀಯ. ಅವರ ಕೊಡುಗೆಯನ್ನು ಗುರುತಿಸಿ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಿ ಗೌರವಿಸಲಾಗಿದೆ. ನ್ಯಾಯಮೂರ್ತಿ ಸಾಚಾರ್‌ರವರ  ವರದಿಯ ಅನ್ವಯ ಸಮಾಜದಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ವರ್ಗಗಳ ಶಿಕ್ಷಣವನ್ನು ಉತ್ತೇಜಿಸಲು ಸ್ಥಾಪಿತವಾಗಿದ್ದ ಮೌಲಾನಾ ಆಜಾದ್ ಶಿಕ್ಷಣ ಪ್ರತಿಷ್ಠಾನವು ಭಾರತ ಸರ್ಕಾರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಸಂಪೂರ್ಣ ಧನಸಹಾಯದೊಂದಿಗೆ ಕಾರ್ಯನಿರ್ವಹಿಸುತ್ತಿತ್ತು. ಕಳೆದ ಹಲವು ವರ್ಷಗಳಲ್ಲಿ ಅಲ್ಪ ಸಂಖ್ಯಾತ ವರ್ಗದ ಶೈಕ್ಷಣಿಕ ಸಬಲೀಕರಣವನ್ನು ಉತ್ತೇಜಿಸುವಲ್ಲಿ ಫೌಂಡೇಶನ್‌ ಪ್ರಮುಖ ಪಾತ್ರವನ್ನು ವಹಿಸಿದೆ” ಎಂದು ತಿಳಿಸಿದ್ದಾರೆ.

Advertisements

“ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಈ ನಿರ್ಧಾರವು ಅವಕಾಶ ವಂಚಿತ ಮುಸ್ಲಿಂ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಿದ್ದ ಒಂದು ಮುಖ್ಯ ಅವಕಾಶವನ್ನು ಕಸಿಯುವ ಅತ್ಯಂತ ದುರದೃಷ್ಟಕರ ತೀರ್ಮಾನವಾಗಿದೆ. ಅಲ್ಪಸಂಖ್ಯಾತ ಸಚಿವಾಲಯದ ಅಧೀನ ಕಾರ್ಯದರ್ಶಿಯವರು ಹೊರಡಿಸಿರುವ ಈ ಆದೇಶದಲ್ಲಿ ಫೌಂಡೇಶನನ್ನು ಮುಚ್ಚಲು ಯಾವುದೇ ಸಕಾರಣವನ್ನು ನೀಡದೆ ಹಠಾತ್ತಾಗಿ ಮುಚ್ಚುವ ಆದೇಶ ಹೊರಡಿಸಿರುವುದು ಸರ್ವಾಧಿಕಾರಿ ಧೋರಣೆಯಾಗಿದೆ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಾರ್ಚ್‌ 1ರಂದು ಟ್ಯಾಂಕರ್ ಮಾಲೀಕರೊಂದಿಗೆ ಸಭೆ: ತುಷಾರ್ ಗಿರಿನಾಥ್

“ದೇಶದಲ್ಲಿ ಒಂದು ಜನಾಂಗವನ್ನು ಗುರಿಯಾಗಿಸಿಕೊಂಡು, ಅವರ ಮೇಲೆ ನಡೆಸುತ್ತಿರುವ ನಿರಂತರ ದೌರ್ಜನ್ಯ  ದ್ವೇಷ ರಾಜಕಾರಣದ ಪರಮಾವಧಿಯ ಹೆಜ್ಜೆ ಇದಾಗಿದೆ. ಇದು ಕೇಂದ್ರದ “ಸಬ್ ಕಾ ಸಾಥ್, ಸಬ್ ಕಾ ವಿಕಾಸ್” ಎನ್ನುವುದು ಪೊಳ್ಳು ಘೋಷವಾಕ್ಯ ಎಂಬುದನ್ನು ಮತ್ತೊಮ್ಮ ಬಯಲು ಮಾಡಿದೆ.  ಕೇಂದ್ರ ಸರ್ಕಾರ ತನ್ನ ಘೋಷವಾಕ್ಯಕ್ಕೆ ವಿರುದ್ಧವಾಗಿ ನಡೆಯುತ್ತಿದೆ” ಎಂದಿದ್ದಾರೆ.

“ಕೇಂದ್ರ ಸರ್ಕಾರ ತನ್ನ ಈ ನಿರ್ಧಾರವನ್ನು ಕೂಡಲೇ ಕೈಬಿಡಬೇಕು. ಫೌಂಡೇಶನ್‌ ವತಿಯಿಂದ ನಡೆಯುತ್ತಿರುವ ಎಲ್ಲ ಶೈಕ್ಷಣಿಕ ಕಾರ್ಯಕ್ರಮಗಳನ್ನು ಮುಂದುವರಿಸುವ ಮೂಲಕ ಫೌಂಡೇಶನ್‌ ಅನ್ನು ಮತ್ತಷ್ಟು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು” ಎಂದು ಮೂಲಭೂತ ಶಿಕ್ಷಣಕ್ಕಾಗಿ ಜನಾಂದೋಲನಗಳ ಸಮನ್ವಯ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

Download Eedina App Android / iOS

X