ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
“ನವಲಿ ಬಳಿ ತುಂಗಭದ್ರ ನದಿಗೆ ಅಡ್ಡಲಾಗಿ ಸಮನಾಂತರ ಜಲಾಶಯ ನಿರ್ಮಾಣ ಮಾಡಬೇಕು. ಆಲಮಟ್ಟಿಗೆ ಜಲಾಶಯ ಎತ್ತರಗೊಳಿಸಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೂಲಿ ಕೆಲಸ ಹಣವನ್ನು ಒದಗಿಸಿಕೊಡಬೇಕು. ರೈತರ ವೈಯಕ್ತಿಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿಬೇಕು. ಕೆರೆಗಳ ಹೂಳೆತ್ತಿ ನೀರು ತುಂಬಿಸಬೇಕು” ಎಂದು ಸಂಘಟನಾಕರರು ಒತ್ತಾಯಿಸಿದರು.
ದೊಂಗರಾಂಪೂರ ಏತ ನೀರಾವರಿ ಯೋಜನೆಗೆ ನಿರ್ಮಿಸಿದ ತಡೆಗೋಡೆ ದುರಸ್ತಿಗೊಳಿಸಬೇಕು. ಬರಗಾಲ ಹಿನ್ನೆಲೆಯಲ್ಲಿ ಜನ ಜಾನುವಾರುಗಳಿಗೆ ನೀರು ಒದಗಿಸಿಕೊಡಲು ಕೃಷ್ಣಾ ನದಿಗೆ ನೀರು ಹರಿಸಬೇಕು. ಫಸಲ್ ಭೀಮಾ ಯೋಜನೆಯಡಿ ಅಕ್ರಮವಾಗಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು. ಮನರೇಗಾ ಹಾಗೂ ಪಿಎಂ ಕಿಸಾನ್ ಯೋಜನೆಯ ಹಣವನ್ನು ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಗ್ರಾಮೀಣ ಬ್ಯಾಂಕುಗಳಿಗೆ ಬಿಡುಗಡೆ ಮಾಡುತ್ತಿದ್ದು, ಹಳೆ ಸಾಲದ ಖಾತೆಗಳಿಗೆ ಹಣ ಹಾಕುತ್ತಿರುವುದರಿಂದ ಬ್ಯಾಂಕ್ ಅಧಿಕಾರಿಗಳು ಮಾಹಿತಿ ನೀಡದೆ ಹಣವನ್ನು ಪಡೆಯುತ್ತಿದ್ದಾರೆ. ಇದರಿಂದ ಕೂಲಿಕಾರರಿಗೆ, ರೈತರಿಗೆ ತೊಂದರೆಯಾಗುತ್ತಿದೆ. ಇದನ್ನು ಕೂಡಲೇ ತಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ವಹಿಸಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅಂಬೇಡ್ಕರ್ ಮೂರ್ತಿಗೆ ಅವಮಾನ ಪ್ರಕರಣ; ಆರೋಪಿತರ ಜಾಮೀನು ಅರ್ಜಿ ರದ್ದು
ಈ ಸಂದರ್ಭದಲ್ಲಿ ಅಧ್ಯಕ್ಷ ನರಸಿಂಹ ನಾಯಕ ಕಮಲಾಪೂರ, ಗೌರವಾಧ್ಯಕ್ಷ ಸತ್ಯರೆಡ್ಡಿ, ಕಲ್ಯಾಣ ಕರ್ನಾಟಕ ಅಧ್ಯಕ್ಷ ಧರ್ಮರೆಡ್ಡಿ, ಕೆ ರಂಗನಾಥ, ಈರಣ್ಣ, ಶಿವಶರಣ ಸಾಹುಕಾರ, ಸಂಗಮೇಶ ನಾಯಕ, ಹನುಮೇಶ ನಾಯಕ, ಮಲ್ಲನಗೌಡ, ಶಿವಪ್ಪ, ಗಣೇಶ, ಮಲ್ಲಿಕಾರ್ಜುನ ಸೇರಿದಂತೆ ಅನೇಕರು ಇದ್ದರು.
ವರದಿ : ಹಫೀಜುಲ್ಲ