ಹಿಂದುಳಿದ ವರ್ಗಗಳ ಆಯೋಗದ ವರದಿ ಸರ್ಕಾರಕ್ಕೆ ಸಲ್ಲಿಕೆ

Date:

Advertisements

ಜಾತಿ ಗಣತಿ ವರದಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.

ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಗುರುವಾರ ಜಯಪ್ರಕಾಶ್ ಹೆಗ್ಡೆ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದರು.

ವರದಿ ಸಲ್ಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಯಪ್ರಕಾಶ್ ಹೆಗ್ಡೆ, “ನಮ್ಮ ಯಾವುದೇ ದಾಖಲೆಗಳು ಕಳೆದು ಹೋಗಿಲ್ಲ. ಇದು ಕೇವಲ ಮಾಧ್ಯಮಗಳ ಸೃಷ್ಟಿ. ನಮ್ಮ ವರದಿಯ ಅಂಶಗಳನ್ನು ನಾವು ಬಹಿರಂಗಪಡಿಸಲು ಸಾಧ್ಯವಿಲ್ಲ. ಅದು ಸರ್ಕಾರದ ಕೆಲಸ” ಎಂದರು.

Advertisements

“2014-15ರಲ್ಲಿ ಕಾಂತರಾಜ್‌ ಸಮಿತಿ ದತ್ತಾಂಶ ಸಂಗ್ರಹ ಮಾಡಿದ್ದ ವರದಿಯನ್ನು ಸಿಎಂಗೆ ಸಲ್ಲಿಸಿದ್ದೇವೆ. ಸಿಎಂ ಮುಂದಿನ ಸಂಪುಟ ‌ಸಭೆಯಲ್ಲಿ ವರದಿಯನ್ನು ಇಡುವುದಾಗಿ ಹೇಳಿದ್ದಾರೆ. ನಾವು ವರದಿ ಸರ್ಕಾರಕ್ಕೆ ನೀಡಿದ್ದೇವೆ. ಮುಂದಿನ ಬೆಳವಣಿಗೆ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ. ಸಂಪೂರ್ಣ ವರದಿ ಓದದೆ ಜಾತಿಗಣತಿ ವರದಿ ಅವೈಜ್ಞಾನಿಕ ಅನ್ನೋದು ಸರಿಯಲ್ಲ. ಈ ವರದಿಯಲ್ಲಿ ಎಲ್ಲಾ ಸದಸ್ಯರ ಸಹಿ ಇದೆ. ಇದು ಕಾಂತರಾಜ್ ವರದಿಗೆ ಉತ್ತರ ನೀಡುವ‌ ವರದಿಯಾಗಿದೆ. ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಇದು ಜಾತಿ ಗಣತಿ ವರದಿಯಲ್ಲ. ಸಾಮಾಜಿಕ-ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿ” ಎಂದು ಹೇಳಿದರು.

ಈ ಹಿಂದೆಯೇ ಸಲ್ಲಿಕೆಯಾಗಬೇಕಿತ್ತು

ಈ ಹಿಂದೆಯೇ ಜಾತಿ ಗಣತಿ ವರದಿ ಸರಕಾರಕ್ಕೆ ಸಲ್ಲಿಕೆಯಾಗಬೇಕಿತ್ತು. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ಅಧ್ಯಕ್ಷ ಕೆ ಜಯಪ್ರಕಾಶ್‌ ಹೆಗ್ಡೆ ಮತ್ತು ಸದಸ್ಯರ ಅವಧಿ ಕಳೆದ ನವೆಂಬರ್‌ನಲ್ಲಿ ಮುಗಿದಿತ್ತು. ಪರಿಷ್ಕೃತ ಸಮಗ್ರ ವರದಿ ಅಂತಿಮಗೊಳಿಸಲು ಕಾಲಾವಕಾಶ ಅಗತ್ಯವಿದೆ ಎಂಬ ಕಾರಣಕ್ಕೆ ಸರಕಾರ ಅವಧಿಯನ್ನು ಜನವರಿ 31ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು.

ವರದಿ ಅಂತಿಮಗೊಳಿಸುವ ಹಾಗೂ ಮುದ್ರಣಕ್ಕೆ ಕಾಲಾವಕಾಶದ ಕಾರಣಕ್ಕೆ ಆಯೋಗದ ಅಧ್ಯಕ್ಷ ಮತ್ತು ಸದಸ್ಯರ ಅವಧಿಯನ್ನು 2ನೇ ಬಾರಿಗೆ ಫೆಬ್ರವರಿ 29ರವರೆಗೆ ವಿಸ್ತರಣೆ ಮಾಡಲಾಗಿತ್ತು. ಇದೀಗ ತಮ್ಮ ಅಧಿಕಾರಾವಧಿಯ ಕೊನೆಯ ದಿನ ಜಾತಿ ಗಣತಿ ವರದಿಯನ್ನು ಸರಕಾರಕ್ಕೆ ಸಲ್ಲಿಸಿ ಜಯಪ್ರಕಾಶ್‌ ಹೆಗ್ಡೆ ತಮ್ಮ ಜವಾಬ್ದಾರಿ ಪೂರೈಸಿದ್ದಾರೆ.

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರು ಸಲ್ಲಿಸಿರುವ ವರದಿಯಲ್ಲಿ ಒಟ್ಟು 13 ಪ್ರತಿಗಳಿದ್ದು, ಅವುಗಳಲ್ಲಿ ಈ ಕೆಳಗಿನ ಪ್ರಮುಖ ಅಂಶಗಳಿವೆ.

  1. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ಸಮಗ್ರ ರಾಜ್ಯ ವರದಿ
  2. ಜಾತಿವಾರು ಜನಸಂಖ್ಯೆ ವಿವರ – 1 ಸಂಪುಟ
  3. ಜಾತಿ / ವರ್ಗಗಳ ಲಕ್ಷಣಗಳು(ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನ ಹೊರತುಪಡಿಸಿ)
  4. ಜಾತಿ / ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಜಾತಿಗಳು)
  5. ಜಾತಿ ವರ್ಗಗಳ ಪ್ರಮುಖ ಲಕ್ಷಣಗಳು (ಪರಿಶಿಷ್ಟ ಪಂಗಡಗಳು)
  6. ವಿಧಾನಸಭಾ ಕ್ಷೇತ್ರಗಳ ಜಾತಿವಾರು ಅಂಕಿ-ಅಂಶಗಳು (ಎರಡು ಸಿಡಿಗಳು)
  7. ಸಾಮಾಜಿಕ ಮತ್ತು ಶೈಕ್ಷಣಿಕ ಸಂಸ್ಥೆ 201 ರ ದತ್ತಾಂಶಗಳ ಅಧ್ಯಯನ ವರದಿ-2024

ವಿರೋಧದ ನಡುವೆಯೂ ಸಲ್ಲಿಕೆ

ಜಾತಿ ಜನಗಣತಿ ಸ್ವೀಕಾರ ಆಕ್ಷೇಪಿಸಿ ಲಿಂಗಾಯತ ಸ್ವಾಮೀಗಳು, ಒಕ್ಕಲಿಗ ಸ್ವಾಮೀಜಿಗಳು, ಮುಖಂಡರು ಮುಖ್ಯಮಂತ್ರಿಗೆ ಪತ್ರ ನೀಡಿದ್ದರು. ಉಪಮುಖ್ಯಮಂತ್ರಿ ಹಾಗೂ ಒಕ್ಕಲಿಗ ಸಮುದಾಯದ ಮುಖಂಡ ಡಿ.ಕೆ.ಶಿವಕುಮಾರ್ ಸಹಿ ಇತ್ತು. ಇದು ಪರ ವಿರೋಧಕ್ಕೆ ಎಡೆಮಾಡಿಕೊಟ್ಟಿತ್ತು. ಹಾಗೆಯೇ ಕಾಂಗ್ರೆಸ್‌ ಲಿಂಗಾಯತ ನಾಯಕರೂ ಕೂಡ ಈ ಬಗ್ಗೆ ಆಕ್ಷೇಪಣೆ ವ್ಯಕ್ತಪಡಿಸಿದ್ದರು.

ಇದಾದ ನಂತರ ಹಲವು ವೇದಿಕೆಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವರದಿ ಸ್ವೀಕಾರಕ್ಕೆ ಬದ್ಧ ಎಂದು ಹೇಳಿದ್ದರು. ಜತೆಗೆ ಈಚೆಗಷ್ಟೇ ಸ್ವತಃ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಕೂಡ, “ವರದಿ ಸ್ವೀಕರಿಸುವ ಬಗ್ಗೆ ಸರಕಾರಕ್ಕೆ ಬದ್ಧತೆ ಇದೆ. ಸ್ವೀಕರಿಸಿಯೇ ತೀರುತ್ತೇವೆ. ಪಲಾಯನದ ಪ್ರಶ್ನೆ ಇಲ್ಲ. ಫೆ. 29ರವರೆಗೆ ಕಾಯಿರಿ” ಎಂದು ಸುಳಿವು ನೀಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X