ವಿಜಯಪುರ | ಸಿಕ್ಕ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಗುರಿ ಮುಟ್ಟಬೇಕು; ಪತ್ರಕರ್ತ ರಫೀ ಭಂಡಾರಿ

Date:

Advertisements

ನಿಮ್ಮ ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳುವುದು ನಿಮ್ಮ ಕೈಯಲ್ಲಿದೆ. ನಿಮಗೆ ಸಿಕ್ಕಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಗುರಿ ಮುಟ್ಟಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮತ್ತು ಹಿರಿಯ ಪತ್ರಕರ್ತ ರಫೀ ಭಂಡಾರಿ ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ವಿಜಯಪುರದಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗಾಗಿ ಹಮ್ಮಿಕೊಂಡಿದ್ದ ‘ನವೋಲ್ಲಾಸ 2024’ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೀವೆಲ್ಲರೂ ಪತ್ರಿಕೋದ್ಯಮ ಅಧ್ಯಯನ ನಡೆಸುತ್ತಿರುವುದು ಉತ್ತಮ ಸಂಗತಿ. ಅಧ್ಯಯನಕ್ಕೆ ಆರ್ಥಿಕ ಸಮಸ್ಯೆ, ಒತ್ತಡದ ಸಮಸ್ಯೆಗಳು ಅಡ್ಡಿಯಾಗಬಹುದು. ಅಂತಹ ಸಮಸ್ಯೆಗಳನ್ನೆಲ್ಲ ಮೀರಿ ಅವುಗಳನ್ನು ಮೆಟ್ಟಿ ನಿಲ್ಲುವ ಮೂಲಕ ನಿಮ್ಮ ಗುರಿಯನ್ನು ನೀವು ಸಾಧಿಸಬೇಕು. ಪತ್ರಿಕೋದ್ಯಮ ವಿಷಯವನ್ನು ಆಯ್ಕೆ ಮಾಡಿಕೊಳ್ಳುವುದು ಅಷ್ಟು ಸುಲಭವಲ್ಲ, ಎಷ್ಟೋ ಕಷ್ಟದ ಸಂದರ್ಭಗಳು ಎದುರಾಗುತ್ತವೆ. ಅವುಗಳನ್ನು ಧೈರ್ಯವಾಗಿ ಎದುರಿಸಿ ನಿಲ್ಲಬೇಕು. ಅಂದಾಗ ಮಾತ್ರ ನೀವು ನಿಮ್ಮ ಗುರಿ ಮುಟ್ಟಲು ಸಾಧ್ಯ ಎಂದರು.

Advertisements

ಮುಖ್ಯ ಅತಿಥಿಯಾಗಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಚೂರಿ ಮಾತನಾಡಿ, ಪತ್ರಿಕೋದ್ಯಮ ಎನ್ನುವುದು ನಮ್ಮ ರಕ್ತದಲ್ಲಿ ಇರಬೇಕು. ಅದನ್ನು ಕಲಿಯುವ ತುಡಿತ, ಆಸಕ್ತಿ ಜೊತೆಗೆ ಶ್ರಮ ಪಟ್ಟರೆ ಈ ರಂಗದಲ್ಲಿ ಯಶಸ್ಸು ಕಂಡುಕೊಳ್ಳಲು ಸಾಧ್ಯ ಎಂದರ ಅವರು,

ಈ ವೇಗದ ಜಗತ್ತಿನಲ್ಲಿ ತಮ್ಮ ಸ್ವ-ಇಚ್ಛೆಯಿಂದ ಈ ವಿಭಾಗಕ್ಕೆ ಆಗಮಿಸಿರುವ ಪತ್ರಿಕೋದ್ಯಮ ವಿದ್ಯಾರ್ಥಿನಿಯರಿಗೆ ಪರಿಪೂರ್ಣ ಜೀವನವನ್ನು ಕಟ್ಟಿಕೊಳ್ಳಲು ಈ ವಿಭಾಗ ಸಹಾಯಕವಾಗುತ್ತದೆ. ಪತ್ರಿಕೋದ್ಯಮ ಎಂದರೆ, ನಮ್ಮ ರಾಷ್ಟ್ರದ ನಾಲ್ಕನೇ ಅಂಗವಿದ್ದಂತೆ. ಇಲ್ಲಿ ಪರಿಶ್ರಮ ಮತ್ತು ಪ್ರಾಮಾಣಿಕತೆ ಅತೀ ಮುಖ್ಯವಾದದ್ದು, ಹಾಗೇ ನಿಷ್ಠೆಯಿಂದ ಕೆಲಸ ಮಾಡಬೇಕಾಗುತ್ತದೆ. ಅಂದಾಗ ಮಾತ್ರ ನಾವು ಒಳ್ಳೆಯ ಪತ್ರಕರ್ತರಾಗಲು ಸಾಧ್ಯ ಎಂದರು.

ಇನ್ನು ನಾನು ಕಲಿಯುವಾಗಲೂ ಸಹ ಆರ್ಥಿಕ ತೊಂದರೆಯಿಂದ ನನ್ನ ವಿದ್ಯಾಭ್ಯಾಸವನ್ನು ಪರಿಪೂರ್ಣಗೊಳಿಸಲು ಸಾಧ್ಯವಾಗಿರಲಿಲ್ಲ. ಅದರಂತೆ ನಾವು ಈ ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ ಆ ಸಂಕಷ್ಟ ಎದುರಾಗಬಾರದು ಎಂಬುವುದು ನಮ್ಮೆಲ್ಲರ ಆಶಯ. ಈ ಮೂಲಕ ನಾವು ಸರ್ಕಾರಕ್ಕೆ ಮನವಿ ಸಲ್ಲಿಸಿ ಪತ್ರಿಕೋದ್ಯಮ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ನೀಡುವಂತೆ ಒತ್ತಾಯಿಸುತ್ತೇವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂಹವನ ವಿಭಾಗದ ಮುಖ್ಯಸ್ತ ಪ್ರೊ. ಓಂಕಾರ ಕಾಕಡೆ ಮಾತನಾಡಿ, ಪತ್ರಿಕೋದ್ಯಮಕ್ಕೆ ಧೂಮಿಕಿದ ನಾವೆಲ್ಲರೂ ಸಾಮಾಜಿಕ ಬದಲಾವಣೆಯ ಸಾಧನವಾಗಿ ಹಾಗೂ ಹರಿಕಾರರಾಗಿ ಕೆಲಸ ಮಾಡಬೇಕಾಗಿದೆ ಎಂದರು.

ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಫುಲವಾದ ಅವಕಾಶಗಳಿದ್ದು, ಕ್ಷಿಪ್ರವಾಗಿ ಬದಲಾಗುತ್ತಿರುವ ಈ ತಂತ್ರಜ್ಞಾನ ಯುಗದಲ್ಲಿ ನೀವು ಇಲ್ಲಿರುವ ಅವಕಾಶಗಳನ್ನು ಬಳಸಿಕೊಂಡು ನಿಮ್ಮ ವೃತ್ತಿ ಜೀವನದಲ್ಲಿ ಯಶಸ್ಸುನ್ನು ಕಾಣಿರಿ ಎಂದು ಆಶಯ ವ್ಯಕ್ತಪಡಿಸಿದರು.

ಸಹಾಯಕ ಪ್ರಾಧ್ಯಾಪಕರಾದ ಡಾ. ತಹಾಮೀನಾ ಕೋಲಾರ ಮತ್ತು ಸಂದೀಪ್ ನಾಯಕ ಮಾತನಾಡಿದರು. ಈ ಸಂದರ್ಭದಲ್ಲಿ ಪತ್ರಕರ್ತ ರಫಿ ಭಂಡಾರಿ ಮತ್ತು ಸಂಗಮೇಶ ಚೂರಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ, ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಶೃತಿ ಬೆಳ್ಳೂಡಿಗಿ ಸ್ವಾಗತಿಸಿದರು. ಖತೀಜಾ ಖಾನ್ ನಿರೂಪಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X