ಬೆಂಗಳೂರಿನ ವೈಟ್ ಫೀಲ್ಡ್ ಕುಂದಲಹಳ್ಳಿ ಬಳಿಯ ಪ್ರಸಿದ್ಧ ಹೋಟೆಲ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 8ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಗಾಯಗೊಂಡವರ ಪೈಕಿ ಮೂವರು ಹೋಟೆಲ್ ಸಿಬ್ಬಂದಿ ಎಂದು ವರದಿಗಳು ತಿಳಿಸಿವೆ. ಮಹಿಳೆಯೊಬ್ಬರು ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಸ್ಪೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಸಂಪೂರ್ಣ ಹಾನಿಯಾಗಿದೆ.
ನಿಗೂಢ ಸ್ಫೋಟದ ವೇಳೆ ಭಾರೀ ಪ್ರಮಾಣದ ಶಬ್ಧವಾಗಿದೆ. ಇದರಿಂದ ಜನರು ಒಂದು ಕ್ಷಣ ಭಯಭೀತರಾಗಿ ಓಡಿ ಹೋಗಿದ್ದು, ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಬೆಂಗಳೂರಿನ ಇಂದಿರಾನಗರದ ಕುಂದಲಹಳ್ಳಿ ಬಳಿಯ ಪ್ರಸಿದ್ಧ ಹೋಟೇಲ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ 8ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.#bengaluru #rameswaramcafe #indiranagar #gas pic.twitter.com/fYv1etneOr
— eedina.com (@eedinanews) March 1, 2024
ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ, ಸಿಲಿಂಡರ್ ಸ್ಫೋಟಗೊಂಡಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಕೂಡಲೇ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
#WATCH | Karnataka | An explosion occurred at The Rameshwaram Cafe in Whitefield, Bengaluru. Injuries reported. Details awaited.
Whitefield Fire Station says, “We received a call that a cylinder blast occurred in the Rameshawaram cafe. We reached the spot and we are analysing… pic.twitter.com/uMLnMFoHIm
— ANI (@ANI) March 1, 2024
ಕೆಫೆಯಲ್ಲಿ ಸ್ಫೋಟ ಸಂಭವಿಸಿದ ಸುದ್ದಿ ತಿಳಿಯುತ್ತಿದ್ದಂತೆಯೇ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ, ವೈಟ್‌ಫೀಲ್ಡ್ ಉಪ ಪೊಲೀಸ್ ಆಯುಕ್ತರು ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಸ್ಫೋಟದಲ್ಲಿ ಕೆಲ ಐಡಿ ಕಾರ್ಡ್ಗಳು ದೊರೆತಿವೆ. ಈ ಹಿನ್ನೆಲೆಯಲ್ಲಿ ಹಲವು ಅನುಮಾನಗಳು ವ್ಯಕ್ತವಾಗಿವೆ.
ಸದ್ಯ ಎಚ್ಎಎಲ್ ಪೊಲೀಸರು ಸ್ಫೋಟದಲ್ಲಿ ಸಿಕ್ಕ ಐಡಿ ಕಾರ್ಡ್ ಆಧರಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ತತ್ವಾರ : ಖಾಲಿ ಬಿಂದಿಗೆ ಹಿಡಿದು ಸರ್ಕಾರದ ವಿರುದ್ಧ ಜನರ ಆಕ್ರೋಶ
ಇತ್ತ ಸ್ಪೋಟ ನಡೆದ ರಾಮೇಶ್ವರಂ ಕೆಫೆಯತ್ತ ಎಫ್ಎಸ್ಎಲ್ ತಂಡದ ಸಿಬ್ಬಂದಿ ಆಗಮಿಸಿದ್ದಾರೆ. ಘಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಗೃಹ ಸಚಿವ ಪರಮೇಶ್ವರ್ ಮಾಹಿತಿ ಪಡೆದುಕೊಂಡಿದ್ದಾರೆ.
ರಾಮೇಶ್ವರಂ ಕೆಫೆಯು ಬೆಂಗಳೂರಿನ ಅತ್ಯಂತ ಜನಪ್ರಿಯ ಹೋಟೆಲ್‌ಗಳ ಪೈಕಿ ಒಂದಾಗಿ ಗುರುತಿಸಿಕೊಂಡಿದ್ದು, ಬಾಲಿವುಡ್ ಸೇರಿದಂತೆ ಹಲವು ಗಣ್ಯ ವ್ಯಕ್ತಿಗಳ ನೆಚ್ಚಿನ ತಾಣ ಕೂಡ ಆಗಿದೆ.
#Karnataka#bengaluru#rameshwaram cafe blast.
The forensic science laboratory team has arrived at the spot for further probe. 5 injured and yet to ascertain reason behind the blast.
Residents panicked after the incident. pic.twitter.com/sObnZFoLXI— Express Bengaluru (@IEBengaluru) March 1, 2024