ನಾಮಪತ್ರ ಸಲ್ಲಿಕೆಗೆ ಮೂರು ದಿನಗಳು ಬಾಕಿ ಇರುವ ಹೊತ್ತಲ್ಲೇ ರಾಜ್ಯ ರಾಜಕಾರಣದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಜೋರಾಗಿದೆ. ಎಲ್ಲ ರಾಜಕೀಯ ಪಕ್ಷಗಳ ನಾಯಕರು ನಾ ಮುಂದು ತಾ ಮುಂದು ಎಂದು ನಾಮಪತ್ರ ಸಲ್ಲಿಕೆ ಜೊತೆಜೊತೆಗೆ ಬೃಹತ್ ಮೆರವಣಿಗೆಯನ್ನೂ ಹಮ್ಮಿಕೊಂಡಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ಸಚಿವ ವಿ ಸೋಮಣ್ಣ, ಆರ್ ಅಶೋಕ್ ಸೇರಿದಂತೆ ಘಟಾನುಘಟಿಗಳು ಇಂದು (ಏಪ್ರಿಲ್ 17) ನಾಮಪತ್ರ ಸಲ್ಲಿಸಿದ್ದಾರೆ. ಹಾಗೆಯೇ ತಮ್ಮ ಶಕ್ತಿ ಪ್ರದರ್ಶನವನ್ನೂ ಮಾಡಿದ್ದಾರೆ.
ರಾಜಕೀಯ ನಾಯಕರು ನಾಮಪತ್ರ ಸಲ್ಲಿಸಿರುವ ಕೆಲವು ಚಿತ್ರಗಳು ಇಲ್ಲಿವೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಕನಕಪುರ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆಗೂ ಮೊದಲು ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದರು.
ಡಿ ಕೆ ಶಿವಕುಮಾರ್ ಅವರು ಬೃಹತ್ ಮೆರವಣಿಗೆ ಬಳಿಕ ಕನಕಪುರ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದರು.




ರವಿ ಸಿ (ಪದ್ಮನಾಭನಗರ ಮಂಡಲ ಅಧ್ಯಕ್ಷರು) ನಿಕಟಪೂರ್ವ ಬಿಬಿಎಂಪಿ ಸದಸ್ಯ ಎಲ್ ಶ್ರೀನಿವಾಸ್ ಸೇರಿದಂತೆ ಸಹಸ್ರಾರು ಕಾರ್ಯಕರ್ತರು ಈ ಸಂದರ್ಭದಲ್ಲಿ ಹಾಜರಿದ್ದರು.



