ನೀತಿ ಸಂಹಿತೆ ಜಾರಿ | ಅಕ್ರಮ ಮದ್ಯ, ದಾಸ್ತಾನು ಸಾಗಾಟ ತಡೆಗೆ ರ‍್ಯಾಂಕಿಂಗ್ ಮಾದರಿ ಟಾಸ್ಕ್‌

Date:

Advertisements

ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟವಾದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ಆದರೂ, ಮತದಾರರಿಗೆ ಅಭ್ಯರ್ಥಿಗಳು ಮದ್ಯದ ಆಮಿಷ ಒಡ್ಡುತ್ತಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಅಕ್ರಮ ಮದ್ಯ ದಾಸ್ತಾನು, ಸಾಗಾಟ ಹಾಗೂ ಮಾರಾಟ ತಡೆಗೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ರ‍್ಯಾಂಕಿಂಗ್ ಮಾದರಿ ಟಾಸ್ಕ್ ಕೊಟ್ಟಿದೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ 23 ದಿನಗಳು ಬಾಕಿಯಿದ್ದು, ಕೆಲ ರಾಜಕೀಯ ಅಭ್ಯರ್ಥಿಗಳು ಮತದಾರರಿಗೆ ಆಮಿಷವೊಡ್ಡಲು ಅಡ್ಡದಾರಿಯಲ್ಲಿ ಕೋಟ್ಯಂತರ ರೂ. ಮೌಲ್ಯದ ಮದ್ಯ ಸಂಗ್ರಹಿಸುತ್ತಿದ್ದಾರೆ. ಹಾಗಾಗಿ, ಮದ್ಯ ಖರೀದಿ ಮೇಲೆ ಚುನಾವಣಾ ಆಯೋಗ ಹಾಗೂ ಅಬಕಾರಿ ಇಲಾಖೆ ಕಣ್ಗಾವಲು ಇಟ್ಟಿವೆ. ಹೊಸ ರ‍್ಯಾಂಕಿಂಗ್ ಮಾದರಿ ಟಾಸ್ಕ್​ನಲ್ಲಿ ಅಕ್ರಮ ಮದ್ಯ ಮಾರಾಟ ತಡೆ, ಪ್ರಕರಣ ದಾಖಲಿಸಲು ವಿಫಲವಾಗಿರುವ ಅಧಿಕಾರಿಗಳ ವಿರದ್ಧ ಇಲಾಖೆ ಕಠಿಣ ಕ್ರಮ ಕೈಗೊಳ್ಳಲಿದೆ.

ಬೆಳಗಾವಿ ವಿಭಾಗದ 5, ಮಂಗಳೂರು ಮತ್ತು ಹೊಸಪೇಟೆ ವಿಭಾಗದಲ್ಲಿ ತಲಾ 4, ಮೈಸೂರು, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಉತ್ತರ ವಿಭಾಗದಲ್ಲಿ ತಲಾ 5 ಹಾಗೂ ಕಲಬುರಗಿ ವ್ಯಾಪ್ತಿಯಲ್ಲಿ ಒಂದು ಜಿಲ್ಲೆ ಸೇರಿ 20 ಜಿಲ್ಲೆಗಳು ಅಕ್ರಮ ಮದ್ಯ ಮಾರಾಟ ತಡೆಯುವಲ್ಲಿ ವಿಫಲವಾಗಿವೆ. ಈ ಜಿಲ್ಲೆಗಳಲ್ಲಿ ಅಬಕಾರಿ ಉಪ ಆಯುಕ್ತರು ಸೇರಿ ಇತರ ಸಿಬ್ಬಂದಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಕೇಸ್ ದಾಖಲಿಸಲು ವಿಫಲರಾಗಿದ್ದಾರೆ. ನಿಯಮ ಉಲ್ಲಂಘನೆ ಆಗಿರುವುದು ರ‍್ಯಾಂಕಿಂಗ್ ಪಟ್ಟಿಯ ವರದಿಯಲ್ಲಿ ದಾಖಲಾಗಿದೆ.

Advertisements

ಮಾರ್ಚ್‌ 4ರಿಂದ ಏಪ್ರಿಲ್‌ 4ರವರೆಗೆ ರಾಜ್ಯಾದ್ಯಂತ 39 ಕೋಟಿ ರೂ. ಮೌಲ್ಯದ 5,18,546 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದ್ದು, 7,268 ಪ್ರಕರಣ ದಾಖಲಾಗಿವೆ. 1,351 ಗಂಭೀರ ಪ್ರಕರಣ​ಗಳು ವರದಿಯಾಗಿದ್ದು, 5,823 ಮಂದಿಯನ್ನು ಬಂಧಿಸಲಾಗಿದೆ. ಅಕ್ರಮಮದ್ಯ ಸಾಗಿಸುತ್ತಿದ್ದ 759 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಎಚ್.ಡಿ.ಕೋಟೆ, ಮಂಗಳೂರು, ದಾವಣಗೆರೆ, ಗುಂಡ್ಲುಪೇಟೆ, ಚಾಮರಾಜನಗರ, ಯಲ್ಲಾಪುರ, ಬೆಳ್ತಂಗಡಿ, ಮಾಗಡಿ, ಶ್ರವಣಬೆಳಗೊಳ, ನೆಲಮಂಗಲ, ಕೃಷ್ಣರಾಜ, ದೇವದುರ್ಗ, ಹುಬ್ಬಳ್ಳಿ-ಧಾರವಾಡ ಪಶ್ಚಿಮ, ಚಾಮರಾಜಪೇಟೆ, ಕುಡಚಿ, ಧಾರವಾಡ, ಹೊಸದುರ್ಗ, ಬೆಳಗಾವಿ ದಕ್ಷಿಣ, ಬೇಲೂರು, ರಾಜಾಜಿನಗರ, ಕಾರ್ಕಳ, ದಾವಣಗೆರೆ ಹಾಗೂ ಅರಬಾವಿ ಸೇರಿದಂತೆ ರಾಜ್ಯದ ಇತರ ವಿಧಾನಸಭಾ ಕ್ಷೇತ್ರಗಳಲ್ಲಿ ಅಕ್ರಮ ಮದ್ಯ ಮಾರಾಟ ಸಂಬಂಧ ಹಲವಾರು ಪ್ರಕರಣಗಳು ದಾಖಲಾಗಿವೆ.

ಬೆಂಗಳೂರಿನಲ್ಲಿ 20 ಕೋಟಿ ರೂ.ಗೂ ಹೆಚ್ಚು ಮೊತ್ತದ ಮದ್ಯ ವಶಪಡಿಸಿಕೊಂಡು ಹಲವು ಪ್ರಕರಣಗಳನ್ನು ದಾಖಲಿಸಲಾಗಿದೆ. ಕೊಪ್ಪಳ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ಚಿತ್ರದುರ್ಗ, ಬಳ್ಳಾರಿ ಮತ್ತು ಗದಗ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣ​ಗಳು ದಾಖಲಾಗಿಲ್ಲ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ʼಶುಭ ಸೋಮವಾರʼಕ್ಕೆ ಭರ್ಜರಿ ಕ್ಯೂ; ನಾಮಪತ್ರ ಸಲ್ಲಿಸಿದ ಹಲವು ನಾಯಕರು

ಅಬಕಾರಿ ಸಚಿವ ಕೆ ಗೋಪಾಲಯ್ಯ ಪ್ರತಿನಿಧಿಸುವ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರ ವ್ಯಾಪ್ತಿಯಲ್ಲಿ 39 ಕೇಸ್ ದಾಖಲಿಸಿ 78,38,796 ಮೌಲ್ಯದ 2,895 ಲೀ. ಮದ್ಯ ವಶಪಡಿಸಿಕೊಳ್ಳಲಾಗಿದ್ದು, 25 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಅಕ್ರಮ ಮದ್ಯ ಮಾರಾಟ ತಡೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳಿಗೆ ರ‍್ಯಾಂಕಿಂಗ್ ಹಾಗೂ ಅಂಕಗಳನ್ನು ನೀಡಲಾಗುತ್ತಿದೆ. ಮದ್ಯ ವಶ, ಮದ್ಯ ಮಾರಾಟ ಮಾಡುವವರ ಕುರಿತು ಪ್ರಕರಣ ದಾಖಲಿಸಿ ಅಂಥವರನ್ನು ಬಂಧಿಸುವಲ್ಲಿ  ಹಾಗೂ ಹೆಚ್ಚು ಪ್ರಕರಣ ದಾಖಲಿಸುವಲ್ಲಿ ಯಶಸ್ವಿಯಾದ  ಉಪ ಆಯುಕ್ತರಿಗೆ ಅಥವಾ ಜಿಲ್ಲೆಗೆ ರ‍್ಯಾಂಕಿಂಗ್ ಪಟ್ಟಿಯಲ್ಲಿ ಮೊದಲ ಸ್ಥಾನ ನೀಡಲಾಗುತ್ತದೆ. ಉತ್ತಮ ಕಾರ್ಯ ನಿರ್ವಹಿಸುವಲ್ಲಿ ವಿಫಲರಾದರೆ  ರಾಂಕಿಂಗ್ ವಾರು ಹಂಚಿಕೆ ಮಾಡಲಾಗುತ್ತದೆ. ಇದನ್ನೇ ರ‍್ಯಾಂಕಿಂಗ್ ಮಾದರಿ ಟಾಸ್ಕ್‌ ಎಂದು ಹೇಳಲಾಗುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X