ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ, ಕಾಂಗ್ರೆಸ್‌ನ ಹಿರಿಯ ನಾಯಕ ಅಜೀಜ್ ಖುರೇಷಿ ಭೋಪಾಲ್‌ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
83 ವರ್ಷದ ಖುರೇಷಿ ಅವರು ಸೋದರಳಿಯ ಸುಫೈನ್ ಅಲಿ ಅವರನ್ನು ಅಗಲಿದ್ದಾರೆ. ಹಲವು ವರ್ಷಗಳಿಂದ ಖುರೇಷಿ ಅವರನ್ನು ಸುಫೈನ್ ಅಲಿ ನೋಡಿಕೊಳ್ಳುತ್ತಿದ್ದ.
“ಕೆಲವು ದಿನಗಳಿಂದ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು.ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಭೋಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು” ಎಂದು ಸುದ್ದಿ ವಾಹಿನಿಗೆ ಸುಫೈನ್ ಅಲಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಭುತ್ವ ಪೋಷಿತ ಮೈತೇಯಿ ಮಿಲಿಟೆಂಟ್ ಅಟ್ಟಹಾಸ ಮತ್ತು ಮಣಿಪುರ ಪೊಲೀಸರ ಅಸಹಾಯಕತೆ
1941ರಲ್ಲಿ ಭೋಪಾಲ್‌ನಲ್ಲಿ ಜನಿಸಿದ ಅವರು 1972ರಲ್ಲಿ ಮಧ್ಯ ಪ್ರದೇಶದ ಸೆಹೊರೆ ಕ್ಷೇತ್ರದಿಂದ ಶಾಸಕರು ಹಾಗೂ 1984ರಲ್ಲಿ ಲೋಕಸಭಾ ಸದಸ್ಯರಾಗಿದ್ದರು. 2012ರಿಂದ 2014ರವರೆಗೂ ಉತ್ತರಾಖಂಡ, ಉತ್ತರ ಪ್ರದೇಶ ಹಾಗೂ ಮಿಜೋರಾಂ ರಾಜ್ಯಗಳ ರಾಜ್ಯಪಾಲರಾಗಿ ಕಾರ್ಯ ನಿರ್ವಹಿಸಿದ್ದರು.
ದೇವರು ಅವರ ಆತ್ಮಕ್ಕೆ ಶಾಂತಿಯನ್ನು ದೊರಕಿಸಿ ಕೊಡಲಿ ಎಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಸೇರಿದಂತೆ ಹಲವು ನಾಯಕರು ಅಜೀಜ್ ಖುರೇಷಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
