ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಬಲೆಗೆ ಸಿಕ್ಕಿಕೊಂಡು ಸಾವನ್ನಪ್ಪಿದ ಘಟನೆ ಕಾಪುವಿನ ಪೊಲಿಪು ಕಡಲ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ.
ಕಾಪು ಪೊಲಿಪು ನಿವಾಸಿ ಕಿಶೋರ್ (29) ಮೃತ ದುರ್ದೈವಿ. ಪ್ರತಿದಿನ ಕಯಾಕಿಗಿಂಗ್‌ನಲ್ಲಿ ಓರ್ವನೇ ಮೀನುಗಾರಿಕೆಗೆ ತೆರಳುತ್ತಿದ್ದ ಇವರು, ಇಂದು ಮುಂಜಾನೆ ಕೂಡಾ ತೆರಳಿದ್ದರು. ಈ ಸಂದರ್ಭದಲ್ಲಿ ಮೀನುಗಾರಿಕಾ ಬಲೆಗೆ ಸಿಲುಕಿ ಅವರು ಮೃತಪಟ್ಟಿದ್ದಾರೆ.
ಸಮುದ್ರದಲ್ಲಿ ತೇಲುತ್ತಿದ್ದ ಕಯಾಕ್ ಅನ್ನು ಗಮನಿಸಿದ ಮತ್ತೊಂದು ಬೋಟಿನವರಿಗೆ ಮೃತದೇಹ ಪತ್ತೆಯಾಗಿದೆ. ನಂತರ ದಡಕ್ಕೆ ಕಯಾಕ್ ಹಾಗೂ ಮೃತದೇಹವನ್ನು ತಂದಿದ್ದಾರೆ.
ಇದನ್ನು ಓದಿದ್ದೀರಾ? ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ | ಶಂಕಿತನ ಗುರುತು ಪತ್ತೆ; ಶೀಘ್ರವೇ ಬಂಧನ: ಡಿ.ಕೆ. ಶಿವಕುಮಾರ್
ಸ್ಥಳಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಪುರಸಭಾ ಸದಸ್ಯ ಕಿರಣ್ ಆಳ್ವ, ವಿಜಯ್ ಕರ್ಕೇರ, ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಸ್ಥಳೀಯರಾದ ಶಿವಾಜಿ ಸುವರ್ಣ, ಬಾಲಕೃಷ್ಣ ಹಾಗೂ ಕಾಪು ಪೊಲೀಸರು ಭೇಟಿ ನೀಡಿದ್ದಾರೆ.
