ರಾಜ್ಯ ರಾಜ್ಯಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ. ನಾಲ್ವರನ್ನು ಶಂಕಿತರನ್ನು ಗುಪ್ತಚರ ಇಲಾಖೆ ಅಧಿಕಾರಿಗಳು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
ಮಾರ್ಚ್ 1ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ವೈಟ್ ಫೀಲ್ಡ್‌ನ ಕುಂದಲಹಳ್ಳಿ ಬಳಿಯ ಪ್ರಸಿದ್ಧ ಹೋಟೆಲ್ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಘಟನೆ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಸದ್ಯ ನಾನಾ ತನಿಖಾ ತಂಡಗಳು ರಾತ್ರಿಯೆಲ್ಲಾ ತನಿಖೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಸದ್ಯ ಪೊಲೀಸರಿಗೆ ಸಿಸಿಟಿವಿ ದೃಶ್ಯಾವಳಿಗಳು ಲಭಿಸಿದ್ದು, ಓರ್ವ ಶಂಕಿತ ಮುಖಕ್ಕೆ ಮಾಸ್ಕ್, ಕಣ್ಣಿಗೆ ಕೂಲಿಂಗ್ ಗ್ಲಾಸ್, ವೈಟ್ ಕ್ಯಾಪ್ ಧರಿಸಿ, ಕಪ್ಪು ಬಣ್ಣದ ಬ್ಯಾಗ್ ಹೆಗಲಿಗೆ ಹಾಕಿಕೊಂಡು ರಾಮೇಶ್ವರಂ ಕೆಫೆಗೆ ಬಂದಿದ್ದಾನೆ. ಕೆಫೆಯಲ್ಲಿ ಟೋಕನ್ ತೆಗೆದುಕೊಂಡು ರವೆ ಇಡ್ಲಿ ತಿಂದು ತಾನು ತಂದಿದ್ದ ಬ್ಯಾಗ್ ಅನ್ನು ಕೆಫೆಯ ಬೇಸಿನ್ ಬಳಿ ಇಟ್ಟು ಹೋಗುತ್ತಾ ವಾಚ್ನಲ್ಲಿ ಟೈಂ ನೋಡಿ ಹೋಗಿದ್ದಾನೆ. ಕೆಫೆಯಿಂದ ಹೊರಗೆ ಬಂದು ಎಡಭಾಗಕ್ಕೆ ಹೋಗಿದ್ದಾನೆ. ಆತ ಹೋದ ಸುಮಾರು ಒಂದು ಗಂಟೆಯ ಬಳಿಕ ಬಾಂಬ್ ಸ್ಫೋಟವಾಗಿದೆ. ಇದೆಲ್ಲ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ತಲೆ ಮೇಲೆ ಕ್ಯಾಪ್ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯಿಂದ ಬಾಂಬ್ ಇಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.
ಇನ್ನೊಬ್ಬ ವ್ಯಕ್ತಿ ಬೈಕ್‌ನಲ್ಲಿ ತೆರಳಿದ್ದಾನೆ ಎನ್ನಲಾಗಿದೆ. ಅನುಮಾನ ಬಂದ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ ಎನ್ನಲಾಗಿದೆ.
ಘಟನೆ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಕಾನೂನು ಬಾಹಿರ ಚಟುವಟಿಕೆ ಕಾಯ್ದೆ (ಯುಎಪಿಎ) ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಂಕಿತ ಬಾಂಬರ್ಗಾಗಿ ತೀವ್ರ ಹುಡುಕಾಟ ನಡೆಸುತ್ತಿರುವ ಪೊಲೀಸರು ಆತನನ್ನು ಪತ್ತೆ ಹಚ್ಚಲು ಎಂಟು ತಂಡಗಳನ್ನು ರಚಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಶಂಕಿತರನ್ನು ವಶಕ್ಕೆ ಪಡೆದಿರುವ ಗುಪ್ತಚರ ಇಲಾಖೆಯ ಅಧಿಕಾರಿಗಳು ಅಜ್ಞಾತ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಮೇಶ್ವರಂ ಕೆಫೆ ಸ್ಪೋಟ; ಎಲ್ಲ ಆಯಾಮಗಳಲ್ಲಿ ತನಿಖೆಗೆ ಮುಂದಾದ ಪೊಲೀಸರು
”ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ, ಪೊಲೀಸ್ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿದೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಟ್ವೀಟ್ ಮಾಡಿದ್ದಾರೆ.
”ಮಾರ್ಚ್ 1 ರಂದು ಮಧ್ಯಾಹ್ನ 1 ಗಂಟೆಗೆ ಬಾಂಬ್ ಸ್ಪೋಟವಾಗಿದೆ. ಈ ಸ್ಪೋಟದಲ್ಲಿ ಹೋಟೆಲ್ ಸಿಬ್ಬಂದಿ ಹಾಗೂ ಗ್ರಾಹಕರು ಸೇರಿದಂತೆ ಹೋಟೆಲ್‌ನಲ್ಲಿದ್ದ ಒಟ್ಟು 10 ಮಂದಿ ಗಾಯಗೊಂಡಿದ್ದಾರೆ. ಯಾವುದೇ ಜೀವಹಾನಿಯಾಗಿರುವುದಿಲ್ಲ. ಹೆಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಯುಎಇಎಸ್ ಅಡಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಜ್ಞರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ” ಎಂದು ಬೆಂಗಳೂರು ನಗರ ಪೊಲೀಸ್ ಮಾಹಿತಿ ಮಾಡಿದೆ.
VIDEO | Bengaluru cafe blast suspect caught on CCTV.
At least 10 people were injured in a low intensity bomb blast at the popular Rameshwaram Cafe in Bengaluru’s Whitefield locality on Friday. Police suspect that an improvised explosive device (IED) fitted with a timer inside a… pic.twitter.com/EWGzLAmy1M
— Press Trust of India (@PTI_News) March 2, 2024
ಇನ್ನು ಈ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ಮಧ್ಯಾಹ್ನ 1 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಯಲಿದೆ. ಸಭೆಯಲ್ಲಿ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಹಲವರು ಭಾಗಿಯಾಗಲಿದ್ದಾರೆ.