ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಮಾ. 04 ಮತ್ತು 05ರಂದು ಎರಡು ದಿನಗಳ ಕಾಲ ‘ಗ್ರಾಫಿಕ್ ಡಿಸೈನಿಂಗ್’ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಸಹಯೋಗದಲ್ಲಿ ಇದೇ ಮಾ. 04 ಮತ್ತು 05ರಂದು ಎರಡು ದಿನಗಳ ಕಾಲ ‘ಗ್ರಾಫಿಕ್ ಡಿಸೈನಿಂಗ್’ ಕುರಿತು ಕಾರ್ಯಾಗಾರ ನಡೆಯಲಿದೆ.
04ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಾಗಾರವನ್ನು ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಉದ್ಘಾಟಲಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಜಾವಾಣಿಯ ಗ್ರಾಫಿಕ್ ಡಿಸೈನರ್ ಮಂಜುನಾಥ ಹುಲಕೊಪ್ಪದ ಭಾಗವಹಿಸಲಿದ್ದಾರೆ. ಕಾರ್ಯಾಗಾರದ ಅಧ್ಯಕ್ಷತೆಯನ್ನು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ. ಓಂಕಾರ ಕಾಕಡೆ ವಹಿಸಲಿದ್ದು, ಸಮಾರಂಭದಲ್ಲಿ ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಲಕ್ಷ್ಮೀದೇವಿ ವೈ. ಸಹಾಯಕ ಪ್ರಾಧ್ಯಾಪಕರಾದ ಡಾ.ತಹಮೀನಾ ಕೋಲಾರ ಮತ್ತು ಸಂದೀಪ ನಾಯಕ, ಬೋಧಕ ಸಿಬ್ಬಂದಿ, ವಿವಿಧ ವಿಭಾಗಗಳ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.