ಕೆಎಸ್‌ಡಿಬಿ ನಿರ್ಮಿಸಿರುವ 36,789 ಮನೆಗಳು ಬಡ ಕುಟುಂಬಗಳಿಗೆ ಹಂಚಿಕೆ

Date:

Advertisements

ರಾಜ್ಯದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ (ಕೆಎಸ್‌ಡಿಬಿ) ನಿರ್ಮಿಸಿರುವ 36,789 ಮನೆಗಳನ್ನು ಬಡ ಕುಟುಂಬಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಪ್ರತಿ ಮನೆಗೆ ₹4.50 ಲಕ್ಷ ನಿಗದಿಯಾಗಿದ್ದು, ಅಷ್ಟು ಮೊತ್ತವನ್ನು ಫಲಾನುಭವಿಗಳು ಪಾವತಿಸಲು ಸಾಧ್ಯವಿಲ್ಲದ ಕಾರಣ, ಫಲಾನುಭವಿಗಳು ಕೇವಲ ₹1 ಲಕ್ಷ ಪಾವತಿಸಿದರೆ ಸಾಕು. ಉಳಿದ ಹಣವನ್ನು ಸರ್ಕಾರವೇ ಪಾವತಿಸುತ್ತದೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಮನೆಗಳ ಹಂಚಿಕೆಯ ಚಾಲನಾ ಕಾರ್ಯಕ್ರಮ ಶನಿವಾರ ನಡೆದಿದೆ. ಬಡ ಕುಟುಂಬಗಳ ಆರ್ಥಿಕ ಸಂಕಷ್ಟವನ್ನು ಅರಿತು, ಫಲಾನುಭವಿಗಳ ಪಾಲಿನ ವಂತಿಗೆ ಮೊತ್ತ ₹6,170 ಕೋಟಿಯನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸಲು ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕಚೇರಿ ವಿವರಿಸಿದೆ.

1,80,253 ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಮೊದಲನೇ ಕಂತು ₹500 ಕೋಟಿ ಬಿಡುಗಡೆ ಆಗಿದ್ದು, ಮೊದಲ ಹಂತದಲ್ಲಿ 36,789 ಮನೆಗಳನ್ನು ಈಗ ಹಂಚಿಕೆ ಮಾಡಲಾಗುತ್ತಿದೆ. ಕೆ.ಆರ್.ಪುರದ ನಗರೇಶ್ವರ ನಾಗೇನಹಳ್ಳಿಯಲ್ಲಿ 1,047 ಮನೆ ನಿರ್ಮಿಸಿದ್ದು, ಆ ಪೈಕಿ, ಶನಿವಾರ 480 ಮನೆ ಹಂಚಿಕೆ ಮಾಡಲಾಗಿದೆ. ಇದೇ ರೀತಿ ರಾಜ್ಯದಾದ್ಯಂತ ನಿರ್ಮಿಸಿರುವ ಮನೆಗಳನ್ನು ಏಕಕಾಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಂಚಿಕೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

Advertisements

ಸಿದ್ದರಾಮಯ್ಯ

“ಯೋಜನೆಯಡಿಯಲ್ಲಿ ಫಲಾನುಭವಿಗಳು ತಲಾ ₹4.50 ಲಕ್ಷ ಪಾವತಿಸಬೇಕಿತ್ತಾದರೂ ಇದೀಗ ₹1 ಲಕ್ಷ ಪಾವತಿಸಿದರೆ ಉಳಿದ ಮೊತ್ತ ಸರ್ಕಾರವೇ ಭರಿಸುತ್ತಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆಗೆ ₹7.50 ಲಕ್ಷ ವೆಚ್ಚವಾಗಲಿದ್ದು, ₹3 ಲಕ್ಷ ಸಬ್ಸಿಡಿ ಹೊರತು ಪಡಿಸಿದರೆ ಉಳಿದ ಮೊತ್ತ ಫಲಾನುಭವಿ ಕೊಡಬೇಕಿತ್ತು. ಬ್ಯಾಂಕ್ ಸಾಲವೂ ದೊರೆಯದೆ ಅಷ್ಟು ಕುಟುಂಬಗಳು ಸಂಕಷ್ಟ ಎದುರಿಸುತ್ತಿದ್ದವು. ಇದೀಗ ಸರ್ಕಾರದ ತೀರ್ಮಾನದಿಂದ 1,80,253 ಕುಟುಂಬಗಳಿಗೆ ನೆಮ್ಮದಿ ಸಿಕ್ಕಂತಾಗಿದೆ” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಕೊಳವೆಬಾವಿಯಿಂದ ನೀರು ಪೂರೈಸುವ ಟ್ಯಾಂಕರ್‌ಗಳು ಸರ್ಕಾರದ ಸುಪರ್ದಿಗೆ: ಡಿಸಿಎಂ ಶಿವಕುಮಾರ್

ಸಂಕಷ್ಟದಲ್ಲಿದ್ದ ಬಡ ಕುಟುಂಬಗಳಿಗೆ ಸೂರು ಕಲ್ಪಿಸುವ ತೀರ್ಮಾನ ನಮ್ಮ ಅವಧಿಯಲ್ಲಿ ಕೈಗೊಂಡಿದ್ದು ಸಂತೋಷ ತಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ನಮ್ಮ ಕಾಂಗ್ರೆಸ್ ಸರ್ಕಾರದ ಬಡವರ ಪರ ಕಾಳಜಿ, ಹಣಕಾಸು ಇಲಾಖೆ ಅಧಿಕಾರಿಗಳ ಸಹಕಾರದಿಂದ ಬಡವರು ಶಾಶ್ವತ ಸೂರು ಪಡೆದಂತಾಗಿದೆ. ಆ ಮೂಲಕ ಮುಖ್ಯಮಂತ್ರಿಗಳ‌ ಕನಸು ಮತ್ತು‌ ಕಾಳಜಿ ಸಾಕಾರಗೊಳ್ಳುತ್ತಿದೆ ಎಂದು ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

Download Eedina App Android / iOS

X