ಧಾರವಾಡ | ಬಡವರಿಗೆ ಸಹಾಯ ಮಾಡುವವರೇ ಛತ್ರಪತಿ: ಸಚಿವ ಸಂತೋಷ ಲಾಡ್

Date:

Advertisements

ಮರಾಠರು ಹಿಂದೂಗಳೇ ವಿನಃ ಹಿಂದುತ್ವವಾದಿಗಳಲ್ಲ. ಆದರೆ, ಇಂದು ಸಮಾಜದಲ್ಲಿ ವ್ಯವಸ್ಥಿತವಾಗಿ ಮರಾಠರು ಮುಸ್ಲಿಂ ವಿರೋಧಿಗಳು ಎಂದು ಬಿಂಬಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

ಧಾರವಾಡದ ಮರಾಠಾ ವಿದ್ಯಾ ಪ್ರಸಾರಕ ಮಂಡಳದಲ್ಲಿ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ ಶುಕ್ರವಾರ (ಮಾ.1) ನಡೆದ ಮರಾಠಾ ಜಾಗೃತಿ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಡೀ ದೇಶಕ್ಕೆ ಮೀಸಲಾತಿ ಕೊಟ್ಟ ಸಮಾಜ ನಮ್ಮದಾಗಿದೆ. ಆದರೆ, ಇಂದು ನಾವು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದೇವೆ. ಅಲ್ಲದೇ ಊಳುವವರಿಗೆ ಭೂಮಿ ನೀಡಿದ ಸಮಾಜ ನಮ್ಮದು. ಆದರೆ, ನಮಗೆ ಇಂದು ಜಾಗೆ ನೀಡುವಂತೆ ಸರಕಾರವನ್ನು ಕೇಳುವ ಪರಿಸ್ಥಿತಿ ಸಮಾಜಕ್ಕೆ ಬಂದೊದಗಿದೆ ಎಂದರು.

ಶಿವಾಜಿ ಜಯಂತಿ ಸಂದರ್ಭದಲ್ಲಿ ಹಿಂದುತ್ವದ ಬಗೆಗೆ ಸಾಕಷ್ಟು ಜನರು ಭಾಷಣ ಮಾಡುತ್ತಾರೆ. ಆದರೆ, ಅವರ ಮನೆಯಲ್ಲಿಯೇ ಶಿವಾಜಿ ಮಹಾರಾಜರ ಭಾವಚಿತ್ರವಿರುವುದಿಲ್ಲ. ಅದಕ್ಕಾಗಿ ಇತಿಹಾಸವನ್ನು ತಿರುಚಿ ಹೇಳುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಪ್ರತಿಯೊಬ್ಬ ಮರಾಠರು ಶಿವಾಜಿ ಮಹಾರಾಜರ ಇತಿಹಾಸವನ್ನು ತಿಳಿದುಕೊಳ್ಳಬೇಕು ಎಂದರು.

Advertisements

ಬಡವರಿಗೆ, ತೊಂದರೆಯಲ್ಲಿ ಇರುವವರಿಗೆ ಸಹಾಯ ಮಾಡುವವರೇ ಛತ್ರಪತಿ. ಆ ಕೆಲಸವನ್ನು ಶಿವಾಜಿ ಮಹಾರಾಜರು ಮಾಡಿದರು. ಅದಕ್ಕಾಗಿಯೇ ಅವರನ್ನು ಛತ್ರಪತಿ ಎಂದು ಕರೆಯಲಾಗುತ್ತದೆ. ಶಿವಾಜಿ ಮಹಾರಾಜರು ಅಷ್ಟೊಂದು ಬೆಳೆಯಲು ತಾಯಿ ಜೀಜಾಮಾತಾ ಕಾರಣ. ಆದ್ದರಿಂದ ಪ್ರತಿಯೊಂದು ಕಾರ್ಯಕ್ರಮದಲ್ಲಿ ನಾವು ಮಹಿಳೆಯರಿಗೆ ವಿಶೇಷ ಗೌರವ ನೀಡುತ್ತೇವೆ ಎನ್ನುವುದನ್ನು ಸಮಾಜದ ಬಾಂಧವರು ಅರಿತುಕೊಳ್ಳಬೇಕು ಎಂದರು.

ಸಮಾಜದ ಮಕ್ಕಳಿಗೆ ಶಿಕ್ಷಣ ಕೊಡುವ ಕೆಲಸ ಆಗಬೇಕು. ಅಲ್ಲದೇ ನಿರುದ್ಯೋಗಿ ಯುವಕರಿಗೆ ಉದ್ಯೋಗ ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನವನ್ನು ನಾನು ಮಾಡುತ್ತೇನೆ. ಸಮಾಜ ಒಗ್ಗಟ್ಟಾದಾಗ ಮಾತ್ರ ಅದರ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಾಗಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕಾಗಿದೆ ಎಂದು ಹೇಳಿದರು.

ಶಿವಾಜಿ ಜಯಂತಿ ಸೇರಿದಂತೆ ಇತರೆ ಮಹನೀಯರ ಜಯಂತಿ ಸಂದರ್ಭದಲ್ಲಿ ಡಿಜೆ ಹಾಡುಗಳಿಗೆ ಕುಡಿದು ಸಂಭ್ರಮಿಸಬಾರದು. ಇದು ಮಹನೀಯರಿಗೆ ಮಾಡುವ ಅಪಮಾನವಾಗಿದೆ. ದೇಶಪ್ರೇಮ ಹಾಗೂ ದೇಶಭಕ್ತಿ ಗೀತೆಗಳಿಗೆ ಹೆಜ್ಜೆ ಹಾಕಿ ಎಂದು ಸಚಿವ ಲಾಡ್ ಸಭಿಕರಲ್ಲಿ ಮನವಿ ಮಾಡಿದರು.

ಬೆಂಗಳೂರು ಗೋಸಾವಿ ಮಠದ ಮಂಜುನಾಥ ಭಾರತಿ ಸ್ವಾಮೀಜಿ ಮಾತನಾಡಿ, ಸಮಾಜದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅವುಗಳನ್ನು ಪರಿಹರಿಸಲು ಎಲ್ಲರೂ ಒಂದಾಗಿ ಶ್ರಮಿಸಬೇಕು. ಉತ್ತಮ ಸಮಾಜವನ್ನು ಎಲ್ಲರೂ ಸೇರಿ ಕಟ್ಟೋಣ ಎಂದರು.

ಇದೇ ಸಂದರ್ಭದಲ್ಲಿ ಸುಮಾರು 150ಕ್ಕೂ ಹೆಚ್ಚು ಸಮಾಜದ ಸಾಧಕರಿಗೆ ಸನ್ಮಾನಿಸಲಾಯಿತು. ಮರಾಠಾ ವಿದ್ಯಾಪ್ರಸಾರಕ ಮಂಡಳದ ಅಧ್ಯಕ್ಷ ಮನೋಹರ ಮೋರೆ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಾನಂದ ಸ್ವಾಮೀಜಿ, ಅನೀಲ ಪಾಟೀಲ, ಡಾ. ಮಯೂರ ಮೋರೆ, ಶಂಕರ ಶೇಳಕೆ, ಸುಭಾಸ ಶಿಂಧೆ, ನಾರಾಯಣ ವೈದ್ಯ, ಗಣೇಶ ಕದಂ, ಸುನೀಲ ದಳವಿ, ಸಂಭಾಜಿ ಘೋಡಸೆ, ಭೀಮಪ್ಪ ಕಸಾಯಿ, ರಾಜು ಬಿರಜನ್ನವರ, ಬಸವಂತ ಮಾಲನವರ, ಬಸವರಾಜ ಜಾಧವ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X