ಮಾರ್ಚ್ 14ರ ನಂತರವೂ 60% ಕನ್ನಡವುಳ್ಳ ನಾಮಫಲಕ ಹಾಕದಿದ್ರೆ ಮತ್ತೆ ಹೋರಾಟ; ಕರವೇ ಎಚ್ಚರಿಕೆ

Date:

Advertisements

ಮಳಿಗೆಗಳು, ವಾಣಿಜ್ಯ ಕಟ್ಟಡಗಳಲ್ಲಿ ಶೇ.60ರಷ್ಟು ಕನ್ನಡವುಳ್ಳ ನಾಮಫಲಕ ಅಳವಡಿಸಿಕೊಳ್ಳಲು ನೀಡಿದ್ದ ಗಡುವನ್ನ ಸರ್ಕಾರ ಮಾರ್ಚ್‌ 14ರವರೆಗೆ ವಿಸ್ತರಿಸಿದೆ. ಮಾರ್ಚ್ 14ರ ನಂತರವೂ ನಾಮಫಲಕಗಳು ಬದಲಾಗದೇ ಇದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಮತ್ತೆ ಹೋರಾಟ ನಡೆಸುತ್ತದೆ ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕಾ ಹೇಳಿಕೆ ನೀಡಿರುವ ನಾರಾಯಣಗೌಡ, “ರಾಜ್ಯ ಸರ್ಕಾರ ಸಮಗ್ರ ಕನ್ನಡ ಅನುಷ್ಠಾನ ವಿಧೇಯಕವನ್ನು ಮಂಡಿಸಿ, ಕಾನೂನನ್ನು ಜಾರಿಗೆ ತಂದಿದೆ. ಹೀಗಿದ್ದರೂ ಬೆಂಗಳೂರಿನಲ್ಲಿ ಇನ್ನೂ ಹಲವೆಡೆ ನಾಮಫಲಕಗಳು ಬದಲಾಗಿಲ್ಲ. ಮಾರ್ಚ್ 14ರ ಒಳಗೆ ಬದಲಾಗದಿದ್ದರೆ, ಕರವೇ ಹೋರಾಟದ ಬಿಸಿ ಮುಟ್ಟಿಸಲಿದೆ” ಎಂದಿದ್ದಾರೆ.

“ಕನ್ನಡ ವಿಧೇಯಕ ಜಾರಿಗೆ ಬಂದ ಹಿನ್ನೆಲೆಯಲ್ಲಿ ಮಾರ್ಚ್ 5ರಂದು ರಾಜ್ಯದ ಜಿಲ್ಲಾ ಕೇಂದ್ರಗಳು, ತಾಲ್ಲೂಕು ಕೇಂದ್ರಗಳಲ್ಲಿ ಕರವೇ ಕಾರ್ಯಕರ್ತರು ಜಾಗೃತಿ ಮೆರವಣಿಗಳನ್ನು ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ಕಾನೂನಿನ ಪ್ರಕಾರ ಶೇ.60 ರಷ್ಟು ಕನ್ನಡ ಅಕ್ಷರಗಳೊಂದಿಗೆ ಅಗ್ರಸ್ಥಾನದಲ್ಲಿ ಕನ್ನಡ ನಾಮಫಲಕ ಅಳವಡಿಸುವಂತೆ ಜಾಗೃತಿ ಮೂಡಿಸಲಾಗುತ್ತದೆ” ಎಂದು ಹೇಳಿದ್ದಾರೆ.

Advertisements

“ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಆಯಾ ಭಾಗರ ಸ್ಥಳೀಯ ಆಡಳಿತ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಸರ್ಕಾರದ ಕಾನೂನಿನ ಅನುಷ್ಠಾನದ ವಿಷಯದಲ್ಲಿ ಬೇಜವಾಬ್ದಾರಿ ತೋರಿದರೆ ಅಧಿಕಾರಗಳ ವಿರುದ್ಧವೂ ಕರವೇ ಹೋರಾಟ ಸಂಘಟಿಸಲಿದೆ” ಎಂದಿದ್ದಾರೆ.

“ರಾಜ್ಯದ ಪ್ರತಿ ನಗರ, ಪಟ್ಟಣ, ಹಳ್ಳಿಯ ನಾಮಫಲಕಗಳೂ ಕನ್ನಡೀಕರಣವಾಗುವವರೆಗೆ ಕರ್ನಾಟಕ ರಕ್ಷಣಾ ವೇದಿಕೆ ವಿರಮಿಸುವ ಪ್ರಶ್ನೆಯೇ ಇಲ್ಲ. ಪೊಲೀಸರ ಹತ್ತಾರು ಕೇಸುಗಳು, ಜೈಲು ಶಿಕ್ಷೆ ಎಲ್ಲವನ್ನು ಅನುಭವಿಸಿ ನಾವು ಹೋರಾಟ ರೂಪಿಸಿದ್ದೇವೆ. ನಾಮಫಲಕ ಅಭಿಯಾನ ನೂರಕ್ಕೆ ನೂರು ಯಶಸ್ವಿಯಾಗುವವರೆಗೆ ನಮ್ಮ ಹೋರಾಟ ಮುಂದುವರೆಯುತ್ತದೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X