ಬಿಎಸ್‌ವೈ ಭೇಟಿಯಾದ ಸೋಮಣ್ಣ- ಚರ್ಚೆಗೆ ಗ್ರಾಸ

Date:

Advertisements

ವರುಣ ಮತ್ತು ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಬಿಜೆಪಿ ನಾಯಕರುಗಳ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಸಚಿವ ವಿ ಸೋಮಣ್ಣ ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿ ಎಸ್‌ ಯಡಿಯೂರಪ್ಪರನ್ನು ಶನಿವಾರ ಭೇಟಿಯಾಗಿದ್ದಾರೆ. ಈ ಭೇಟಿಯೀಗ ಚರ್ಚೆಗೆ ಗ್ರಾಸವಾಗಿದೆ.

ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ಸಕ್ರಿಯ ರಾಜಕೀಯ ಚಟುವಟಿಕೆಯಿಂದ ವಿ ಸೋಮಣ್ಣ ದೂರು ಉಳಿದಿದ್ದರು. ಆದರೆ ಈಗ ದಿಡೀರ್ ಆಗಿ ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿರುವುದರಿಂದ ಈ ವಿಷಯ ಚರ್ಚೆಗೆ ಗ್ರಾಸವಾಗಿದೆ.

ಈ ವರ್ಷದಲ್ಲೇ ಲೋಕಸಭೆ ಚುನಾವಣೆ ನಡೆಯಲಿದೆ. ಈ ನಡುವೆ ಸೋಮಣ್ಣ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ. ಈ ನಿಟ್ಟಿನಲ್ಲಿ ಯಡಿಯೂರಪ್ಪ ಮತ್ತು ಸೋಮಣ್ಣ ಭೇಟಿ ಮಹತ್ವವನ್ನು ಪಡೆದುಕೊಂಡಿದೆ.

Advertisements

V Somanna Yediyurappa

ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ಬಿಎಸ್‌ವೈ ನಿವಾಸಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತುಮಕೂರು ಸಂಸದ ಜಿ ಎಸ್‌ ಬಸವರಾಜ, ಮಾಜಿ ಶಾಸಕ ಎಂ ಡಿ ಲಕ್ಷ್ಮೀ ನಾರಾಯಣ ಮತ್ತು ತಮ್ಮ ಪುತ್ರ ಅರುಣ್ಣ ಸೋಮಣ್ಣ ಜೊತೆ ವಿ ಸೋಮಣ್ಣ ತೆರಳಿದ್ದಾರೆ. ಎಲ್ಲ ಭಿನ್ನಾಭಿಪ್ರಾಯವನ್ನು ಬಿಟ್ಟು ರಾಜಕೀಯ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಇನ್ನು ವಿಧಾನಸಭೆ ಚುನಾವಣೆ ವೇಳೆಯಲ್ಲಿ ಆರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ವಿರುದ್ಧ ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಕಣ್ಣಕ್ಕೆ ಇಳಿಯಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ವಿಜಯೇಂದ್ರರನ್ನು ತಮ್ಮ ಸ್ವಕ್ಷೇತ್ರವಾದ ಶಿಕಾರಿಪುರದಿಂದ ಕಣ್ಣಕ್ಕೆ ಇಳಿಸಲು ಬಿಎಸ್‌ ಯಡಿಯೂರಪ್ಪ ಬಯಸಿದ್ದರು. ಈ ನಿಟ್ಟಿನಲ್ಲಿ ಹೈಕಮಾಂಡ್ ಮನವೊಲಿಸುವಲ್ಲಿಯೂ ಸಫಲರಾಗಿದ್ದರು. ಈ ಕಾರಣದಿಂದ ವಿ ಸೋಮಣ್ಣರನ್ನು ಸಿದ್ಧರಾಮಯ್ಯರ ವಿರುದ್ಧ ನಿಲ್ಲಿಸಲ್ಲಾಗಿತ್ತು. ಆದರೆ ಸೋಮಣ್ಣ ಸೋತು ತನ್ನ ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿ ಕಿಡಿಕಾರಿದ್ದರು.

ಭೇಟಿ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ವಿ ಸೋಮಣ್ಣ, “ನನಗೆ ಪಕ್ಷದ ನಾಯಕರ ಜೊತೆ ಮುನಿಸಿಲ್ಲ. ಇದೆಲ್ಲ ಮನೆಯೊಳಗೆ ನಡೆಯುವ ಜಗಳ. ಏನಾದರೂ ದೇಶದಲ್ಲಿ ಮತ್ತೆ ಬಿಜೆಪಿಯೇ ಅಧಿಕಾರ ಪಡೆಯಬೇಕು. ರಾಜ್ಯದ ಎಲ್ಲ 28 ಸ್ಥಾನದಲ್ಲಿಯೂ ನಾವೇ ಗೆಲ್ಲುವುದು ನಮ್ಮ ಗುರಿ. ತುಮಕೂರು ಕ್ಷೇತ್ರವನ್ನು ಬಿಜೆಪಿಗೆ ಬಿಡುವ ಮಾತುಕತೆ ನಡೆದಿಲ್ಲ. ಏನಾದರೂ ನಾನು ಪಕ್ಷದ ವರಿಷ್ಠರ ತೀರ್ಮಾನ ಒಪ್ಪಿ ಪಾಲಿಸುತ್ತೇನೆ,” ಎಂದರು.

Mayuri
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

Download Eedina App Android / iOS

X