ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಹಲವಾರು ಸೇವೆಗಳನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಮಿತ್ರ ಪೋರ್ಟಲ್‌ಅನ್ನು ಅಭಿವೃದ್ಧಿ ಪಡಿಸಿದೆ. ಪೋರ್ಟಲ್‌ಅನ್ನು ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ ಮಹಾದೇವಪ್ಪ ಅವರು ಮೈಸೂರಿನಲ್ಲಿ ಲೋಕಾರ್ಪಣೆ ಮಾಡಿದ್ದಾರೆ.
ಪೋರ್ಟಲ್ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವರು, “ಸಾರ್ವಜನಿಕರು ತಮಗೆ ಅವಶ್ಯಕವಿರುವ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಕುಂದುಕೊರತೆಗಳನ್ನು ದಾಖಲಿಸಲು ‘ಪಂಚಮಿತ್ರ’ ವೇದಿಕೆಯು ಅನುಕೂಲವಾಗಲಿದೆ. ಈ ಸೌಲಭ್ಯವನ್ನು ಎಲ್ಲಾ ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು, ಸಹಾಯಕ ಕಾರ್ಯದರ್ಶಿ ಕುಲದೀಪ್, ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಂ.ಎಸ್.ಗಿರಿಧರ್, ಬಿ.ಕೆ.ಮನು, ಸಿ.ಕೃಷ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಕೆ.ರುಕ್ಮಾಂಗದ, ಪ್ರಕಾಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.
Great respectes for this bold channel… Like to read it in English. I dont know Kannada