ಊಟ ಮಾಡಿ ಕೈ ತೊಳೆಯಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದ ಮಗಳನ್ನು ರಕ್ಷಣೆ ಮಾಡಲು ಹೋದ ತಂದೆ-ತಾಯಿಯೂ ಹೊಂಡಕ್ಕೆ ಬಿದ್ದಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮರಿಯಪ್ಪ(70), ಮುನಿಯಮ್ಮ(60) ಹಾಗೂ ಭಾರತಿ(40) ಮೃತ ದುರ್ದೈವಿಗಳು.
ಭಾರತಿ ಊಟ ಮಾಡಿ ಕೈ ತೊಳಯಲು ಹೋದಾಗ ಕೃಷಿ ಹೊಂಡದಲ್ಲಿ ಬಿದ್ದಿದ್ದಾಳೆ. ಮಗಳ ರಕ್ಷಣೆಗೆ ಕೂಡಲೇ ಧಾವಿಸಿದ ಮುನಿಯಮ್ಮ ಮತ್ತು ಮರಿಯಪ್ಪ ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕುಡಿಯುವ ನೀರಿಗಾಗಿ ಬಂಗಾರಪ್ಪನಗರ ನಿವಾಸಿಗಳ ಪರದಾಟ
ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಇನ್ನು ಈ ಬಗ್ಗೆ ಹೊಸಕೋಟೆ ಪೊಲೀಸರು ತನಿಖೆ ನಡೆಸಿದ್ದಾರೆ.