ಕೇಂದ್ರ ಸಚಿವ ಅನುರಾಗ್ ಠಾಕೂರ್‌ ವಿರುದ್ಧ ಎಫ್‌ಐಆರ್‌ ರದ್ದು; ದೆಹಲಿ ಪೊಲೀಸ್‌ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

Date:

Advertisements
  • 2020 ಜನವರಿ 27ರಂದು ದ್ವೇಷ ಭಾಷಣ ಮಾಡಿದ್ದ ಅನುರಾಗ್‌ ಠಾಕೂರ್‌ ಮತ್ತು ಸಂಸದ ಪರ್ವೇಶ್ ವರ್ಮಾ
  • 2022 ಜೂನ್ 13ರಂದು ಬೃಂದಾ ಕಾರಟ್, ಕೆ ಎಂ ತಿವಾರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ದೆಹಲಿ ಹೈಕೋರ್ಟ್

ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಬಿಜೆಪಿ ಸಂಸದ ಪರ್ವೇಶ್ ವರ್ಮಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ವಿಚಾರಣಾ ನ್ಯಾಯಾಲಯದ ನಿರಾಕರಣೆ ವಿರುದ್ಧದ ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಪಿಎಂ ನಾಯಕಿ ಬೃಂದಾ ಕಾರಟ್ ಸಲ್ಲಿಸಿರುವ ಮನವಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ.

ಕೇಂದ್ರ ಸಚಿವ ಅನುರಾಗ್‌ ಠಾಕೂರ್ ಹಾಗೂ ಸಂಸದ ಪರ್ವೇಶ್ ವರ್ಮಾ ಅವರು ಸಿಎಎ ವಿರೋಧಿ ಪ್ರತಿಭಟನೆಗಳ ಬಗ್ಗೆ ದ್ವೇಷದ ಭಾಷಣಗಳನ್ನು ಮಾಡಿರುವುದರ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರನ್ನೊಳಗೊಂಡ ಪೀಠವು, ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿ ಮೂರು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

ವಿಚಾರಣೆಯ ಸಂದರ್ಭದಲ್ಲಿ, ಇಬ್ಬರು ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿ ಅಗತ್ಯವಿದೆ ಎಂಬ ಮ್ಯಾಜಿಸ್ಟ್ರೇಟ್ ನಿಲುವನ್ನು ಪೀಠವು ಪ್ರಾಥಮಿಕವಾಗಿ ಗಮನಿಸಿತು.

Advertisements

ಕಳೆದ ವರ್ಷ ಜೂನ್ 13ರಂದು, ಇವರಿಬ್ಬರ ದ್ವೇಷಪೂರಿತ ಭಾಷಣಗಳ ವಿರುದ್ಧ ಸಿಪಿಎಂ ನಾಯಕರಾದ ಬೃಂದಾ ಕಾರಟ್ ಮತ್ತು ಕೆ ಎಂ ತಿವಾರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು.

ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದೆ, ಪ್ರಸ್ತುತ ನಿಜಾಂಶಗಳಲ್ಲಿ ಎಫ್‌ಐಆರ್ ದಾಖಲಿಸಲು ಸಕ್ಷಮ ಪ್ರಾಧಿಕಾರದಿಂದ ಕಾನೂನು ಮಂಜೂರಾತಿ ಪಡೆಯಬೇಕಾಗುತ್ತದೆ ಎಂದು ಹೇಳಿದೆ.

ಠಾಕೂರ್ ಮತ್ತು ವರ್ಮಾ ಅವರು “ನವದೆಹಲಿಯ ಎರಡು ವಿಭಿನ್ನ ಪ್ರತಿಭಟನಾ ಸ್ಥಳಗಳಲ್ಲಿ ಜನರನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ” ಎಂದು ಅರ್ಜಿದಾರರು ವಿಚಾರಣಾ ನ್ಯಾಯಾಲಯದ ಮುಂದೆ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

2020 ಜನವರಿ 27ರಂದು ರಾಷ್ಟ್ರ ರಾಜಧಾನಿಯ ರೈಥಾಲಾದಲ್ಲಿ ನಡೆದ ರ‍್ಯಾಲಿಯಲ್ಲಿ, ಅನುರಾಗ್‌ ಠಾಕೂರ್ ಅವರು ಶಾಹೀನ್ ಬಾಗ್‌ನ  ಸಿಎಎ ವಿರೋಧಿ ಪ್ರತಿಭಟನಾಕಾರರ ಮೇಲೆ ವಾಗ್ದಾಳಿ ನಡೆಸಿ “ದೇಶದ್ರೋಹಿಗಳಿಗೆ ಗುಂಡಿಕ್ಕಿ” ಎಂದು ಹೇಳಿ ಗುಂಪನ್ನು ಪ್ರಚೋದಿಸಿದರು ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಪರ್ವೇಶ್ ವರ್ಮಾ ಅವರು 2020 ಜನವರಿ 28ರಂದು ಶಾಹೀನ್ ಬಾಗ್‌ನಲ್ಲಿ ಪ್ರತಿಭಟನಾಕಾರರ ವಿರುದ್ಧ ಪ್ರಚೋದಕಕಾರಿ ಭಾಷಣ ಮಾಡಿದ್ದಾರೆ ಎಂದು ಅರ್ಜಿದಾರರು ತಿಳಿಸಿದ್ದಾರೆ.

2021ರ ಆಗಸ್ಟ್ 26ರಂದು ವಿಚಾರಣಾ ನ್ಯಾಯಾಲಯವು ಸಕ್ಷಮ ಪ್ರಾಧಿಕಾರವಾಗಿರುವ ಕೇಂದ್ರ ಸರಕಾರದಿಂದ ಅಗತ್ಯ ಮಂಜೂರಾತಿ ಪಡೆಯದ ಕಾರಣ ಅರ್ಜಿದಾರರ ದೂರನ್ನು ಸಮರ್ಥನೀಯವಲ್ಲ ಎಂಬ ಕಾರಣಕ್ಕೆ ವಜಾಗೊಳಿಸಿತ್ತು.

ತಮ್ಮ ದೂರಿನಲ್ಲಿ, ಬೃಂದಾ ಕಾರಟ್ ಮತ್ತು ತಿವಾರಿ ಅವರು ಇಬ್ಬರು ಬಿಜೆಪಿ ನಾಯಕರ ವಿರುದ್ಧ 153-ಎ (ಧರ್ಮ, ಜನಾಂಗ, ಜನ್ಮ ಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ಗಳನ್ನು ದಾಖಲಿಸಲು ಕೋರಿದ್ದಾರೆ. ವಿವಿಧ ಸೆಕ್ಷನ್‌ಗಳಡಿ ದಾಖಲಾಗುವ ಈ ಅಪರಾಧಗಳಿಗೆ ಗರಿಷ್ಠ ಶಿಕ್ಷೆ ಏಳು ವರ್ಷಗಳ ಜೈಲು ಶಿಕ್ಷೆಯಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X