ಮೀನಾಕ್ಷಿ ಲೇಖಿಗೆ ಕೈತಪ್ಪಿದ ಬಿಜೆಪಿ ಟಿಕೆಟ್: ಮಂಗಳೂರಿನಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮ ಮುಂದೂಡಿಕೆ!

Date:

Advertisements

ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ ಅಳೆದು ತೂಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿನ್ನೆ ಬಿಡುಗಡೆ ಮಾಡಿದೆ. ಅದರಂತೆ 33 ಹಾಲಿ ಸಂಸದರನ್ನು ಕೈಬಿಡಲಾಗಿದೆ.

ಈ ಪೈಕಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಕೂಡ ಒಬ್ಬರು. ಇವರ ಬದಲು ದೆಹಲಿ ಟಿಕೆಟ್ ಅನ್ನು ಸುಷ್ಮಾ ಸ್ವರಾಜ್ ಪುತ್ರಿ ಬಾನ್ಸುರಿ ಸ್ವರಾಜ್ ಅವರಿಗೆ ನೀಡಲಾಗಿದೆ. ಇತ್ತ, ಟಿಕೆಟ್ ಕೈತಪ್ಪುತ್ತಿದ್ದಂತೆ ಮಂಗಳೂರಿನಲ್ಲಿ ಮೀನಾಕ್ಷಿ ಲೇಖಿ ಅವರು ಭಾಗಿಯಾಗಬೇಕಿದ್ದ ಕಾರ್ಯಕ್ರಮವನ್ನು ಬಿಜೆಪಿ ಮುಂದೂಡಿದೆ.

ನಾಳೆ (ಮಾರ್ಚ್‌ 4) ಮಂಗಳೂರಿನ ಸಂಘನಿಕೇತನದಲ್ಲಿ ಮಂಗಳೂರಿನ ಬೂತ್ ಮಟ್ಟದ ಕಾರ್ಯಕರ್ತರ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಈ ಸಮಾವೇಶಕ್ಕೆ ಕೇಂದ್ರ ವಿದೇಶಾಂಗ ವ್ಯವಹಾರಗಳು ಮತ್ತು ಸಂಸ್ಕೃತಿ ಇಲಾಖೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಅವರನ್ನು ಆಹ್ವಾನಿಸಲಾಗಿತ್ತು. ಅವರು ಭಾಗಿಯಾಗುವುದು ಖಚಿತವಾಗಿತ್ತು. ಆದರೆ, ಇವರಿಗೆ ಟಿಕೆಟ್ ಕೈತಪ್ಪುತ್ತಿದ್ದಂತೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಈ ಬಗ್ಗೆ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

Advertisements

ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಿನ್ನೆ 195 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ನವದೆಹಲಿಯ ಸಂಸದೆ ಮೀನಾಕ್ಷಿ ಲೇಖಿಗೆ ಟಿಕೆಟ್ ಮಿಸ್ ಆಗಿದ್ದು, ಮಾಜಿ ಕೇಂದ್ರ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಪುತ್ರಿ ಬಾನ್ಸುರಿ ಸ್ವರಾಜ್‌ ಅವರಿಗೆ ಕ್ಷೇತ್ರದಲ್ಲಿ ಮಣೆ ಹಾಕಲಾಗಿದೆ.

ರಾಜ್‌ದೀಪ್ ರಾಯ್, ಹೋರೆನ್ ಸಿಂಗ್ ಬೇ, ಪಲ್ಲಬ್ ಲೋಚನ್ ದಾಸ್, ರಾಮೇಶ್ವರ್ ತೇಲಿ, ಗುಹರಾಮ್ ಅಜ್ಗಲ್ಲಿ, ಸುನಿಲ್ ಕುಮಾರ್ ಸೋನಿ, ಚುನ್ನಿ ಲಾಲ್ ಸಾಹು, ಮೋಹನ್ ಮಾಂಡವಿ, ಮಾಜಿ ಕೇಂದ್ರ ಸಚಿವ ಹರ್ಷವರ್ಧನ್, ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ, ಮೀನಾಕ್ಷಿ ಲೇಖಿ, ರಮೇಶ್ ಬಿಧುರಿ ಸೇರಿದಂತೆ ಒಟ್ಟು 33 ಹಾಲಿ ಸಂಸದರಿಗೆ 2024ರ ಲೋಕಸಭಾ ಚುನಾವಣೆಯ ಬಿಜೆಪಿ ಟಿಕೆಟ್ ಕೈತಪ್ಪಿದೆ. ಟಿಕೆಟ್ ಮಿಸ್ ಆದ ಬೆನ್ನಲ್ಲೇ ಹರ್ಷವರ್ಧನ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಇದನ್ನು ಓದಿದ್ದೀರಾ? ಲೋಕಸಭೆಗೆ ಟಿಕೆಟ್ ನೀಡಿದ ಬಿಜೆಪಿ: ವಿವಾದದ ಬೆನ್ನಲ್ಲೇ ‘ಸ್ಪರ್ಧಿಸಲ್ಲ’ ಎಂದ ಭೋಜ್‌ಪುರಿ ನಟ, ಗಾಯಕ!

ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಭೋಜ್‌ಪುರಿ ನಟ, ಗಾಯಕ ಪವನ್ ಸಿಂಗ್ ಅವರು ಅಸನ್ಸೋಲ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿತ್ತು. ತಮ್ಮ ಹಾಡುಗಳಲ್ಲಿ ಮಹಿಳೆಯರನ್ನು ಅವಹೇಳನಕಾರಿಯಾಗಿ ತೋರಿಸಿದ್ದಾನೆ ಎಂದು  ಟಿಎಂಸಿ ಆರೋಪ ಮಾಡಿದ ಬೆನ್ನಲ್ಲೇ,  ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಿಹಾರ ಎಸ್ಐಆರ್ | ʼಆಧಾರ್ʼ ಅನ್ನು ಪುರಾವೆಯಾಗಿ ಸ್ವೀಕರಿಸಲು ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶನ

ಬಿಹಾರ ಎಸ್ಐಆರ್‌ಗೆ ಪುರಾವೆಯಾಗಿ ಆಧಾರ್ ಅನ್ನು ಸ್ವೀಕರಿಸಬೇಕು ಎಂದು ಸುಪ್ರೀಂ ಕೋರ್ಟ್...

Download Eedina App Android / iOS

X