ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ಎನ್‌ಐಎಗೆ ಹೊಣೆ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಮಾರ್ಚ್ 1ರಂದು ಬೆಂಗಳೂರಿನ ಬ್ರೂಕ್‌ಫೀಲ್ಡ್ ಬಳಿಯಿರುವ ರಾಮೇಶ್ವರ ಕೆಫೆಯಲ್ಲಿ ನಡೆದ ಸ್ಫೋಟದಲ್ಲಿ 9 ಮಂದಿ ಗಾಯಗೊಂಡಿದ್ದಾರೆ.
ಮೂಲಗಳ ಪ್ರಕಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಸ್ಫೋಟದ ತನಿಖೆಯ ಹೊಣೆ ನೀಡಲಾಗಿದೆ. ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ಎನ್‌ಐಎ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎನ್‌ಐಎ ಅಧಿಕಾರಿಗಳು ಇನ್ನೆರಡು ದಿನಗಳಲ್ಲಿ ಅಧಿಕೃತವಾಗಿ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಯುಎಪಿಎ ಅಡಿ ಹೆಚ್ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಟೋಪಿ ಹಾಗೂ ಮಾಸ್ಕ್ ಧರಿಸಿದ್ದ ಅಪರಿಚಿತ ವ್ಯಕ್ತಿಯೊಬ್ಬ ಕೆಫೆಯಲ್ಲಿ ತಿಂಡಿ ಸೇವಿಸಿ ಚೀಲವಿಟ್ಟು ತೆರಳಿದ ಕೆಲವು ನಿಮಿಷಗಳ ನಂತರ ಸ್ಫೋಟವುಂಟಾಗಿತ್ತು.
ಆರೋಪಿಯ ಸುಳಿವು ದೊರಕಿದ್ದು, ಶೀಘ್ರದಲ್ಲಿಯೇ ಬಂಧಿಸುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ
