ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ.
ಎಕ್ಸ್‌ನಲ್ಲಿ ಬರೆದುಕೊಂಡಿರುವ ಸುಬ್ರಮಣಿಯನ್ ಸ್ವಾಮಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗಲು ಸಾಧ್ಯ ಎಂದು ಹೇಳಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ
ಎಕ್ಸ್‌ನಲ್ಲಿ ಪ್ರಜ್ಞಾ ಸಿಂಗ್ ಠಾಕೂರ್‌ಗೆ ಮತ್ತೆ ಭೋಪಾಲ್‌ನಲ್ಲಿ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಲಿಲ್ಲ. ಆರ್‌ಎಸ್‌ಎಸ್ ಅನ್ನು ಟೀಕಿಸಿದ ವ್ಯಕ್ತಿಗೆ ಅವಕಾಶ ನೀಡಲಾಗಿದೆ ಎಂದು ವ್ಯಕ್ತಿಯೊಬ್ಬರು ಟೀಕಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದರೆ, ವಾರಣಾಸಿಯಲ್ಲಿ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗುವುದು ಎಂದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ತಪ್ಪುಗಳನ್ನು ಕಟುವಾಗಿಯೇ ಟೀಕಿಸುವ ಸುಬ್ರಮಣಿಯನ್ ಸ್ವಾಮಿ, ಬಿಜೆಪಿಗರಿಗೆ ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ.
Only if BJP wins majority in 2024 and at same time Modi is defeated in Varanasi, will we able to achieve Hindu Rashtra. https://t.co/VADSZu4n6c
— Subramanian Swamy (@Swamy39) March 3, 2024
ಹಿಂದೂ ಹೆಮ್ಮೆಯ ಉಲ್ಬಣವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭವಿಷ್ಯವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಿದ್ದು ಮೋದಿ ಮೋಡಿಯಿಂದ ಅಲ್ಲ ಎಂದು ಟೀಕಿಸಿದ್ದ ಬಿಜೆಪಿಯ ಹಿರಿಯ ನಾಯಕ ಮತ್ತೊಮ್ಮೆ ಪ್ರಧಾನಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಮೋದಿ ನನ್ನನ್ನು ಕ್ಷಿಮಿಸುವುದಿಲ್ಲ ಎಂದಿದ್ದ ಪ್ರಜ್ಞಾ ಠಾಕೂರ್
ಇತ್ತೀಚಿಗೆ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ವಂಚಿತರಾದ ಸಂಸದೆ ಪ್ರಜ್ಞಾ ಠಾಕೂರ್ ಅವರು ಪ್ರಧಾನಿ ಮೋದಿ ನನ್ನನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದರು.
“ನಾನು ಈ ಹಿಂದೆಯೂ ಟಿಕೆಟ್ ಬಯಸಿರಲಿಲ್ಲ ಹಾಗೂ ಮುಂದೆಯೂ ಟಿಕೆಟ್ ಬಯಸುವುದಿಲ್ಲ. ನನ್ನ ಈ ಹಿಂದಿನ ಕೆಲವು ಹೇಳಿ ನನ್ನ ಈ ಹಿಂದಿನ ಕೆಲವು ಹೇಳಿಕೆಗಳಲ್ಲಿನ ಪದಗಳು ಪ್ರಧಾನಿ ನರೇಂದ್ರ ಮೋದಿಗೆ ಇಷ್ಟವಾಗಿರಲಿಕ್ಕಿಲ್ಲ. ನನ್ನನ್ನು ಕ್ಷಮಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರೂ ಕೂಡಾ. ಹೀಗಿದ್ದೂ,ನಾನು ಈ ಹಿಂದೆಯೆ ನನ್ನ ಹೇಳಿಕೆಗಳಿಗೆ ಕ್ಷಮೆ ಯಾಚಿಸಿದ್ದೇನೆ” ಎಂದಿದ್ದರು.
ಮುಂದಿನ ಲೋಕಸಭಾ ಚುನಾವಣೆಗಾಗಿ ಶನಿವಾರ ಬಿಜೆಪಿ ಬಿಡುಗಡೆ ಮಾಡಿರುವ 195 ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡಿರುವ ಹಾಲಿ 33 ಸಂಸದರ ಪೈಕಿ ಪ್ರಜ್ಞಾ ಠಾಕೂರ್ ಕೂಡಾ ಸೇರಿದ್ದಾರೆ.
