ಗುತ್ತಿಗೆದಾರರಿಂದ ಐದು ಪೈಸೆ ಲಂಚ ಪಡೆದಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ

Date:

Advertisements

ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ನಡೆದ ರಾಜ್ಯ ಗುತ್ತಿಗೆದಾರರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಪ್ಯಾಕೇಜ್ ಪದ್ದತಿ ರದ್ದುಗೊಳಿಸುವುದು, ಬಾಕಿ ಮೊತ್ತವನ್ನು ಪಾವತಿಸುವುದು ಸೇರಿದಂತೆ ಗುತ್ತಿಗೆದಾರರು ಮುಂದಿಟ್ಟ ಎಲ್ಲಾ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು.

Advertisements

“ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರೂ ಬಜೆಟ್ ನಲ್ಲೇ ಘೋಷಿಸಿದರು. ಆದರೆ ಇವತ್ತಿನವರೆಗೂ ಒಂದೇ ಒಂದು ರೂಪಾಯಿ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಎಷ್ಟೇ ಅಸಹಕಾರ ಕೊಟ್ಟರೂ ಗುತ್ತಿಗೆದಾರರ ಅಷ್ಟೂ ಹಣವನ್ನು ನಾವೇ ಹಂತ ಹಂತವಾಗಿ ಪಾವತಿಸುತ್ತೇವೆ” ಎಂದರು.

“2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ ಸಿಎಂ ಆಗಿರುವ ಅವಧಿಯಲ್ಲಾಗಲೀ ಬಿಲ್‌ ಪಾವತಿಗೆ ಸಂಬಂಧಿಸಿದಂತೆ ಎಲ್‌ಒಸಿ ನೀಡುವಲ್ಲಿ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ” ಎಂದು ಬಿಜೆಪಿಯವರ ಟೀಕೆಗಳಿಗೆ ಸಿಎಂ ಸವಾಲು ಹಾಕಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಬೋಸ್ ರಾಜು, ಜಮೀರ್ ಅಹಮದ್ ಖಾನ್ ಸೇರಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X