ಶಿವಮೊಗ್ಗ | ಗ್ರಾಮಾಂತರ ಪ್ರದೇಶಗಳಿಗೆ ಸತತ 7 ಗಂಟೆ 3 ಫೇಸ್ ವಿದ್ಯುತ್ ನೀಡಲು ರೈತರ ಒತ್ತಾಯ

Date:

Advertisements

ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಸತತ 7ಗಂಟೆ 3 ಫೇಸ್ ವಿದ್ಯುತ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪ್ರತಿಭಟನೆ ನಡೆಸಿತು.

ಗ್ರಾಮಾಂತರ ಪ್ರದೇಶಗಳಿಗೆ ಸತತ 7 ಗಂಟೆ 3ಫೇಸ್ ವಿದ್ಯುತ್‌, ಟಿಸಿಗಳ ಸ್ವಯಂ ಆರ್ಥಿಕ ಯೋಜನೆ ಕೈ ಬಿಡುವುದು, ಸುಟ್ಟುಹೋದ ಟಿಸಿಗಳನ್ನು ತಕ್ಷಣವೇ ಬದಲಾವಣೆ ಮಾಡಿಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಎಚ್.ಆರ್. ಬಸವರಾಜಪ್ಪನವರ ನೇತೃತ್ವದಲ್ಲಿ ರೈತರು ಶಿವಮೊಗ್ಗ ಕೆ.ಇ.ಬಿ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್.ಆರ್.ವೀರೇಂದ್ರರವರನ್ನು ಭೇಟಿ ಮಾಡಿ ಒತ್ತಾಯಿಸಿದ್ದಾರೆ.

ಕೆ.ಇ.ಬಿ ಕಾರ್ಯನಿರ್ವಾಹಕ ಇಂಜಿನಿಯರ್ ಎಚ್.ಆರ್.ವೀರೇಂದ್ರ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ತಿಳಿಸಿದ್ದಾರೆ ಎಂದು ಪ್ರತಿಭಟನಾನಿರತರು ಮಾಹಿತಿ ನೀಡಿದ್ದಾರೆ.

ಈ ಸಂಧರ್ಭದಲ್ಲಿ ಜಿಲ್ಲಾಧ್ಯಕ್ಷ ಕೆ.ರಾಘವೇಂದ್ರ, ಜಿಲ್ಲಾ ಕಾರ್ಯದರ್ಶಿ ಗುರುಶಾಂತ, ಶಿವಮೊಗ್ಗ ತಾಲೂಕು ಅಧ್ಯಕ್ಷ ಸಿ.ಚಂದ್ರಪ್ಪ, ತಾಲೂಕು ಕಾರ್ಯದರ್ಶಿ ಶಿವಮೂರ್ತಿ ಹಾಗೂ ರೈತರು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

ಉಡುಪಿ | ಉಚ್ಚಿಲ ದಸರಾ : ಇಂದು ವೈಭವದ ಭವ್ಯ ಶೋಭಾ ಯಾತ್ರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ...

Download Eedina App Android / iOS

X