2032ರ ವೇಳೆಗೆ ರಾಜ್ಯದ ಆರ್ಥಿಕತೆ 1 ಟ್ರಿಲಿಯನ್ ಡಾಲರ್ ಗಾತ್ರ: ಎಂ ಬಿ ಪಾಟೀಲ್‌ ಭರವಸೆ

Date:

Advertisements

ರಾಜ್ಯವನ್ನು 2032ರ ವೇಳೆಗೆ 1 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನು ಬೆಳೆಸುವ ಹೆಗ್ಗುರಿಯನ್ನು ಸರಕಾರ ಇಟ್ಟುಕೊಂಡಿದ್ದು, ಇದಕ್ಕಾಗಿ ಉದ್ಯಮ ವಲಯದಲ್ಲಿ ಅಸಾಂಪ್ರದಾಯಿಕ ಕ್ಷೇತ್ರಗಳತ್ತ ಗಮನಹರಿಸಲಾಗುತ್ತಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲಿನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಗ್ಲೋಬಲ್ ಬಿಝಿನೆಸ್ ಫೋರಂನ (ಜಿಬಿಎಫ್) 54ನೇ ಜಾಗತಿಕ ವ್ಯಾಪಾರ ಸಮಾವೇಶದಲ್ಲಿ ಮಾತನಾಡಿದರು.

“ಹೂಡಿಕೆಯ ಅಗಾಧ ಹರಿವಿನ ಜೊತೆಗೆ ಉದ್ಯೋಗಾವಕಾಶ ಸೃಷ್ಟಿ ಮತ್ತು ಆರ್ಥಿಕ ಬೆಳವಣಿಗೆ ಸಾಧ್ಯವಾಗಲಿದೆ. ಭಾರತದಲ್ಲಿ ಎರಡನೇ ಬಾರಿಗೆ ಹಾಗೂ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಈ ಸಮಾವೇಶದಲ್ಲಿ 30ಕ್ಕೂ ಹೆಚ್ಚಿನ ದೇಶಗಳ ಉನ್ನತ ಮಟ್ಟದ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ” ಎಂದು ತಿಳಿಸಿದರು.

Advertisements

“ರಾಜ್ಯದ ಆರ್ಥಿಕ ಬೆಳವಣಿಗೆಯ ದರವು ಸದ್ಯಕ್ಕೆ ಶೇ.18ರಷ್ಟಿದ್ದು, ಜಿಡಿಪಿಯಲ್ಲಿ ಕರ್ನಾಟಕವು ಇಡೀ ದೇಶದಲ್ಲಿ ಮೂರನೆಯ ಸ್ಥಾನದಲ್ಲಿ ಪ್ರತಿಷ್ಠಾಪಿತವಾಗಿದೆ. ಅಲ್ಲದೆ, ಇಲ್ಲಿನ ತಲಾವಾರು ಆದಾಯವು ಕಳೆದ 5 ವರ್ಷಗಳಲ್ಲಿ ಶೇ.62ರಷ್ಟು ಹೆಚ್ಚಳ ಕಂಡಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ

“ಸರಕಾರಿ ಮತ್ತು ಖಾಸಗಿ ವಲಯದ ಉತ್ಪಾದಕರಿಗೆ ಸರಕಾರದ ವತಿಯಿಂದ ಭೂಮಿ ಮತ್ತು ಇನ್ನಿತರ ಮೂಲಸೌಲಭ್ಯಗಳನ್ನು ಸುಗಮವಾಗಿ ಒದಗಿಸಲಾಗುವುದು. ಬೆಂಗಳೂರನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ಕೈಗಾರಿಕಾ ಕ್ರಾಂತಿ 4.0ಯನ್ನು ನನಸುಗೊಳಿಸಲು ಸಾವಿರಾರು ಎಕರೆ ಪ್ರದೇಶಗಳಲ್ಲಿ ಕೈಗಾರಿಕಾ ಪಾರ್ಕುಗಳನ್ನು ಸರಕಾರವು ಅಭಿವೃದ್ಧಿ ಪಡಿಸುತ್ತಿದೆ. ಉದ್ಯಮಿಗಳು ಪ್ಲಗ್ ಅಂಡ್ ಪ್ಲೇ ಮಾದರಿಯ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಉದ್ಯಮಗಳನ್ನು ಬೆಳೆಸಬೇಕೆನ್ನುವುದು ಇದರ ಹಿಂದಿರುವ ಗುರಿಯಾಗಿದೆ. ಈ ಎಲ್ಲ ಜಾಗಗಳಿಗೆ ಬಂದರು, ರೈಲು ಮತ್ತು ವೈಮಾನಿಕ ಸಂಪರ್ಕಗಳನ್ನು ಒದಗಿಸಿ ಪೂರೈಕೆ ಸರಪಳಿಯನ್ನು ಆಧುನೀಕರಣಗೊಳಿಸಲಾಗುವುದು” ಎಂದು ವಿವರಿಸಿದರು.

ಸಮಾವೇಶಕ್ಕೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಚಾಲನೆ ನೀಡಿದರು. ನ್ಯೂಯಾರ್ಕ್ ಡಬ್ಲ್ಯುಟಿಸಿ ಅಧ್ಯಕ್ಷ ಜಾನ್ ಡ್ರೀವ್, ಡಿಲೈಟ್ ಸಿಇಒ ರೋಮಲ್ ಶೆಟ್ಟಿ, ಬ್ರಿಗೇಡ್ ಗ್ರೂಪ್ ಕಾರ್ಯ ನಿರ್ವಾಹಕ ಅಧ್ಯಕ್ಷ ಎಂ ಆರ್ ಜಯಶಂಕರ್, ಜಂಟಿ ವ್ಯವಸ್ಥಾಪಕ ನಿರ್ದೇಶಕ ನಿರೂಪ್ ಶಂಕರ್, ಬೆಂಗಳೂರು ಡಬ್ಲ್ಯುಟಿಸಿ ವ್ಯವಸ್ಥಾಪಕ ನಿರ್ದೇಶಕ ವಿನೀತ್ ವರ್ಮಾ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X