ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಉಗಾರ ರಸ್ತೆಗೆ ಹೊಂದಿಕೊಂಡ ಭೂ ಒತ್ತುವರಿ ಪ್ರಶ್ನಿಸಿದ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಸಂತ್ರಸ್ತೆಯು ಸರ್ವೆ ನಂ.237/ಎ ಸರ್ಕಾರದಿಂದ ಜಮೀನು ಮಂಜೂರು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿತರು ಜಮೀನಿನ ಒತ್ತುವರಿ ಹಾಗೂ ರಸ್ತೆ ಬಂದ್ ಮಾಡಿದ್ದರಿಂದ ಕೇಳಲು ಹೋದ ಸಂತ್ರಸ್ತೆಯನ್ನು ವಿವಸ್ತ್ರಗೊಳಿಸಿದ್ದಲ್ಲದೆ ಹಲ್ಲೆಯನ್ನೂ ನಡೆಸಿದ್ದರು ಎನ್ನಲಾಗಿತ್ತು.
ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣ, ದೃಶ್ಯ ಮಾಧ್ಯಮಗಳಲ್ಲಿ ಹರಿದಾಡಿದ್ದರಿಂದ, ಬೆಳಗಾವಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಗೂ ತಾಲೂಕು ಆಡಳಿತ ಗಂಭೀರವಾಗಿ ಪರಿಗಣಿಸಿ ಸ್ಥಳ ಪರಿಶೀಲನೆ ನಡೆಸಿ ಜಮೀನು ಹಾಗೂ ರಸ್ತೆ ಸರಿಪಡಿಸುವ ಕಾರ್ಯ ಮಾರ್ಚ್ 1ರಂದು ಆರಂಭಿಸಿದ್ದರು.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಪಿಲಿಚಾಮುಂಡಿ ದೇವಸ್ಥಾನದ ಭಂಡಾರ ಮನೆ ಧ್ವಂಸ; ಮೂವರ ಬಂಧನ
ಪ್ರಕರಣದಲ್ಲಿ ಮಹಿಳೆ 13 ಜನರ ವಿರುದ್ಧ ದೂರು ನೀಡಿದ್ದು, ಅದರಲ್ಲಿ ಶುಕ್ರವಾರ ತಡ ರಾತ್ರಿ ಪೊಲೀಸರು ಬೀರಪ್ಪ ನಾಗನೂರ ಹಾಗೂ ಆನಂದ ಹಾದಿಮನಿ ಎಂಬ ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಉಳಿದ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿರುವುದಾಗಿ ತಿಳಿದುಬಂದಿದೆ.
