ಪಾಕ್‌ ಪರ ಘೋಷಣೆ ಆರೋಪ | ಜನಾಕ್ರೋಶಕ್ಕೆ ಮಣಿದ ಸರ್ಕಾರ, ಮೂವರು ಆರೋಪಿಗಳ ಬಂಧನ: ಆರ್‌ ಅಶೋಕ್‌

Date:

Advertisements

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂರು ಆರೋಪಿಗಳನ್ನು ಬಂಧಿಸಿದೆ ಎಂದು ಆರ್‌ ಅಶೋಕ್‌ ಹೇಳಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಎಫ್‌ಎಸ್‌ಎಲ್ ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ ಎಫ್‌ಎಸ್‌ಎಲ್ ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ”‌ ಎಂದು ಪ್ರಶ್ನಿಸಿದ್ದಾರೆ.

“ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ IPC ಯ ಸೆಕ್ಷನ್ 124A ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಸಹ ಈ ಪ್ರಕರಣದಲ್ಲಿ ಶಾಮೀಲು ಮಾಡಬೇಕು. ಇದರ ಜೊತೆಗೆ 25 ಜನರಿಗೆ ಪಾಸ್ ನೀಡಿ ಸುಮಾರು ನೂರು ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು” ಎಂದು ಆಗ್ರಹಿಸಿದ್ದಾರೆ.

Advertisements

“ಈ ಇಡೀ ಪ್ರಕರಣ ಕಾಂಗ್ರೆಸ್‌ ಪಕ್ಷದ ದೇಶಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆಯನ್ನ ಬರೀ ಕರ್ನಾಟಕ ಅಲ್ಲ, ಇಡೀ ದೇಶದ ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ” ಎಂದಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X