- ಡಿ ಕೆ ಶಿ ಪ್ರಕರಣದ ಆದೇಶ ಕಾಯ್ದಿರಿಸಿದ ರಾಜ್ಯ ಹೈಕೋರ್ಟ್
- ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್ ಪೀಠ
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಅಂತ್ಯಗೊಳಿಸಿರುವ ಹೈಕೋರ್ಟ್ ತನ್ನ ಆದೇಶ ಕಾಯ್ದಿರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸರ್ಕಾರ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿ ಕೆ ಶಿವಕುಮಾರ್ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿದ ನ್ಯಾ. ಕೆ. ನಟರಾಜನ್ ಅವರಿದ್ದ ಪೀಠ ಡಿ ಕೆ ಶಿವಕುಮಾರ್ ಮತ್ತು ಸಿಬಿಐ ಪರ ವಕೀಲರ ವಾದ ಆಲಿಸಿ ತನ್ನ ಆದೇಶವನ್ನ ಕಾಯ್ದಿರಿಸಿದೆ. ಜೊತೆಗೆ ಸಿಬಿಐ ತನಿಖೆಗೆ ಇದ್ದ ತಡೆಯಾಜ್ಞೆಯನ್ನೂ ಹೈಕೋರ್ಟ್ ವಿಸ್ತರಣೆ ಮಾಡಿದೆ.