ಬೆಂಗಳೂರು ಜೈಲಿನ ಕೈದಿಗಳನ್ನು ಉಗ್ರ ಕೃತ್ಯಕ್ಕೆ ಬಳಕೆ ಆರೋಪ; 7 ರಾಜ್ಯಗಳಲ್ಲಿ ಎನ್‌ಐಎ ಶೋಧಕಾರ್ಯ

Date:

Advertisements

ಕಾರಾಗೃಹದ ಕೈದಿಗಳು ಭಯೋತ್ಪಾದಕ ಸಂಚಿನಲ್ಲಿ ಭಾಗಿಯಾಗಿರುವ ಶಂಕಿತರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ, ಏಳು ರಾಜ್ಯಗಳ ನಾನಾ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶೋಧಕಾರ್ಯ ನಡೆಸಿದೆ.

ಬೆಳಗ್ಗೆಯಿಂದ ಬೆಂಗಳೂರು ಮತ್ತು ತಮಿಳುನಾಡು ಸೇರಿದಂತೆ ಇತರ ರಾಜ್ಯಗಳಲ್ಲಿ ದಾಳಿಗಳು ನಡೆಯುತ್ತಿವೆ. ಮಾ.4ರ ರಾತ್ರಿ 8 ಗಂಟೆಗೆ ಪರಪ್ಪನ ಅಗ್ರಹಾರದಲ್ಲಿ ಎನ್​ಐಎ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆವರೆಗೂ ತನಿಖೆ ನಡೆಸಿದ್ದು, ನಾಸೀರ್ ಸೇರಿದಂತೆ ಅನೇಕರ ವಿಚಾರಣೆ ನಡೆಸಿದ್ದಾರೆ.

ಈ ವರ್ಷದ ಜನವರಿ 12ರಂದು, ಬೆಂಗಳೂರು ಲಷ್ಕರ್-ಎ-ತೊಯ್ಬಾ ಜೈಲು ಆಮೂಲಾಗ್ರೀಕರಣ ಮತ್ತು ‘ಫಿದಾಯೀನ್’ ದಾಳಿಯ ಸಂಚಿನ ಪ್ರಕರಣದಲ್ಲಿ ಜೀವಾವಧಿ ಅಪರಾಧಿ ಮತ್ತು ಇಬ್ಬರು ತಲೆಮರೆಸಿಕೊಂಡವರು ಸೇರಿದಂತೆ ಎಂಟು ಮಂದಿ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಚಾರ್ಜ್‌ಶೀಟ್ ಸಲ್ಲಿಸಿದೆ.

Advertisements

ಚಾರ್ಜ್‌ಶೀಟ್ ಮಾಡಿರುವ ಆರೋಪಿಗಳಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ಟಿ ನಾಸೀರ್ 2013 ರಿಂದ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದು, ಜುನೈದ್ ಅಹ್ಮದ್ ಅಲಿಯಾಸ್ ಜೆಡಿ ಮತ್ತು ಸಲ್ಮಾನ್ ಖಾನ್ ವಿದೇಶಕ್ಕೆ ಪರಾರಿಯಾಗಿರುವ ಶಂಕೆ ಇದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೂರು ವರ್ಷದ ಮಗುವಿಗೆ ದೌರ್ಜನ್ಯ ಪ್ರಕರಣ: ತಾಯಿ, ಆಕೆಯ ಪ್ರಿಯಕರನ ಬಂಧನ

ಉಳಿದವರನ್ನು ಸೈಯದ್ ಸುಹೇಲ್ ಖಾನ್ ಅಲಿಯಾಸ್ ಸುಹೇಲ್, ಮೊಹಮ್ಮದ್ ಉಮರ್ ಅಲಿಯಾಸ್ ಉಮರ್, ಜಾಹಿದ್ ತಬ್ರೇಜ್ ಅಲಿಯಾಸ್ ಜಾಹಿದ್, ಸೈಯದ್ ಮುದಾಸಿರ್ ಪಾಷಾ ಮತ್ತು ಮೊಹಮ್ಮದ್ ಫೈಸಲ್ ರಬ್ಬಾನಿ ಅಲಿಯಾಸ್ ಸಾದತ್ ಎಂದು ಗುರುತಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X