ಸಾಫ್ಟ್‌ವೇ‌ರ್ ಉನ್ನತೀಕರಣದ ಸಲುವಾಗಿ 10 ದಿನಗಳ ಕಾಲ ಆನ್‌ಲೈನ್ ಸೇವೆಗಳ ಅಲಭ್ಯತೆ

Date:

Advertisements

ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ನಿಮಿತ್ತ ಮಾರ್ಚ್ 10 ರಿಂದ 19ರವರೆಗೆ ಒಟ್ಟು ಹತ್ತು ದಿನಗಳ ಕಾಲ ರಾಜ್ಯದ ಎಲ್ಲ ಎಸ್ಕಾಂ ಆನ್‌ಲೈನ್ ಸೇವೆಗಳು ನಗರ ಪುದೇಶದ ಗ್ರಾಹಕರಿಗೆ ಲಭ್ಯವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

“ರಾಜ್ಯದ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ಒಟ್ಟು ಹತ್ತು ದಿನಗಳ ಕಾಲ ವಿದ್ಯುತ್ ಬಿಲ್‌ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸೇರಿದಂತೆ ಯಾವುದೇ ಆನ್‌ಲೈನ್ ಸೇವೆಗಳು ಈ ಅವಧಿಯಲ್ಲಿ ಲಭ್ಯವಿರುವುದಿಲ್ಲ. ಆನ್‌ಲೈನ್ ಸೇವೆಗಳು ಮಾತ್ರವೇ ತಾತ್ಕಾಲಿಕವಾಗಿ ಸ್ಥಗಿತಗೊಂಡಿರುತ್ತವೆಯೇ ಹೊರತು ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಆಗಲಿ, ಕಡಿತವಾಗಲಿ ಮಾಡುವುದಿಲ್ಲ” ಎಂದು ಹೇಳಿದೆ.

“ತಂತ್ರಾಂಶವು ಕಾರ್ಯಾರಂಭಗೊಂಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು” ಎಂದು ಪ್ರಕಟಣೆ ತಿಳಿಸಿದೆ.

Advertisements

“ಸಾಫ್ಟ್‌ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದಿಲ್ಲ. ಈ ಸಂದರ್ಭದಲ್ಲಿ ಮಾಪಕ ಓದುಗರು ಗ್ರಾಹಕರಿಗೆ ಬಿಲ್‌ಗಳನ್ನು ನೀಡಲಿದ್ದಾರೆ. ಆದರೆ, ಈ ಬಿಲ್‌ಗಳನ್ನು ಮಾರ್ಚ್ 20ರ ನಂತರವೇ ತಂತ್ರಾಂಶದಲ್ಲಿ ಅಪಲೋಡ್ ಮಾಡಲು ಸಾಧ್ಯವಾಗಲಿದೆ” ಎಂದು ಹೇಳಿದೆ.

ಯಾವ ನಗರಗಳಲ್ಲಿ ಆನ್‌ಲೈನ್‌ ಸೇವೆ ಇರುವುದಿಲ್ಲ?

ಬೆಸ್ಕಾಂ: ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಶಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆ.ಜಿ.ಎಫ್, ಚಳ್ಳಕೆರೆ, ಕುಣಿಗಲ್, ಹರಪ್ಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಹಾಗೂ ಗೌರಿಬಿದನೂರು.

ಸೆಸ್ಕ್‌: ಮೈಸೂರು, ಮಳವಳ್ಳಿ, ನಂಜನಗೂಡು, ಮಂಡ್ಯ, ಹುಣಸೂರು, ಚಾಮರಾಜನಗರ, ಕೆ.ಆರ್.ನಗರ, ಅರಸೀಕೆರೆ, ಮಡಿಕೇರಿ, ಕೊಳ್ಳೆಗಾಲ, ಹಾಸನ ಹಾಗೂ ಚನ್ನರಾಯಪಟ್ಟಣ.

ಮೆಸ್ಕಾಂ: ಮಂಗಳೂರು, ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಶಿಕಾರಿಪುರ, ಸಾಗರ, ಶಿವಮೊಗ್ಗ, ಭದ್ರಾವತಿ ಹಾಗೂ ಚಿಕ್ಕಮಗಳೂರು.

ಜೆಸ್ಕಾಂ: ಗುಲ್ಬರ್ಗ, ಮಾನವಿ, ಸಿಂಧನೂರು, ಬೀದರ್‌, ಗಂಗಾವತಿ, ಸೇಡಂ, ಬಸವಕಲ್ಯಾಣ, ವಾಡಿ, ಅಲನಾಡ್, ಭಾಲ್ಕಿ, ಶಹಾಬಾದ್, ಶಹಾಪುರ, ಶೋರಾಪುರ, ಸಿರಗುಪ್ಪಾ, ಕಂಪ್ಲಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಹುಮ್ಮಾಬಾದ್ ಹಾಗೂ ಹೊಸಪೇಟೆ.

ಈ ಸುದ್ದಿ ಓದಿದ್ದೀರಾ? ಸಾಲು ಸಾಲು ರಜೆ | ಕೆಎಸ್‌ಆರ್‌ಟಿಸಿಯಿಂದ 1,500 ವಿಶೇಷ ಬಸ್‌ ಸಂಚಾರ

ಹೆಸ್ಕಾಂ: ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಾರವಾರ, ನಿಪ್ಪಾಣಿ, ಜಮಖಂಡಿ, ಬೈಲಹೊಂಗಲ, ಲಕ್ಷ್ಮೀಶ್ವರ, ನರಗುಂದ, ರಾಮದುರ್ಗ, ಚಿಕ್ಕೋಡಿ, ಗುಳೇದಗುಡ್ಡ, ಮಹಾಲಿಂಗಪುರ, ಅಥಣಿ, ಭಟ್ಕಳ, ದಾಂಡೇಲಿ, ಇಂಡಿ, ಸವದತ್ತಿ, ಸವನೂರು, ಸಿರ್ಸಿ, ಕುಮಟಾ, ಬಾಗಲಕೋಟೆ, ರಬಕವಿ-ಬನಹಟ್ಟಿ, ಗದಗ, ಗೋಕಾಕ್, ಹಾವೇರಿ, ಇಳಕಲ್, ಮುಧೋಳ, ರಾಣೆಬೆನ್ನೂರು ಹಾಗೂ ವಿಜಯಪುರ ಪಟ್ಟಣದಲ್ಲಿ ಆನ್ ಲೈನ್ ಸೇವೆಗಳು ಲಭ್ಯವಿರುವುದಿಲ್ಲ.

ಈ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಪರಿಣಿತಿಹೊಂದಿದ ಮಾಹಿತಿ ತಂತ್ರಜ್ಞರ(ಐಟಿ) ತಂಡ 24/7 ಕಾರ್ಯನಿರ್ವಹಿಸಲಿದೆ. ಗ್ರಾಹಕರು ಸೇವಾ ಸ್ಥಗಿತ ಕಾಲದಲ್ಲಿ ಸಹಕರಿಸಕು ಎಂದು ಮನವಿ ಮಾಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X