ನಮ್ಮ ಸರ್ಕಾರ ಇದ್ದಾಗ ಶಾಂತಿ ಇತ್ತು, ಕಾಂಗ್ರೆಸ್‌ ಬಂದ ಮೇಲೆ ಬಾಂಬ್ ಸ್ಫೋಟಿಸುತ್ತಿವೆ: ಜೆ ಪಿ ನಡ್ಡಾ ಆರೋಪ

Date:

Advertisements

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವ ರಾಜ್ಯಸಭಾ ಸದಸ್ಯರಿರುವ ಕಾಂಗ್ರೆಸ್ ಪಕ್ಷದವರನ್ನು ರಾಜ್ಯದ ಜನತೆ ಬೆಂಬಲಿಸುವುದಿಲ್ಲ. ನಮ್ಮ ಸರಕಾರ ಇದ್ದಾಗ ಶಾಂತ ಪರಿಸ್ಥಿತಿ ನೆಲೆಸಿತ್ತು. ಈಗ ಬಾಂಬ್ ಸ್ಫೋಟಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಕಿಡಿಕಾರಿದರು.

ಚಿಕ್ಕೋಡಿಯಲ್ಲಿ ಮಂಗಳವಾರ ನಡೆದ ಬಿಜೆಪಿ ಬೂತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಪಾಕಿಸ್ತಾನದ ಪರ ಇರುವವರನ್ನು ಭಾರತಮಾತೆ ಎಂದೂ ಕ್ಷಮಿಸುವುದಿಲ್ಲ” ಎಂದರು.

“ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ, ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿ ರದ್ದು ಸೇರಿದಂತೆ ವಿವಿಧ ಭರವಸೆಗಳನ್ನು ಈಡೇರಿಸಿ ಬಿಜೆಪಿ ನುಡಿದಂತೆ ನಡೆದಿದೆ. ದೂರದೃಷ್ಟಿಯಿರುವ ಬಿಜೆಪಿಯನ್ನು ಜನತೆ ಬೆಂಬಲಿಸುವ ವಿಶ್ವಾಸವಿದೆ” ಎಂದು ಹೇಳಿದರು.

Advertisements

“ಬಡವರು, ಮಹಿಳೆಯರು (ನಾರಿಶಕ್ತಿ), ರೈತರು, ಯುವಜನತೆಯ ಆಶಯಗಳನ್ನು ಈಡೇರಿಸಿದ ಪಕ್ಷವಾಗಿ ಬಿಜೆಪಿ ಬೆಳೆದಿದೆ. ಬಿಜೆಪಿ ಸಿದ್ಧಾಂತ ಆಧರಿಸಿದ ಪಕ್ಷ. ಮುಸ್ಲಿಮ್ ಮಹಿಳೆಯರಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ನಾವು ಹೇಳಿದ್ದೆವು. ತ್ರಿವಳಿ ತಲಾಖ್ ಪದ್ಧತಿಯನ್ನು ನಾವು ರದ್ದು ಮಾಡಿದ್ದೇವೆ” ಎಂದು ತಿಳಿಸಿದರು.

“ಕಾಂಗ್ರೆಸ್ ಭ್ರಷ್ಟಾಚಾರ, ಕಮಿಷನ್, ಕೌಟುಂಬಿಕವಾದದ ಪಕ್ಷ. 10 ವರ್ಷಗಳ ಹಿಂದೆ ಭಾರತವನ್ನು ಅಸಮರ್ಪಕ ನೀತಿಯುಳ್ಳ ದೇಶವಾಗಿ ನೋಡಲಾಗುತ್ತಿತ್ತು. ಸಮರ್ಥ ನಿರ್ಧಾರ ತೆಗೆದುಕೊಳ್ಳಲಾಗದ ದೇಶ ಎಂದೇ ಭಾರತವನ್ನು ಬಿಂಬಿಸುವ ಸ್ಥಿತಿ ಹಿಂದೆ ಇತ್ತು. 2014ರ ಬಳಿಕ ಮೋದಿಯವರ ನೇತೃತ್ವದಲ್ಲಿ ಭಾರತವು ಬೆಳೆದುನಿಂತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಬ್ಬರಿ ಖರೀದಿ, ಅಧಿಕಾರಿಗಳ ಅಸಡ್ಡೆ, ಅನ್ನದಾತ ಅನಾಥ

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾತನಾಡಿ, “ಲೋಕಸಭಾ ಚುನಾವಣೆಗೆ ಕೇವಲ 50-60 ದಿನಗಳು ಮಾತ್ರ ಬಾಕಿ ಇದೆ. ಬಿಜೆಪಿ- ಜೆಡಿಎಸ್ ಒಂದಾಗಿ ರಾಜ್ಯದ ಎಲ್ಲ 28 ಕ್ಷೇತ್ರಗಳನ್ನು ಗೆಲ್ಲಲು ಶಪಥ ಮಾಡಿ ಹೊರಟಿದ್ದೇನೆ” ಎಂದರು.

“ಹಿಂದೂಗಳು ದಾನವಾಗಿ ಕೊಟ್ಟ 2 ಎಕರೆ ಜಾಗದಲ್ಲಿ ಆರಂಭಿಸಿದ್ದ ಪಶು ಆಸ್ಪತ್ರೆಯನ್ನು ಜಮೀರ್ ಅಹ್ಮದ್ ಅವರು ಕಿತ್ತುಕೊಂಡು ಅಲ್ಪಸಂಖ್ಯಾತರಿಗೆ ಕೊಡುತ್ತಿದ್ದಾರೆ. ಅಲ್ಪಸಂಖ್ಯಾತರ ಓಲೈಕೆ ರಾಜಕೀಯಕ್ಕೆ ತಕ್ಕ ಉತ್ತರವನ್ನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು ಕೊಡಬೇಕಿದೆ” ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X