ಅಪರಿಚಿತ ವ್ಯಕ್ತಿಯೊಬ್ಬ ಬ್ರೀಡ್ಜ್ ಮೇಲಿಂದ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಬಳಿ ನಡೆದಿದೆ.
ಅಪರಿಚಿತ ವ್ಯಕ್ತಿಯೋರ್ವ ಏಕಾಏಕಿ ವಿಂಡ್ಸರ್ ಮ್ಯಾನರ್ ಸೇತುವೆ ಮೇಲಿನಿಂದ ಕಾರಿನ ಮೇಲೆ ಬಿದ್ದಿದ್ದಾನೆ. ವ್ಯಕ್ತಿ ಬಿದ್ದ ರಭಸಕ್ಕೆ ಚಲಿಸುತ್ತಿದ್ದ ಕಾರಿನ ಗಾಜು ಪುಡಿ ಪುಡಿಯಾಗಿದೆ. ಕೆಳಗೆ ಬಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈ ಸುದ್ದಿ ಓದಿದ್ದೀರಾ? ಮಗನ ಕೊಂದ ಸಿಇಒ | ಮಾನಸಿಕ ಆರೋಗ್ಯ ತಪಾಸಣೆಗೆ ಗೋವಾ ಕೋರ್ಟ್ ಅನುಮತಿ
ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿ ಕಾರಿನ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದನು. ಕೂಡಲೇ, ಪೊಲೀಸರು ವ್ಯಕ್ತಿಯನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸೇರಿಸಿದರು. ಆದರೆ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಹೈಗ್ರೌಂಡ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತ ವ್ಯಕ್ತಿ ಯಾರು ಎಂಬ ಬಗ್ಗೆ ಮಾಹಿತಿ ಇಲ್ಲ. ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿ ಬಿದ್ದನಾ? ಅಥವಾ ಆತ್ಮಹತ್ಯೆಗೆ ಯತ್ನಿಸಿದ್ದಾನಾ ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ.