ಅಂಗಡಿ ಮುಂಗಟ್ಟುಗಳ ಹೆಸರು ಕನ್ನಡದಲ್ಲಿರಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದಿಂದ ನಗರದ ನಾಯಕ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
“ಡಿಸೆಂಬರ್ 27ರಂದು ಕನ್ನಡ ನಾಮಫಲಕ ಕಡ್ಡಾಯ ಹೋರಾಟದಲ್ಲಿ ನೂರಾರು ಕನ್ನಡ ಕಾರ್ಯಕರ್ತರು ಜೈಲು ಸೇರಿದ್ದರು. ಈ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಕಾನುನಾಗಿ ಜಾರಿಯಾಗಿದೆ. ಈ ಕಾನೂನು ಪರಿಪೂರ್ಣವಾಗಿ ಜಾರಿಯಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ಕನ್ನಡಿಗರ ಮೇಲಿದೆ. ಬೇರೆ ಭಾಷೆಯ ನಾಮಫಲಕಗಳು ಕನ್ನಡಕ್ಕೆ ಅಗೌರವವಾಗಿದ್ದು, ಕರ್ನಾಟಕದಲ್ಲಿ ಕನ್ನಡದಲ್ಲೇ ನಾಮಫಲಕ ಇರಬೇಕು ಎಂಬ ಅಭಿಯಾನವನ್ನು ಕರ್ನಾಟಕ ರಕ್ಷಣ ವೇದಿಕೆ ರಾಜ್ಯಾದಾದ್ಯಂತ ವಿಸ್ತರಿಸುತ್ತಿದ್ದು, ಎಲ್ಲರಿಗೂ ಅರಿವು ಮೂಡಿಸುವ ಕೆಲಸ ಮಾಡಲಿದೆ” ಎಂದು ಮನವಿಯಲ್ಲಿ ವಿವರಿಸಿದ್ದಾರೆ.
“ನಾಳೆಯಿಂದ ಎಲ್ಲ ಉದ್ಯಮಿಗಳು, ವ್ಯಾಪಾರಸ್ಥರು, ಶಿಕ್ಷಣ ಸಂಸ್ಥೆಗಳು, ಖಾಸಗಿ ಆಸ್ಪತ್ರೆಗಳು, ಕೈಗಾರಿಕೆಗಳು, ತಮ್ಮ ಸಂಸ್ಥೆಯ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡವಿರಬೇಕು. ಕನ್ನಡಕ್ಕೆ ಮೊದಲ ಸ್ಥಾನ ಇರಬೇಕು. ಇದನ್ನು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು ಎಂಬುದು ರಕ್ಷಣ ವೇದಿಕೆಯ ಉದ್ದೇಶವಾಗಿದ್ದು, ಈ ಕಾನೂನನ್ನು ಉಲ್ಲಂಘಿಸಿದರೆ ಮುಂಬರುವ ದಿನಗಳಲ್ಲಿ ವೇದಿಕೆ ತೀವ್ರ ಹೋರಾಟ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದೆ.
ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ₹5,300 ಕೋಟಿ ಘೋಷಣೆ; ಅನುದಾನ ಬಿಡುಗಡೆಗೆ ರೈತ ಸಂಘ ಆಗ್ರಹ
ವೇದಿಕೆಯ ಪ್ರಮುಖರಾದ ಮಂಜುನಾಥ್, ಧನಂಜಯ್, ಪ್ರಶಾಂತ್, ಮಹಿಳಾ ಘಟಕಾಧ್ಯಕ್ಷೆ ಜ್ಯೋತಿ ಸೋಮಶೇಖರ್, ಲೀಲಾವತಿ ಮೊದಲಾದದ್ದರು