ರಾಜ್ಯ ಪಠ್ಯಕ್ರಮದ 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು ಪಡಿಸಿದ ಹೈಕೋರ್ಟ್

Date:

Advertisements

5, 8, 9 ಮತ್ತು 11 ನೇ ತರಗತಿಗೆ ಬೋರ್ಡ್ ಪರೀಕ್ಷೆ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಮಾರ್ಚ್‌ 6ರಂದು ಆದೇಶ ಹೊರಡಿಸಿದೆ.

ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9ನೇ ತರಗತಿಗಳ ಮಕ್ಕಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ಶಿಕ್ಷಣ ಕಾಯ್ದೆಯಡಿ 2023ರ ಅಕ್ಟೋಬರ್ 6 ಮತ್ತು 9 ರಂದು ರಾಜ್ಯ ಸರ್ಕಾರ ಎರಡು ಸುತ್ತೋಲೆಗಳನ್ನು ಹೊರಡಿಸಿತ್ತು. ಈ ಸುತ್ತೋಲೆಯಲ್ಲಿ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ತೀರ್ಮಾನಿಸಿದ ಬಗ್ಗೆ ಮಾಹಿತಿ ನೀಡಿತ್ತು. ಇದನ್ನು ಪ್ರಶ್ನಿಸಿ, ಡಿಸೆಂಬರ್ 2023ರಲ್ಲಿ ಕರ್ನಾಟಕ ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ (ರುಪ್ಸಾ) ಒಕ್ಕೂಟ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿದಾರರ ಪರ ವಕೀಲ ಸುದರ್ಶನ್ ವಾದ ಮಂಡಿಸಿದ್ದರು.

ಮಾರ್ಚ್‌ 6ರಂದು ನ್ಯಾಯಮೂರ್ತಿ ರವಿ ಹೊಸಮನಿ ನೇತೃತ್ವದ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿ, ತೀರ್ಪು ನೀಡಿದೆ. ಆದೇಶದಿಂದ ಇದೇ ಮಾರ್ಚ್ 9 ರಿಂದ 11 ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳು ರದ್ದಾಗಲಿದೆ. ಇನ್ನು ನ್ಯಾಯಾಲಯದ ಆದೇಶದ ಪ್ರತಿ ಲಭ್ಯವಾಗಬೇಕಿದ್ದು, ಈಗಾಗಲೇ ಆದೇಶ ಹೊರಬಿದ್ದಿದೆ.

Advertisements

ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಸಿದ್ಧಪಡಿಸಿರುವುದಾಗಿ ಸರ್ಕಾರದ ಸುತ್ತೋಲೆ ತಿಳಿಸುತ್ತದೆ. ಇದು ಕೇವಲ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಅನ್ವಯವಾಗುತ್ತದೆ. ಖಾಸಗಿ ಶಾಲೆಗಳ ಪಠ್ಯಕ್ರಮ ಹಾಗೂ ಸರ್ಕಾರಿ ಶಾಲೆಗಳ ಪಠ್ಯಕ್ರಮ ವಿಭಿನ್ನವಾಗಿವೆ. ಕಲಿಕಾ ಚೇತರಿಕೆ ಪಠ್ಯಕ್ರಮದ ಪ್ರಶ್ನೆಗಳಿಗೆ ಖಾಸಗಿ ಶಾಲಾ ಮಕ್ಕಳು ಉತ್ತರಿಸುವುದು ಕಷ್ಟ. ಹಾಗಾಗಿ, ಎಲ್ಲ ಮಕ್ಕಳಿಗೂ ಅನ್ವಯವಾಗುವಂತೆ ಬೋರ್ಡ್ ಮಟ್ಟದ ಪರೀಕ್ಷೆ ನಡೆಸುವುದಕ್ಕೆ ಅವಕಾಶ ನೀಡಬಾರದು” ಎಂದು ಒಕ್ಕೂಟ ಮನವಿ ಮಾಡಿತ್ತು.

ಈ ಸುದ್ದಿ ಓದಿದ್ದೀರಾ? ತುಘಲಕ್ ದರ್ಬಾರ್: ಬೆಂಗಳೂರಿನ ಯುಬಿ ಸಿಟಿ ಮಾಲ್‌ನಲ್ಲಿ ಪ್ರತಿ ಗಂಟೆಗೆ ₹1,000 ಪಾರ್ಕಿಂಗ್ ಶುಲ್ಕ

ಸಾಮಾನ್ಯ ಪಠ್ಯದಿಂದಲೇ ಕಲಿಕಾ ಚೇತರಿಕೆ ಪಠ್ಯಕ್ರಮ ಸಿದ್ಧಪಡಿಸಲಾಗಿದೆ. ಕಲಿಕಾ ಚೇತರಿಕೆ ಕೂಡಾ ಪಠ್ಯಕ್ರಮದ ಭಾಗ. ಮಕ್ಕಳ ಬುದ್ಧಿಮತ್ತೆಯನ್ನು ಸಕಾರಾತ್ಮಕವಾಗಿ ವೃದ್ಧಿಸುವ ನಿಟ್ಟಿನಲ್ಲಿ ಇದನ್ನು ರೂಪಿಸಲಾಗಿದೆ” ಎಂದು ಸರ್ಕಾರ ಪರ ವಕೀಲರು ವಾದಿಸಿದ್ದರು.

ವಿದ್ಯಾರ್ಥಿಗಳಿಗೆ ನೀಡುವ ಪ್ರಶ್ನೆ ಪತ್ರಿಕೆಗಳಲ್ಲಿ ಪಠ್ಯಕ್ರಮದ ಹೊರತಾಗಿ ಬೇರೆ ಪ್ರಶ್ನೆಗಳಿಲ್ಲ. ಇದರಿಂದ, ಬೋರ್ಡ್ ಪರೀಕ್ಷೆಗೆ ಕಲಿಕಾ ಚೇತರಿಕೆ ಪಠ್ಯಕ್ರಮದಿಂದ ಪ್ರಶ್ನೆಗಳನ್ನು ಪಡೆದುಕೊಂಡಿರುವುದು ಸರಿಯಿದೆ. ಹಾಗಾಗಿ, ಬೋರ್ಡ್‌ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಬೇಕು” ಎಂದು ಹೇಳಿದ್ದರು.

ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಸರ್ಕಾರದ ಆದೇಶ ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದರೋಡೆ ಮಾಡಿ ಕೊಡುಗೆ ನೀಡುವ ಮಾಡರ್ನ್ ರಾಬಿನ್ ಹುಡ್- ಮೋದಿ!

ಇಂಗ್ಲೆಂಡಿನ ಜನಪದ ಕಳ್ಳ ರಾಬಿನ್ ಹುಡ್ ಶ್ರೀಮಂತರ ಬಂಗಲೆಗಳನ್ನು ದರೋಡೆ ಮಾಡಿ...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ: ಕರಾವಳಿ, ಒಳನಾಡಿನ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್

ಕರ್ನಾಟಕದಾದ್ಯಂತ ಆಗಸ್ಟ್ 17ರಿಂದ 21ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ...

Download Eedina App Android / iOS

X