ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಗೆಜೆಟ್ ಮತ್ತು ಸ್ಥಳ ನಿಯುಕ್ತಿ ಆದೇಶ ವಾಪಸ್: ಅನಿರ್ದಿಷ್ಟಾವಧಿ ಧರಣಿ

Date:

Advertisements

ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ಆದೇಶದ ಗೆಜೆಟ್ ಮತ್ತು ಸ್ಥಳ ನಿಯುಕ್ತಿಯ ವೇಳಾಪಟ್ಟಿಯನ್ನು ಹೊರಡಿಸಿ ನೇಮಕಾತಿ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ಕೈಗೊಂಡಿದ್ದಾರೆ. ಅವರ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಮನವಿ ಸ್ವೀಕರಿಸಿದ ಅಧಿಕಾರಿಗಳು ಉನ್ನತ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದ್ದಾರೆ.

ಸ್ಥಳ ನಿಯುಕ್ತಿಯ ಸಮಸ್ಯೆ ಬಗ್ಗೆ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿ ರವಿ ಎಂಬುವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “2021ರಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕರ 26 ವಿಷಯಗಳ 1242 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯಾಗಿ, 2023ರ ಮಾರ್ಚ್‌ 3ರಂದು ಅಂತಿಮ ಆಯ್ಕೆ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಈ ಆಯ್ಕೆ ಪಟ್ಟಿಯಲ್ಲಿ ಒಟ್ಟು 1208 ಮಂದಿ ಅಭ್ಯರ್ಥಿಗಳು ಎಲ್ಲಾ ರೀತಿಯಲ್ಲೂ ಆಯ್ಕೆಯಾಗಿದ್ದಾರೆ. ವರ್ಷಾನುಗಟ್ಟಲೆ ನನೆಗುದಿಗೆ ಬಿದ್ದಿದ್ದ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯನ್ನು ಸರ್ಕಾರವು 2023ರ ನವೆಂಬರ್‌ 4ರಂದು ವಿಶೇಷ ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಿತ್ತು” ಎಂದು ತಿಳಿಸಿದರು.

ಶಿಕ್ಷಣ ಇಲಾಖೆಗೆ ಮನವಿ

“ಉನ್ನತ ಶಿಕ್ಷಣ ಇಲಾಖೆಯೂ ಕೂಡ ಹೊಸದಾಗಿ ಆಯ್ಕೆಗೊಂಡಿರುವ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳಿಗೆ ಸ್ಥಳನಿಯುಕ್ತಿಗೊಳಿಸುವ ಸಲುವಾಗಿ 2024ರ ಫೆಬ್ರವರಿ 26ರಂದು ಹೊರಡಿಸಿದ ಅಧಿಕೃತ ಜ್ಞಾಪನ ಪತ್ರವನ್ನು ಒಂದೇ ದಿನದಲ್ಲಿ ಹಿಂಪಡೆದಿದೆ. ಇಲಾಖೆಯ ಅಧಿಕೃತ ಜ್ಞಾಪನ ಪತ್ರವನ್ನು ಹಿಂಪಡೆಯಲು ಕಾರಣವೇನು? ಮರುದಿವಸ ಅಂದರೆ, ಫೆಬ್ರವರಿ 27ರಂದು ಪ್ರಕಟವಾದ ಇಲಾಖೆಯ ಅಧಿಕೃತ ಜ್ಞಾಪನ ಪತ್ರದಲ್ಲಿ ಹೊಸದಾಗಿ ಆಯ್ಕೆಗೊಂಡಿರುವ ಸಹಾಯಕ ಪ್ರಾಧ್ಯಾಪಕರುಗಳ ಸ್ಥಳನಿಯುಕ್ತಿಗೆ ಸಂಬಂಧಿಸಿದಂತೆ ಪ್ರತ್ಯೇಕ ವೇಳಾಪಟ್ಟಿ ಪ್ರಕಟಿಸುವಂತೆ ಸೂಚಿಸಿದ್ದಾರೆ” ಎಂದು ಹೇಳಿದರು.

Advertisements

ಸಹಾಯಕ ಪ್ರಾಧ್ಯಾಪಕ 2 1ಸಹಾಯಕ ಪ್ರಾಧ್ಯಾಪಕ 3 1ಸಹಾಯಕ ಪ್ರಾಧ್ಯಾಪಕ 5 1ಸಹಾಯಕ ಪ್ರಾಧ್ಯಾಪಕ 2

“ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್‌ ಅವರು ಡಿಸೆಂಬರ್ ತಿಂಗಳ ಅಂತ್ಯಕ್ಕೆ ಆದೇಶ ಕೊಡಲಾಗುವುದೆಂದು ಭರವಸೆ ನೀಡಿದ್ದರು. ಬಳಿಕ ಜನವರಿ, ಫೆಬ್ರವರಿ ಹೀಗೆ ತಿಂಗಳುಗಳನ್ನು ದೂಡುತ್ತಾ ಬಂದಿದ್ದು, ಫೆ. 26ರಂದು ಅಧಿಕೃತ ಆದೇಶ ಬಿಡುಗಡೆ ಮಾಡಿದ್ದರಾದರೂ ಮರುದಿನವೇ ಆದೇಶವನ್ನು ಹಿಂಪಡೆದಿದ್ದಾರೆ. ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಚಿವರು ಯಾರದೋ ಪ್ರಭಾವಿಗಳ ಒತ್ತಡಕ್ಕೆ ಮಣಿದಿರಬಹುದು. ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ ನೆಪದಲ್ಲಿ ಆದೇಶವನ್ನು ಹಿಂಪಡೆದಿದ್ದಾರೆ” ಎಂದು ಆರೋಪಿಸಿದರು.

“ಲೋಕಸಭಾ ಚುನಾವಣೆ ಮುಗಿದ ಬಳಿಕ ಬೇರೆ ಬೇರೆ ರೀತಿಯ ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ನಾಳೆ ನಾಳೆ ಎಂದು ಮುಂದೂಡುತ್ತ ಆಯ್ಕೆಯಾಗಿರುವ ಸಹಾಯಕ ಪ್ರಾಧ್ಯಾಪಕರ ನೇಮಕ ಮಾಡಲು ಅನ್ಯಾಯ ಎಸಗುತ್ತಿದ್ದಾರೆ. ಹೀಗೆ ಮುಂದುವರೆದರೆ ನಮ್ಮ ಭವಿಷ್ಯ ಡೋಲಾಯಮಾನವಾಗುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

ಇತರೆ ಮೀಸಲಾತಿ ಹೊಂದಿರುವ 50 ಮಂದಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ಆಯ್ಕೆಯಾಗಿರುವ 908 ಮಂದಿ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳಿಗೆ ಅನ್ಯಾಯ ಎಸಗುತ್ತಿದ್ದಾರೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ₹5,300 ಕೋಟಿ ಘೋಷಣೆ; ಅನುದಾನ ಬಿಡುಗಡೆಗೆ ರೈತ ಸಂಘ ಆಗ್ರಹ

“ಉನ್ನತ ಶಿಕ್ಷಣ ಸಚಿವರು ಕೊಟ್ಟ ಮಾತಿಗೆ ಬದ್ಧವಾಗಿದ್ದರೆ 2024ರ ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಗೆ ಬರುವ ಮುನ್ನವೆ, ಯಾವುದೇ ತೊಂದರೆ ಇಲ್ಲದ ಆದೇಶ ಪಡೆಯಲು ಸಿದ್ಧವಾಗಿರುವ 908 ಮಂದಿ ಅಭ್ಯರ್ಥಿಗಳಿಗೆ ಕೂಡಲೇ ನೇಮಕಾತಿ ಆದೇಶದ ರಾಜ್ಯಪತ್ರವನ್ನು ಹೊರಡಿಸುವಂತಹ ಇಚ್ಛಾಶಕ್ತಿಯನ್ನು ತೋರಿಸಬೇಕು. ಸರ್ಕಾರವು ಕೂಡಲೇ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

ನೇಮಕಾತಿ ಆದೇಶಕ್ಕಾಗಿ ಕಾಯುತ್ತಿರುವ ಬಹುತೇಕ ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X