ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. 2002ರಿಂದ ಹಲವು ಬಾರಿ ಸ್ಪರ್ಧಿಸಿರುವುದರಿಂದ ರಾಹುಲ್ ಇಲ್ಲಿಂದಲೇ ಸ್ಪರ್ಧಿಸಿದ್ದಾರೆ ಎಂದು ಹೇಳಿದ್ದಾರೆ.
ದೆಹಲಿಯಿಂದ ಸಭೆ ಮುಗಿಸಿಕೊಂಡು ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಪ್ರದೀಪ್ ಸಿಂಘಾಲ್, ಅಮೇಥಿಯಿಂದ ರಾಹುಲ್ ಗಾಂಧಿ ಪಕ್ಷದ ಅಭ್ಯರ್ಥಿಯಾಗುತ್ತಾರೆ. ಅವರ ಹೆಸರನ್ನು ಶೀಘ್ರದಲ್ಲೇ ಘೋಷಿಸಲಾಗುತ್ತದೆ ಎಂದು ಸಿಂಘಾಲ್ ಹೇಳಿದರು.
ರಾಹುಲ್ ಗಾಂಧಿ 2002 ರಿಂದ 2019ರವರೆಗೆ ಅಮೇಥಿಯ ಲೋಕಸಭಾ ಸದಸ್ಯರಾಗಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಪರಾಭವಗೊಂಡಿದ್ದರು. ಪ್ರಸ್ತುತ ಕೇರಳದ ವಯನಾಡು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ರಾಯ್‌ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ
ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಈ ಬಾರಿ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕಾರಣ ಈ ಬಾರಿ ರಾಯ್‌ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುವ ಸಾಧ್ಯತೆಯಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!
ರಾಯ್‌ಬರೇಲಿಯಿಂದ 1952ರಿಂದ 2019ರವರೆಗೂ ನೆಹರು ಕುಟುಂಬದ ಫಿರೋಜ್ ಗಾಂಧಿ, ಇಂದಿರಾ ಗಾಂಧಿ, ಅರುಣ್ ನೆಹರು, ಸೋನಿಯಾ ಗಾಂಧಿ ಅವರು 12 ಬಾರಿ ಸೇರಿ 17 ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. 1977 ಜನತಾ ಅಭ್ಯರ್ಥಿ ಹಾಗೂ 1996 ಹಾಗೂ 1998 ರಲ್ಲಿ ಮಾತ್ರ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದರು.
ಕ್ಷೇತ್ರದಲ್ಲಿ ಗಾಂಧಿ ಕುಟುಂಬದವರನ್ನು ಹೆಚ್ಚು ಗೆಲ್ಲಿಸಿದ ಕಾರಣ ಇತ್ತೀಚಿಗೆ ರಾಯ್‌ಬರೇಲಿಯಲ್ಲಿ ಭಾವನಾತ್ಮಕವಾಗಿ ಪ್ರಿಯಾಂಕಾ ಗಾಂಧಿ ಸಾರ್ವಜನಿಕ ಭಾಷಣ ಮಾಡಿದ್ದರು.
