ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕ್ ಪಕ್ಷದಿಂದ ಡೊನಾಲ್ಡ್ ಟ್ರಂಪ್‌ಗೆ ಪ್ರಬಲ ಸ್ಪರ್ಧಿಯಾಗಿದ್ದ ಭಾರತೀಯ ಮೂಲದ ನಿಕ್ಕಿ ಹ್ಯಾಲೆ ಪ್ರಾಥಮಿಕ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸಿದ ನಂತರ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ನಿಕ್ಕಿ ಹ್ಯಾಲೆ ಕಣದಿಂದ ಹಿಂದೆ ಸರಿಯುತ್ತಿರುವ ಕಾರಣ 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಜೋ ಬೈಡನ್ ಹಾಗೂ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ತೀವ್ರ ಪೈಪೋಟಿ ಎದುರಾಗಲಿದೆ.
ಅಧ್ಯಕ್ಷೀಯ ಚುನಾವಣಾ ಹಿನ್ನೆಲೆ ಇಂದು ಹಲವು ರಾಜ್ಯಗಳಲ್ಲಿ ನಡೆದ ಪ್ರಾಥಮಿಕ ಚುನಾವಣೆಗಳಲ್ಲಿ 15ಕ್ಕೂ ಹೆಚ್ಚು ರಾಜ್ಯಗಳಲ್ಲಿ ರಿಪಬ್ಲಿಕನ್ ಪಕ್ಷದ ಡೋನಾಲ್ಡ್ ಟ್ರಂಪ್ ಹಾಗೂ ಡೆಮಾಕ್ರೆಟಿಕ್ ಪಕ್ಷದ ಜೋ ಬೈಡನ್ ಗೆಲುವುಗಳಿಸಿದ್ದಾರೆ. ಇಬ್ಬರು ಸ್ಪರ್ಧಿಗಳು ಓಕ್ಲಾಓಮಾ, ವಿರ್‌ಜೇನಿಯಾ, ನಾರ್ಥ್ ಕರೊಲಿನಾ ಹಾಗೂ ತೆನ್ನಿಸ್ಸೀ ರಾಜ್ಯಗಳಲ್ಲಿ ಜಯ ಸಾಧಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!
ಇಂದು ನಡೆಯುವ ಸಾರ್ವಜನಿಕ ಭಾಷಣದಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ನಿಕ್ಕಿ ಹ್ಯಾಲೆ ಚುನಾವಣಾ ಕಣದಿಂದ ಹಿಂದೆ ಸರಿಯುವುದಾಗಿ ಘೋಷಿಸಲಿದ್ದಾರೆ ಎಂದು ವಾಲ್‌ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.
ನಿಕ್ಕಿ ಹ್ಯಾಲೆ ಇಂದಿನ ಪ್ರಾಥಮಿಕ ಸುತ್ತಿನ ಚುನಾವಣೆಯಲ್ಲಿ ಕ್ಯಾಲಿಫೋರ್ನಿಯಾ, ಅಲಸ್ಕಾ, ಮೆಸ್ಸಚುಸೆಟ್ಸ್, ಟೆಕ್ಸ್‌ಸ್,ವರ್ಜೇನಿಯಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಹಿನ್ನಡೆಯಲ್ಲಿದ್ದಾರೆ.
2024ರ ಚುನಾವಣಾ ಕಣದಲ್ಲಿ ಹಾಲಿ ಅಧ್ಯಕ್ಷ ಜೋ ಬೈಡನ್ ವಿರುದ್ಧ ಪ್ರಬಲ ಎದುರಾಳಿಯಾಗಿರುವ ಡೊನಾಲ್ಡ್ ಟ್ರಂಪ್ ವಲಸೆ ಹಾಗೂ ಆರ್ಥಿಕತೆ ಸಮಸ್ಯೆಗಳನ್ನು ತಮ್ಮ ಚುನಾವಣಾ ಪ್ರಚಾರದ ಪ್ರಮುಖ ವಿಷಯವಾಗಿಸಿಕೊಂಡಿದ್ದಾರೆ.
2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ವಿರುದ್ಧ ನಿಕ್ಕಿ ಹ್ಯಾಲೆ ಗೆಲುವು ಸಾಧಿಸಿದ್ದರು.ಅಧ್ಯಕ್ಷೀಯ ಚುನಾವಣೆ ಈ ವರ್ಷದ ನವೆಂಬರ್‌ನಲ್ಲಿ ನಡೆಯಲಿದೆ.
